- Kannada News Photo gallery Cricket photos R Ashwin Becomes 3rd Highest Wicket-Taker For India In Tests
R Ashwin: ಹೊಸ ಮೈಲುಗಲ್ಲು ದಾಟಿದ ಅಶ್ವಿನ್: ಈಗ ಭಾರತದ 3ನೇ ಯಶಸ್ವಿ ಬೌಲರ್
India vs New zealand 1st Test: ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರುಗಳ ಪಟ್ಟಿಯಲ್ಲಿ ಸದ್ಯ ಅಶ್ವಿನ್ 13ನೇ ಸ್ಥಾನಕ್ಕೇರಿದ್ದಾರೆ. ಸದ್ಯ ಅಶ್ವಿನ್ ಮುಂದೆ 421 ವಿಕೆಟ್ ಪಡೆದಿರುವ ದಕ್ಷಿಣ ಆಫ್ರಿಕಾದ ಶಾನ್ ಪೊಲಾಕ್ ಇದ್ದು, ಹೀಗಾಗಿ ಮುಂದಿನ ಎರಡು ಟೆಸ್ಟ್ ಪಂದ್ಯಗಳ ಮೂಲಕ ಪೊಲಾಕ್ ದಾಖಲೆಯನ್ನು ಮುರಿಯುವ ಅವಕಾಶ ಅಶ್ವಿನ್ ಮುಂದಿದೆ.
Updated on: Nov 29, 2021 | 3:26 PM

ಭಾರತ ಕ್ರಿಕೆಟ್ ತಂಡದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ನ್ಯೂಜಿಲೆಂಡ್ ವಿರುದ್ದದ ಮೊದಲ ಟೆಸ್ಟ್ನಲ್ಲಿ 5 ವಿಕೆಟ್ ಉರುಳಿಸುವುದರೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಟೀಮ್ ಇಂಡಿಯಾದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.

ನ್ಯೂಜಿಲೆಂಡ್ ವಿರುದ್ದ ಮೊದಲ ಇನಿಂಗ್ಸ್ನಲ್ಲಿ 3 ವಿಕೆಟ್ ಪಡೆದಿದ್ದ ಅಶ್ವಿನ್, ಇದೀಗ 2ನೇ ಇನಿಂಗ್ಸ್ನಲ್ಲಿ ಎರಡು ವಿಕೆಟ್ ಕಬಳಿಸಿದ್ದಾರೆ. ಇದರೊಂದಿಗೆ ಒಟ್ಟು ವಿಕೆಟ್ಗಳ ಸಂಖ್ಯೆಯನ್ನು 418 ಕ್ಕೇರಿಸಿದ್ದಾರೆ. ಈ ಮೂಲಕ 417 ವಿಕೆಟ್ ಪಡೆದು ಮೂರನೇ ಸ್ಥಾನದಲ್ಲಿದ್ದ ಹರ್ಭಜನ್ ಸಿಂಗ್ ಅವರನ್ನು ಅಶ್ವಿನ್ ಹಿಂದಿಕ್ಕಿದ್ದಾರೆ.

ಈ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ ಅಗ್ರಸ್ಥಾನದಲ್ಲಿದ್ದು, ಕುಂಬ್ಳೆ ಟೆಸ್ಟ್ ಕ್ರಿಕೆಟ್ನಲ್ಲಿ 619 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 434 ವಿಕೆಟ್ ಪಡೆದಿರುವ ಕಪಿಲ್ ದೇವ್ 2ನೇ ಸ್ಥಾನದಲ್ಲಿದ್ದಾರೆ. ಇದೀಗ 418 ವಿಕೆಟ್ ಪಡೆದಿರುವ ಅಶ್ವಿನ್ 3ನೇ ಸ್ಥಾನ ಅಲಂಕರಿಸಿದ್ದಾರೆ. 4ನೇ ಸ್ಥಾನದಲ್ಲಿ ಹರ್ಭಜನ್ ಸಿಂಗ್ ಇದ್ದು, ಭಜ್ಜಿ 417 ವಿಕೆಟ್ ಉರುಳಿಸಿದ್ದಾರೆ.

ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರುಗಳ ಪಟ್ಟಿಯಲ್ಲಿ ಸದ್ಯ ಅಶ್ವಿನ್ 13ನೇ ಸ್ಥಾನಕ್ಕೇರಿದ್ದಾರೆ. ಸದ್ಯ ಅಶ್ವಿನ್ ಮುಂದೆ 421 ವಿಕೆಟ್ ಪಡೆದಿರುವ ದಕ್ಷಿಣ ಆಫ್ರಿಕಾದ ಶಾನ್ ಪೊಲಾಕ್ ಇದ್ದು, ಹೀಗಾಗಿ ಮುಂದಿನ ಎರಡು ಟೆಸ್ಟ್ ಪಂದ್ಯಗಳ ಮೂಲಕ ಪೊಲಾಕ್ ದಾಖಲೆಯನ್ನು ಮುರಿಯುವ ಅವಕಾಶ ಅಶ್ವಿನ್ ಮುಂದಿದೆ.

ಇನ್ನು ಟೆಸ್ಟ್ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ 800 ವಿಕೆಟ್ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ 708 ವಿಕೆಟ್ ಪಡೆದಿರುವ ಆಸ್ಟ್ರೇಲಿಯಾದ ಶೇನ್ ವಾರ್ನ್ 2ನೇ ಸ್ಥಾನದಲ್ಲಿದ್ದಾರೆ. ಅದೇ ರೀತಿ 632 ವಿಕೆಟ್ ಉರುಳಿಸಿರುವ ಇಂಗ್ಲೆಂಡ್ನ ಜೇಮ್ಸ್ ಅಂಡರ್ಸನ್ 3ನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಹಾಗೆಯೇ 619 ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ. ಈ ನಾಲ್ವರು ಬೌಲರುಗಳು ಮಾತ್ರ ಟೆಸ್ಟ್ನಲ್ಲಿ 600ಕ್ಕೂ ಅಧಿಕ ವಿಕೆಟ್ ಪಡೆದಿದ್ದಾರೆ.
