ICC Test rankings: ಬೌಲರ್​ಗಳ ಶ್ರೇಯಾಂಕದಲ್ಲಿ ಭಾರತೀಯರದ್ದೇ ಪಾರುಪತ್ಯ

Updated on: Sep 25, 2024 | 6:42 PM

ICC Test rankings: ಚೆನ್ನೈ ಟೆಸ್ಟ್ ಪಂದ್ಯದಲ್ಲಿ ತಮ್ಮ ಬೌಲಿಂಗ್​ ಮೂಲಕ ಬಾಂಗ್ಲಾದೇಶ ತಂಡವನ್ನು ಬಗ್ಗುಬಡಿದಿದ್ದ ಆರ್ ಅಶ್ವಿನ್ ಮತ್ತು ಜಸ್ಪ್ರೀತ್ ಬುಮ್ರಾ ಐಸಿಸಿ ರ್ಯಾಂಕಿಂಗ್‌ನಲ್ಲಿ ತಮ್ಮ ಛಾಪು ಮೂಡಿಸಿದ್ದರೆ, ರವೀಂದ್ರ ಜಡೇಜಾ ಕೂಡ ಭರ್ಜರಿ ಮುಂಬಡ್ತಿ ಪಡೆದಿದ್ದಾರೆ. ಬೌಲರ್​ಗಳ ರ್ಯಾಂಕಿಂಗ್​ನಲ್ಲಿ ಮಾತ್ರವಲ್ಲದೆ ಆಲ್‌ರೌಂಡರ್​ಗಳ ಪಟ್ಟಿಯಲ್ಲೂ ಕಮಾಲ್ ಮಾಡಿದ್ದಾರೆ.

1 / 9
ಪ್ರಸ್ತುತ 2 ಪಂದ್ಯಗಳ ಟೆಸ್ಟ್ ಸರಣಿಗೆ ಟೀಂ ಇಂಡಿಯಾ, ಬಾಂಗ್ಲಾದೇಶಕ್ಕೆ ಆತಿಥ್ಯವಹಿಸುತ್ತಿದೆ. ಉಭಯ ತಂಡಗಳ ನಡುವೆ ನಡೆದ ಮೊದಲ ಪಂದ್ಯದಲ್ಲಿ ಭಾರತ ತಂಡ 280 ರನ್‌ಗಳ ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಭಾರತ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲೂ ಅದ್ಭುತ ಪ್ರದರ್ಶನ ನೀಡಿತ್ತು.

ಪ್ರಸ್ತುತ 2 ಪಂದ್ಯಗಳ ಟೆಸ್ಟ್ ಸರಣಿಗೆ ಟೀಂ ಇಂಡಿಯಾ, ಬಾಂಗ್ಲಾದೇಶಕ್ಕೆ ಆತಿಥ್ಯವಹಿಸುತ್ತಿದೆ. ಉಭಯ ತಂಡಗಳ ನಡುವೆ ನಡೆದ ಮೊದಲ ಪಂದ್ಯದಲ್ಲಿ ಭಾರತ ತಂಡ 280 ರನ್‌ಗಳ ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಭಾರತ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲೂ ಅದ್ಭುತ ಪ್ರದರ್ಶನ ನೀಡಿತ್ತು.

2 / 9

ಇದೀಗ ಈ ಪ್ರದರ್ಶನದ ಫಲವನ್ನು ಟೀಂ ಇಂಡಿಯಾದ ಆಟಗಾರರು ಐಸಿಸಿ ಟೆಸ್ಟ್ ರ್ಯಾಂಕಿಂಗ್​ನಲ್ಲಿ ಅನುಭವಿಸಿದ್ದಾರೆ. ಐಸಿಸಿ ಇಂದು ಪ್ರಕಟಿಸಿದ ಟೆಸ್ಟ್ ಬೌಲರ್​ಗಳ ಶ್ರೇಯಾಂಕದಲ್ಲಿ ಭಾರತೀಯ ವೇಗಿಗಳದ್ದೇ ಪಾರುಪತ್ಯ ಕಂಡುಬಂದಿದೆ. ಅದರಂತೆ ಅಗ್ರ 10 ರೊಳಗೆ ಭಾರತದ ಮೂವರು ಬೌಲರ್​ಗಳು ಸ್ಥಾನ ಪಡೆದಿದ್ದಾರೆ.

3 / 9

ಚೆನ್ನೈ ಟೆಸ್ಟ್ ಪಂದ್ಯದಲ್ಲಿ ತಮ್ಮ ಬೌಲಿಂಗ್​ ಮೂಲಕ ಬಾಂಗ್ಲಾದೇಶ ತಂಡವನ್ನು ಬಗ್ಗುಬಡಿದಿದ್ದ ಆರ್ ಅಶ್ವಿನ್ ಮತ್ತು ಜಸ್ಪ್ರೀತ್ ಬುಮ್ರಾ ಐಸಿಸಿ ರ್ಯಾಂಕಿಂಗ್‌ನಲ್ಲಿ ತಮ್ಮ ಛಾಪು ಮೂಡಿಸಿದ್ದರೆ, ರವೀಂದ್ರ ಜಡೇಜಾ ಕೂಡ ಭರ್ಜರಿ ಮುಂಬಡ್ತಿ ಪಡೆದಿದ್ದಾರೆ. ಬೌಲರ್​ಗಳ ರ್ಯಾಂಕಿಂಗ್​ನಲ್ಲಿ ಮಾತ್ರವಲ್ಲದೆ ಆಲ್‌ರೌಂಡರ್​ಗಳ ಪಟ್ಟಿಯಲ್ಲೂ ಕಮಾಲ್ ಮಾಡಿದ್ದಾರೆ.

