AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಭರ್ಜರಿ ಸಿಕ್ಸ್: ಕ್ವಿಂಟನ್ ಡಿಕಾಕ್ ಬ್ಯಾಟ್​ನಿಂದ ಸ್ಪೋಟಕ ಸೆಂಚುರಿ

Barbados Royals vs Guyana Amazon Warriors: ಸಿಪಿಎಲ್​ನ 16ನೇ ಪಂದ್ಯದಲ್ಲಿ ಬಾರ್ಬಡೋಸ್ ರಾಯಲ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ಸ್ ತಂಡವು 205 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಗಯಾನಾ ಅಮೆಝಾನ್ ವಾರಿಯರ್ಸ್ 173 ರನ್​ಗಳಿಸಲಷ್ಟೇ ಶಕ್ತರಾದರು.

ಝಾಹಿರ್ ಯೂಸುಫ್
|

Updated on:Sep 15, 2024 | 10:03 AM

Share
ಕೆರಿಬಿಯನ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ಕ್ವಿಂಟನ್ ಡಿಕಾಕ್ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಗಯಾನಾ ಅಮೆಝಾನ್ ವಾರಿಯರ್ಸ್ ವಿರುದ್ಧದ ಈ ಪಂದ್ಯದಲ್ಲಿ ಬಾರ್ಬಡೋಸ್ ರಾಯಲ್ಸ್ ಪರ ಕಣಕ್ಕಿಳಿದ ಡಿಕಾಕ್ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಪಂದ್ಯದಲ್ಲಿ ಟಾಸ್ ಗೆದ್ದ ಅಮೆಝಾನ್ ವಾರಿಯರ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು.

1 / 5
ಅದರಂತೆ ಇನಿಂಗ್ಸ್ ಆರಂಭಿಸಿದ ಬಾರ್ಬಡೋಸ್ ರಾಯಲ್ಸ್ ತಂಡಕ್ಕೆ ಕ್ವಿಂಟನ್ ಡಿಕಾಕ್ ಉತ್ತಮ ಆರಂಭ ಒದಗಿಸಿದ್ದರು. ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಡಿಕಾಕ್ ಪವರ್​ಪ್ಲೇ ಬಳಿಕ ಬಿರುಸಿನ ಆಟಕ್ಕೆ ಒತ್ತು ನೀಡಿದ್ದು ವಿಶೇಷ. ಪರಿಣಾಮ ಬಾರ್ಬಡೋಸ್ ರಾಯಲ್ಸ್ ತಂಡವು 10 ಓವರ್​ಗಳ ಮುಕ್ತಾಯದ ವೇಳೆಗೆ 94 ರನ್​ ಕಲೆಹಾಕಿತು.

2 / 5
34 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಡಿಕಾಕ್ ಆ ಬಳಿಕ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಗಯಾನಾ ಅಮೆಝಾನ್ ವಾರಿಯರ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಕ್ವಿಂಟನ್ ಡಿಕಾಕ್ 60 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ 68 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 115 ರನ್ ಚಚ್ಚಿದರು.

3 / 5
ಕ್ವಿಂಟನ್ ಡಿಕಾಕ್ (115) ಅವರ ಈ ಭರ್ಜರಿ ಶತಕದ ನೆರವಿನಿಂದ ಬಾರ್ಬಡೋಸ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 205 ರನ್ ಕಲೆಹಾಕಿತು. ಈ ಮೂಲಕ ಗಯಾನಾ ಅಮೆಝಾನ್ ವಾರಿಯರ್ಸ್ ತಂಡಕ್ಕೆ ಕಠಿಣ ಗುರಿ ನೀಡುವಲ್ಲಿ ರಾಯಲ್ಸ್ ಪಡೆ ಯಶಸ್ವಿಯಾದರು.

4 / 5
206 ರನ್​ಗಳ ಕಠಿಣ ಸವಾಲು ಬೆನ್ನತ್ತಿದ ಗಯಾನಾ ಅಮೆಝಾನ್ ವಾರಿಯರ್ಸ್ ತಂಡದ ಪರ ನಾಯಕ ಶಾಯ್ ಹೋಪ್ 40 ರನ್ ಬಾರಿಸಿದರೆ, ಮೊಯೀನ್ ಅಲಿ 33 ರನ್​ ಚಚ್ಚಿದರು. ಇದಾಗ್ಯೂ ಅಗ್ರ ಕ್ರಮಾಂಕದ ಇತರೆ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 173 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಬಾರ್ಬಡೋಸ್ ರಾಯಲ್ಸ್ ತಂಡವು 32 ರನ್​ಗಳ ಭರ್ಜರಿ ಜಯ ಸಾಧಿಸಿತು.

5 / 5

Published On - 10:03 am, Sun, 15 September 24

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ

ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!

ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು

ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?

‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ

ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ

ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ

ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ

ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