Updated on: Sep 25, 2023 | 2:29 PM
ಆಸ್ಟ್ರೇಲಿಯಾ ವಿರುದ್ಧ ನಡೆದ 2ನೇ ಏಕದಿನ ಪಂದ್ಯದ ವೇಳೆ 3 ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಲೆಜೆಂಡ್ ಅನಿಲ್ ಕುಂಬ್ಳೆ ಅವರ ಐತಿಹಾಸಿಕ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.
ಈ ಪಂದ್ಯದಲ್ಲಿ 7 ಓವರ್ಗಳನ್ನು ಎಸೆದಿದ್ದ ಅಶ್ವಿನ್ 41 ರನ್ ನೀಡಿ 3 ವಿಕೆಟ್ ಕಬಳಿಸಿದರು. ಈ ಮೂರು ವಿಕೆಟ್ಗಳೊಂದಿಗೆ ತಂಡವೊಂದರ ವಿರುದ್ಧ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆ ರವಿಚಂದ್ರನ್ ಅಶ್ವಿನ್ ಪಾಲಾಯಿತು.
ಇದಕ್ಕೂ ಮುನ್ನ ಈ ದಾಖಲೆ ಅನಿಲ್ ಕುಂಬ್ಳೆ ಅವರ ಹೆಸರಿನಲ್ಲಿತ್ತು. ಆಸ್ಟ್ರೇಲಿಯಾ ವಿರುದ್ಧ 67 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿದ್ದ ಕುಂಬ್ಳೆ ಒಟ್ಟು 142 ವಿಕೆಟ್ಗಳನ್ನು ಕಬಳಿಸಿ ಇತಿಹಾಸ ನಿರ್ಮಿಸಿದ್ದರು.
ಇದೀಗ 68 ಇನಿಂಗ್ಸ್ಗಳ ಮೂಲಕ ಆಸ್ಟ್ರೇಲಿಯಾ ವಿರುದ್ಧ 144 ವಿಕೆಟ್ ಉರುಳಿಸಿರುವ ರವಿಚಂದ್ರನ್ ಅಶ್ವಿನ್ ತಂಡವೊಂದರ ವಿರುದ್ಧ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.
ಹಾಗೆಯೇ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಕಪಿಲ್ ದೇವ್ ಇದ್ದಾರೆ. ಟೀಮ್ ಇಂಡಿಯಾದ ಮಾಜಿ ನಾಯಕ ಪಾಕಿಸ್ತಾನ್ ವಿರುದ್ಧ ಒಟ್ಟು 141 ವಿಕೆಟ್ ಕಬಳಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.
ಒಟ್ಟಿನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂಲಕ ಏಕದಿನ ಕ್ರಿಕೆಟ್ಗೆ ಕಂಬ್ಯಾಕ್ ಮಾಡಿರುವ ರವಿಚಂದ್ರನ್ ಅಶ್ವಿನ್ ಇದೀಗ ಮೊದಲೆರಡು ಪಂದ್ಯಗಳಿಂದ ಒಟ್ಟು 4 ವಿಕೆಟ್ ಕಬಳಿಸಿ ಐತಿಹಾಸಿಕ ದಾಖಲೆಯನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.