9 ಭರ್ಜರಿ ಸಿಕ್ಸ್: ಕ್ವಿಂಟನ್ ಡಿಕಾಕ್ ಬ್ಯಾಟ್ನಿಂದ ಸ್ಪೋಟಕ ಸೆಂಚುರಿ
Barbados Royals vs Guyana Amazon Warriors: ಸಿಪಿಎಲ್ನ 16ನೇ ಪಂದ್ಯದಲ್ಲಿ ಬಾರ್ಬಡೋಸ್ ರಾಯಲ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ಸ್ ತಂಡವು 205 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಗಯಾನಾ ಅಮೆಝಾನ್ ವಾರಿಯರ್ಸ್ 173 ರನ್ಗಳಿಸಲಷ್ಟೇ ಶಕ್ತರಾದರು.
1 / 5
ಕೆರಿಬಿಯನ್ ಪ್ರೀಮಿಯರ್ ಲೀಗ್ನ 16ನೇ ಪಂದ್ಯದಲ್ಲಿ ಕ್ವಿಂಟನ್ ಡಿಕಾಕ್ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಗಯಾನಾ ಅಮೆಝಾನ್ ವಾರಿಯರ್ಸ್ ವಿರುದ್ಧದ ಈ ಪಂದ್ಯದಲ್ಲಿ ಬಾರ್ಬಡೋಸ್ ರಾಯಲ್ಸ್ ಪರ ಕಣಕ್ಕಿಳಿದ ಡಿಕಾಕ್ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಪಂದ್ಯದಲ್ಲಿ ಟಾಸ್ ಗೆದ್ದ ಅಮೆಝಾನ್ ವಾರಿಯರ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು.
2 / 5
ಅದರಂತೆ ಇನಿಂಗ್ಸ್ ಆರಂಭಿಸಿದ ಬಾರ್ಬಡೋಸ್ ರಾಯಲ್ಸ್ ತಂಡಕ್ಕೆ ಕ್ವಿಂಟನ್ ಡಿಕಾಕ್ ಉತ್ತಮ ಆರಂಭ ಒದಗಿಸಿದ್ದರು. ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಡಿಕಾಕ್ ಪವರ್ಪ್ಲೇ ಬಳಿಕ ಬಿರುಸಿನ ಆಟಕ್ಕೆ ಒತ್ತು ನೀಡಿದ್ದು ವಿಶೇಷ. ಪರಿಣಾಮ ಬಾರ್ಬಡೋಸ್ ರಾಯಲ್ಸ್ ತಂಡವು 10 ಓವರ್ಗಳ ಮುಕ್ತಾಯದ ವೇಳೆಗೆ 94 ರನ್ ಕಲೆಹಾಕಿತು.
3 / 5
34 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಡಿಕಾಕ್ ಆ ಬಳಿಕ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಗಯಾನಾ ಅಮೆಝಾನ್ ವಾರಿಯರ್ಸ್ ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದ ಕ್ವಿಂಟನ್ ಡಿಕಾಕ್ 60 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ 68 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ 115 ರನ್ ಚಚ್ಚಿದರು.
4 / 5
ಕ್ವಿಂಟನ್ ಡಿಕಾಕ್ (115) ಅವರ ಈ ಭರ್ಜರಿ ಶತಕದ ನೆರವಿನಿಂದ ಬಾರ್ಬಡೋಸ್ ರಾಯಲ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 205 ರನ್ ಕಲೆಹಾಕಿತು. ಈ ಮೂಲಕ ಗಯಾನಾ ಅಮೆಝಾನ್ ವಾರಿಯರ್ಸ್ ತಂಡಕ್ಕೆ ಕಠಿಣ ಗುರಿ ನೀಡುವಲ್ಲಿ ರಾಯಲ್ಸ್ ಪಡೆ ಯಶಸ್ವಿಯಾದರು.
5 / 5
206 ರನ್ಗಳ ಕಠಿಣ ಸವಾಲು ಬೆನ್ನತ್ತಿದ ಗಯಾನಾ ಅಮೆಝಾನ್ ವಾರಿಯರ್ಸ್ ತಂಡದ ಪರ ನಾಯಕ ಶಾಯ್ ಹೋಪ್ 40 ರನ್ ಬಾರಿಸಿದರೆ, ಮೊಯೀನ್ ಅಲಿ 33 ರನ್ ಚಚ್ಚಿದರು. ಇದಾಗ್ಯೂ ಅಗ್ರ ಕ್ರಮಾಂಕದ ಇತರೆ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 173 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಬಾರ್ಬಡೋಸ್ ರಾಯಲ್ಸ್ ತಂಡವು 32 ರನ್ಗಳ ಭರ್ಜರಿ ಜಯ ಸಾಧಿಸಿತು.
Published On - 10:03 am, Sun, 15 September 24