4 / 9

ಐಸಿಸಿ ನೂತನ ಟೆಸ್ಟ್ ಬೌಲಿಂಗ್ ಶ್ರೇಯಾಂಕದ ಪ್ರಕಾರ, 871 ರೇಟಿಂಗ್‌ ಪಾಯಿಂಟ್‌ಗಳನ್ನು ಹೊಂದಿರುವ ಆರ್ ಅಶ್ವಿನ್ ನಂಬರ್ 1 ಸ್ಥಾನದಲ್ಲಿದ್ದರೆ, 854 ಅಂಕಗಳನ್ನು ಹೊಂದಿರುವ ಜಸ್ಪ್ರೀತ್ ಬುಮ್ರಾ 2 ನೇ ಸ್ಥಾನದಲ್ಲಿದ್ದಾರೆ. ಅಂದರೆ ಬೌಲರ್​ಗಳ ಶ್ರೇಯಾಂಕದ ಮೊದಲೆರಡು ಸ್ಥಾನಗಳಲ್ಲಿ ಭಾರತೀಯರೇ ಇದ್ದಾರೆ.

5 / 9

ಹಾಗೆಯೇ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ಆಲ್‌ರೌಂಡರ್ ರವೀಂದ್ರ ಜಡೇಜಾ ಕೂಡ ಅಗ್ರ 10 ರೊಳಗೆ ಸ್ಥಾನ ಪಡೆದಿದ್ದು, 804 ರೇಟಿಂಗ್‌ನೊಂದಿಗೆ 6ನೇ ಸ್ಥಾನ ಪಡೆದುಕೊಂಡಿದ್ದಾರೆ.

6 / 9

ಉಳಿದಂತೆ 847 ಅಂಕಗಳನ್ನು ಹೊಂದಿರುವ ಜೋಶ್ ಹ್ಯಾಜಲ್‌ವುಡ್ 3ನೇ ಸ್ಥಾನದಲ್ಲಿದ್ದರೆ, ಪ್ಯಾಟ್ ಕಮಿನ್ಸ್ 847 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಕಗಿಸೊ ರಬಾಡ 820 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದ್ದರೆ ಮತ್ತೊಬ್ಬ ಆಸೀಸ್ ಬೌಲರ್ ನಾಥನ್ ಲಿಯಾನ್ 7ನೇ ಸ್ಥಾನದಲ್ಲಿದ್ದಾರೆ.

7 / 9

ಶ್ರೀಲಂಕಾದ ಪ್ರಭಾತ್ ಜಯಸೂರ್ಯ 743 ಅಂಕಗಳೊಂದಿಗೆ 8ನೇ ಸ್ಥಾನದಲ್ಲಿದ್ದರೆ ನ್ಯೂಜಿಲೆಂಡ್​ನ ಕೈಲ್ ಜೇಮಿಸನ್ 721 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದ್ದಾರೆ. ಇದಲ್ಲದೇ ಪಾಕಿಸ್ತಾನದ ವೇಗದ ಬೌಲರ್ ಶಾಹೀನ್ ಅಫ್ರಿದಿ 709 ಅಂಕಗಳೊಂದಿಗೆ 10ನೇ ಸ್ಥಾನದಲ್ಲಿದ್ದಾರೆ.

8 / 9

ಇನ್ನು ಐಸಿಸಿ ಆಲ್‌ರೌಂಡರ್ ಶ್ರೇಯಾಂಕದಲ್ಲಿಯೂ ಭಾರತೀಯರದ್ದೇ ಮೇಲುಗೈ ಆಗಿದ್ದು, ಆಲ್‌ರೌಂಡರ್ ರವೀಂದ್ರ ಜಡೇಜಾ 475 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಇವಲ್ಲದೇ ಆರ್ ಅಶ್ವಿನ್ ಕೂಡ 370 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

9 / 9

ಬಾಂಗ್ಲಾದೇಶದ ಅನುಭವಿ ಆಟಗಾರ ಶಕೀಬ್ ಅಲ್ ಹಸನ್ 291 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್‌ನ ಜೋ ರೂಟ್ 282 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಐದನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್​ನ ಜೇಸನ್ ಹೋಲ್ಡರ್ 270 ಅಂಕಗಳನ್ನು ಹೊಂದಿದ್ದಾರೆ.

Loading...
Unable to load recommendations.
Follow Us