R Ashwin: ಅಶ್ವಿನ್ ಸ್ಪಿನ್ಗೆ ತಿರುಗಿದ ವಿಶ್ವ ದಾಖಲೆ
TV9 Web | Updated By: ಝಾಹಿರ್ ಯೂಸುಫ್
Updated on:
Jan 27, 2024 | 11:32 AM
R Ashwin Records: ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ಗಳ ಸಾಧನೆ ಮಾಡುವ ಹೊಸ್ತಿಲಲ್ಲಿದ್ದಾರೆ. ಈಗಾಗಲೇ 494 ವಿಕೆಟ್ ಕಬಳಿಸಿರುವ ಅಶ್ವಿನ್ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 6 ವಿಕೆಟ್ ಪಡೆದರೆ ಹೊಸ ದಾಖಲೆ ನಿರ್ಮಾಣವಾಗಲಿದೆ.
1 / 6
ಹೈದರಾಬಾದ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ (England) ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ಮೂಲಕ ರವಿಚಂದ್ರನ್ ಅಶ್ವಿನ್ (R Ashwin) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 21 ಓವರ್ಗಳನ್ನು ಎಸೆದಿದ್ದ ಅಶ್ವಿನ್ 68 ರನ್ ನೀಡಿ 3 ವಿಕೆಟ್ ಕಬಳಿಸಿದರು.
2 / 6
ಈ ಮೂರು ವಿಕೆಟ್ಗಳೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ 150 ವಿಕೆಟ್ ಕಬಳಿಸಿದ ಮೂರನೇ ಬೌಲರ್ ಹಾಗೂ ಎರಡನೇ ಸ್ಪಿನ್ನರ್ ಎನಿಸಿಕೊಂಡರು. ಅಷ್ಟೇ ಅಲ್ಲದೆ WTC ನಲ್ಲಿ ಅತೀ ವೇಗವಾಗಿ 150 ವಿಕೆಟ್ ಪಡೆದ ವಿಶ್ವ ದಾಖಲೆಯನ್ನೂ ಕೂಡ ತಮ್ಮದಾಗಿಸಿಕೊಂಡಿದ್ದಾರೆ.
3 / 6
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಆಸ್ಟ್ರೇಲಿಯಾದ ನಾಥನ್ ಲಿಯಾನ್ ಹೆಸರಿನಲ್ಲಿತ್ತು. ಲಿಯಾನ್ 63 ಟೆಸ್ಟ್ ಪಂದ್ಯಗಳ ಮೂಲಕ 150 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು. ಇದೀಗ ಈ ರೆಕಾರ್ಡ್ ಅನ್ನು ಅಶ್ವಿನ್ ಅಳಿಸಿ ಹಾಕಿದ್ದಾರೆ.
4 / 6
ರವಿಚಂದ್ರನ್ ಅಶ್ವಿನ್ ಕೇವಲ 58 ಟೆಸ್ಟ್ ಪಂದ್ಯಗಳ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ 150 ವಿಕೆಟ್ ಪೂರೈಸಿದ್ದಾರೆ. ಈ ಮೂಲಕ WTC ನಲ್ಲಿ ಅತೀ ವೇಗವಾಗಿ 150 ವಿಕೆಟ್ ಕಬಳಿಸಿದ ಬೌಲರ್ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.
5 / 6
ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ ಪೂರೈಸಲು ರವಿಚಂದ್ರನ್ ಅಶ್ವಿನ್ಗೆ ಬೇಕಿರುವುದು ಕೇವಲ 7 ವಿಕೆಟ್ಗಳು ಮಾತ್ರ. 180 ಟೆಸ್ಟ್ ಇನಿಂಗ್ಸ್ ಆಡಿರುವ ಅಶ್ವಿನ್ 494 ವಿಕೆಟ್ ಪಡೆದಿದ್ದಾರೆ. ಇದೀಗ ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಕಬಳಿಸಿದರೆ, ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ ಉರುಳಿಸಿದ 2ನೇ ಭಾರತೀಯ ಎನಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ 619 ವಿಕೆಟ್ ಕಬಳಿಸಿರುವ ಅನಿಲ್ ಕುಂಬ್ಳೆ ಅಗ್ರಸ್ಥಾನದಲ್ಲಿದ್ದಾರೆ.
6 / 6
ಭಾರತಕ್ಕೆ ಬೃಹತ್ ಮುನ್ನಡೆ: ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್ನಲ್ಲಿ 246 ರನ್ಗಳಿಗೆ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 436 ರನ್ಗಳಿಸಿ ಸರ್ವಪತನ ಕಂಡಿದೆ. ಈ ಮೂಲಕ ಭಾರತ ತಂಡವು ಮೊದಲ ಇನಿಂಗ್ಸ್ನಲ್ಲಿ 190 ರನ್ಗಳ ಬೃಹತ್ ಮುನ್ನಡೆ ಸಾಧಿಸಿದೆ. ಸದ್ಯ ಇಂಗ್ಲೆಂಡ್ ತಂಡವು ದ್ವಿತೀಯ ಇನಿಂಗ್ಸ್ ಆರಂಭಿಸಿದ್ದು 2 ಓವರ್ಗಳ ಮುಕ್ತಾಯದ ವೇಳೆಗೆ ಯಾವುದೇ ವಿಕೆಟ್ ನಷ್ಟವಿಲ್ಲದೆ 10 ರನ್ ಕಲೆಹಾಕಿದೆ.