ಹಾಗೆಯೇ ಏಕದಿನ ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ ಶತಕ ಬಾರಿಸಿದ ವಿಶ್ವದ 3ನೇ ಬ್ಯಾಟರ್ ಎಂಬ ಹಿರಿಮೆಗೂ ಡಿಕಾಕ್ ಪಾತ್ರರಾದರು. ಈ ಪಟ್ಟಿಯಲ್ಲಿ 2019 ರಲ್ಲಿ 5 ಶತಕ ಸಿಡಿಸಿದ್ದ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದರೆ, ಶ್ರೀಲಂಕಾದ ಕುಮಾರ ಸಂಗಾಕ್ಕರ (4 ಶತಕ) ದ್ವಿತೀಯ ಸ್ಥಾನದಲ್ಲಿದ್ದಾರೆ. ಇದೀಗ 4 ಶತಕಗಳೊಂದಿಗೆ ಡಿಕಾಕ್ ಮೂರನೇ ಸ್ಥಾನ ಅಲಂಕರಿಸಿದ್ದಾರೆ.