R Ashwin: ಇಬ್ಬರು ಕನ್ನಡಿಗರ ದಾಖಲೆ ಮುರಿದ ಅಶ್ವಿನ್

Edited By:

Updated on: Feb 06, 2024 | 7:55 AM

R Ashwin Records: ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ 3 ವಿಕೆಟ್ ಕಬಳಿಸುವ ಮೂಲಕ ರವಿಚಂದ್ರನ್ ಅಶ್ವಿನ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಕರ್ನಾಟಕದ ಇಬ್ಬರು ಲೆಜೆಂಡ್ ಸ್ಪಿನ್ನರ್​ಗಳ ದಾಖಲೆಗಳನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ವಿವರ ಈ ಕೆಳಗಿನಂತಿದೆ.

1 / 6
ವಿಶಾಖಪಟ್ಟಣಂನಲ್ಲಿ ನಡೆದ ಇಂಗ್ಲೆಂಡ್ (England) ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 106 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಭಾರತ ತಂಡದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ (R Ashwin) 3 ವಿಕೆಟ್ ಕಬಳಿಸಿ ಮಿಂಚಿದ್ದರು.

ವಿಶಾಖಪಟ್ಟಣಂನಲ್ಲಿ ನಡೆದ ಇಂಗ್ಲೆಂಡ್ (England) ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 106 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಭಾರತ ತಂಡದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ (R Ashwin) 3 ವಿಕೆಟ್ ಕಬಳಿಸಿ ಮಿಂಚಿದ್ದರು.

2 / 6

ಈ ಮೂರು ವಿಕೆಟ್​ಗಳೊಂದಿಗೆ ಇದೀಗ ಅಶ್ವಿನ್ ಮತ್ತೊಂದು ಮೈಲುಗಲ್ಲನ್ನು ದಾಟಿದ್ದಾರೆ. ಅದು ಕೂಡ ಖ್ಯಾತನಾಮರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ಅಂದರೆ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಅಶ್ವಿನ್ ಪಾತ್ರರಾಗಿದ್ದಾರೆ.

3 / 6

ಇದಕ್ಕೂ ಮುನ್ನ ಈ ದಾಖಲೆ ಕರ್ನಾಟಕದ ಲೆಜೆಂಡ್ ಸ್ಪಿನ್ನರ್ ಬಿಎಸ್ ಚಂದ್ರಶೇಖರ್ ಅವರ ಹೆಸರಿನಲ್ಲಿತ್ತು. ಇಂಗ್ಲೆಂಡ್ ವಿರುದ್ಧ 38 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಚಂದ್ರಶೇಖರ್ 95 ವಿಕೆಟ್​ಗಳನ್ನು ಕಬಳಿಸಿ ಈ ದಾಖಲೆ ಬರೆದಿದ್ದರು.

4 / 6

ಹಾಗೆಯೇ ಇಂಗ್ಲೆಂಡ್ ವಿರುದ್ಧ 36 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಕನ್ನಡಿಗ ಅನಿಲ್ ಕುಂಬ್ಳೆ 92 ವಿಕೆಟ್​ಗಳನ್ನು ಪಡೆದಿದ್ದರು. ಇದೀಗ ಈ ಇಬ್ಬರು ದಿಗ್ಗಜರನ್ನು ಹಿಂದಿಕ್ಕಿ ರವಿಚಂದ್ರನ್ ಅಶ್ವಿನ್ ಹೊಸ ಇತಿಹಾಸ ಬರೆದಿದ್ದಾರೆ.

5 / 6

ಇಂಗ್ಲೆಂಡ್ ವಿರುದ್ಧ 39 ಇನಿಂಗ್ಸ್ ಆಡಿರುವ ರವಿಚಂದ್ರನ್ ಅಶ್ವಿನ್ ಇದುವರೆಗೆ 97 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಆಂಗ್ಲರ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 6

ಹಾಗೆಯೇ 3ನೇ ಟೆಸ್ಟ್ ಪಂದ್ಯದಲ್ಲಿ ಮೂರು ವಿಕೆಟ್​ ಕಬಳಿಸಿದರೆ ಇಂಗ್ಲೆಂಡ್ ವಿರುದ್ಧ 100 ವಿಕೆಟ್ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಅಶ್ವಿನ್ ಪಾತ್ರರಾಗಲಿದ್ದಾರೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಕಡೆಯಿಂದ ಐತಿಹಾಸಿಕ ಸಾಧನೆಯೊಂದನ್ನು ನಿರೀಕ್ಷಿಸಬಹುದು.

TV9 Web

TV9 Kannada

Read More
Loading...
Unable to load recommendations.
Follow Us