ಸಿಡಿಲಬ್ಬರದ ಸೆಂಚುರಿ ಸಿಡಿಸಿ ದಾಖಲೆ ಮೇಲೆ ದಾಖಲೆ ಬರೆದ ಕ್ವಿಂಟನ್ ಡಿಕಾಕ್

| Updated By: ಝಾಹಿರ್ ಯೂಸುಫ್

Updated on: Nov 01, 2023 | 5:56 PM

Quinton de Kock Century: ಪವರ್​ಪ್ಲ್ಲೇನಲ್ಲಿ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ್ದ ಡಿಕಾಕ್ ಅರ್ಧಶತಕದ ಬಳಿಕ ಬಿರುಸಿನ ಆಟಕ್ಕೆ ಒತ್ತು ನೀಡಿದರು. ಅಲ್ಲದೆ ನ್ಯೂಝಿಲೆಂಡ್ ಬೌಲರ್​ಗಳನ್ನು ಬೆಂಡೆತ್ತುವ ಮೂಲಕ ಕೇವಲ 103 ಎಸೆತಗಳಲ್ಲಿ ಶತಕ ಪೂರೈಸಿದರು.

1 / 7
ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್​ನ 32ನೇ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸಿ ಸೌತ್ ಆಫ್ರಿಕಾ ಆಟಗಾರ ಕ್ವಿಂಟನ್ ಡಿಕಾಕ್ ಹಲವು ದಾಖಲೆ ಬರೆದಿದ್ದಾರೆ. ನ್ಯೂಝಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಡಿಕಾಕ್ ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ್ದರು.

2 / 7
ಮೊದಲ ಪವರ್​ಪ್ಲ್ಲೇನಲ್ಲಿ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ್ದ ಡಿಕಾಕ್ ಅರ್ಧಶತಕದ ಬಳಿಕ ಬಿರುಸಿನ ಆಟಕ್ಕೆ ಒತ್ತು ನೀಡಿದರು. ಪರಿಣಾಮ ಕೇವಲ 103 ಎಸೆತಗಳಲ್ಲಿ ಶತಕ ಪೂರೈಸಿದರು.

3 / 7
ಈ ಶತಕದೊಂದಿಗೆ ಏಕದಿನ ವಿಶ್ವಕಪ್​ ಆವೃತ್ತಿವೊಂದರಲ್ಲಿ 4 ಸೆಂಚುರಿ ಸಿಡಿಸಿದ ಸೌತ್ ಆಫ್ರಿಕಾದ ಮೊದಲ ಬ್ಯಾಟರ್ ಎಂಬ ದಾಖಲೆ ಕ್ವಿಂಟನ್ ಡಿಕಾಕ್ ಪಾಲಾಯಿತು. ಅಂದರೆ ಒಂದೇ ವಿಶ್ವಕಪ್​ನಲ್ಲಿ ಸೌತ್ ಆಫ್ರಿಕಾದ ಯಾವುದೇ ಬ್ಯಾಟರ್ 4 ಶತಕಗಳನ್ನು ಬಾರಿಸಿರಲಿಲ್ಲ.

4 / 7
ಹಾಗೆಯೇ ಏಕದಿನ ವಿಶ್ವಕಪ್​ ಆವೃತ್ತಿಯೊಂದರಲ್ಲಿ ಅತ್ಯಧಿಕ ಶತಕ ಬಾರಿಸಿದ ವಿಶ್ವದ 3ನೇ ಬ್ಯಾಟರ್ ಎಂಬ ಹಿರಿಮೆಗೂ ಡಿಕಾಕ್ ಪಾತ್ರರಾದರು. ಈ ಪಟ್ಟಿಯಲ್ಲಿ 2019 ರಲ್ಲಿ 5 ಶತಕ ಸಿಡಿಸಿದ್ದ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದರೆ, ಶ್ರೀಲಂಕಾದ ಕುಮಾರ ಸಂಗಾಕ್ಕರ (4 ಶತಕ) ದ್ವಿತೀಯ ಸ್ಥಾನದಲ್ಲಿದ್ದಾರೆ. ಇದೀಗ 4 ಶತಕಗಳೊಂದಿಗೆ ಡಿಕಾಕ್ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

5 / 7
ಇನ್ನು ಈ ಶತಕದೊಂದಿಗೆ ಈ ಬಾರಿಯ ವಿಶ್ವಕಪ್​ನಲ್ಲಿ ಕ್ವಿಂಟನ್ ಡಿಕಾಕ್ 500+ ರನ್​ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ವಿಶ್ವಕಪ್ ಆವೃತ್ತಿಯಲ್ಲಿ ಐನೂರಕ್ಕೂ ಅಧಿಕ ರನ್​ಗಳಿಸಿದ ಸೌತ್ ಆಫ್ರಿಕಾದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

6 / 7
ಹಾಗೆಯೇ ಈ ಶತಕದೊಂದಿಗೆ ಸೌತ್ ಆಫ್ರಿಕಾ ಪರ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ 3ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಹಾಶಿಮ್ ಆಮ್ಲ (27 ಶತಕ) ಅಗ್ರಸ್ಥಾನದಲ್ಲಿದ್ದರೆ, ಎಬಿ ಡಿವಿಲಿಯರ್ಸ್​ (25 ಶತಕ) ದ್ವಿತೀಯ ಸ್ಥಾನದಲ್ಲಿದ್ದಾರೆ. ಇದೀಗ 21 ಶತಕಗಳೊಂದಿಗೆ ಕ್ವಿಂಟನ್ ಡಿಕಾಕ್ ಮೂರನೇ ಸ್ಥಾನಕ್ಕೇರಿದ್ದಾರೆ.

7 / 7
ಈ ಶತಕಕ್ಕೂ ಮುನ್ನ ಕ್ವಿಂಟನ್ ಡಿಕಾಕ್ ಶ್ರೀಲಂಕಾ, ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶ್ ವಿರುದ್ಧ ಸೆಂಚುರಿ ಸಿಡಿಸಿದ್ದರು. ಇದೀಗ ನ್ಯೂಝಿಲೆಂಡ್ ವಿರುದ್ಧ 116 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 114 ರನ್ ಬಾರಿಸಿ ಮಿಂಚಿದ್ದಾರೆ.