ಅನಿಲ್ ಕುಂಬ್ಳೆಯ ಐತಿಹಾಸಿಕ ದಾಖಲೆ ಮುರಿದ ಅಶ್ವಿನ್
TV9 Web | Updated By: ಝಾಹಿರ್ ಯೂಸುಫ್
Updated on:
Sep 25, 2023 | 2:29 PM
R Ashwin Records: ಈ ಪಂದ್ಯದಲ್ಲಿ 7 ಓವರ್ಗಳನ್ನು ಎಸೆದಿದ್ದ ಅಶ್ವಿನ್ 41 ರನ್ ನೀಡಿ 3 ವಿಕೆಟ್ ಕಬಳಿಸಿದರು. ಈ ಮೂರು ವಿಕೆಟ್ಗಳೊಂದಿಗೆ ತಂಡವೊಂದರ ವಿರುದ್ಧ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆ ರವಿಚಂದ್ರನ್ ಅಶ್ವಿನ್ ಪಾಲಾಗಿದೆ.
1 / 6
ಆಸ್ಟ್ರೇಲಿಯಾ ವಿರುದ್ಧ ನಡೆದ 2ನೇ ಏಕದಿನ ಪಂದ್ಯದ ವೇಳೆ 3 ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಲೆಜೆಂಡ್ ಅನಿಲ್ ಕುಂಬ್ಳೆ ಅವರ ಐತಿಹಾಸಿಕ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.
2 / 6
ಈ ಪಂದ್ಯದಲ್ಲಿ 7 ಓವರ್ಗಳನ್ನು ಎಸೆದಿದ್ದ ಅಶ್ವಿನ್ 41 ರನ್ ನೀಡಿ 3 ವಿಕೆಟ್ ಕಬಳಿಸಿದರು. ಈ ಮೂರು ವಿಕೆಟ್ಗಳೊಂದಿಗೆ ತಂಡವೊಂದರ ವಿರುದ್ಧ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆ ರವಿಚಂದ್ರನ್ ಅಶ್ವಿನ್ ಪಾಲಾಯಿತು.
3 / 6
ಇದಕ್ಕೂ ಮುನ್ನ ಈ ದಾಖಲೆ ಅನಿಲ್ ಕುಂಬ್ಳೆ ಅವರ ಹೆಸರಿನಲ್ಲಿತ್ತು. ಆಸ್ಟ್ರೇಲಿಯಾ ವಿರುದ್ಧ 67 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿದ್ದ ಕುಂಬ್ಳೆ ಒಟ್ಟು 142 ವಿಕೆಟ್ಗಳನ್ನು ಕಬಳಿಸಿ ಇತಿಹಾಸ ನಿರ್ಮಿಸಿದ್ದರು.
4 / 6
ಇದೀಗ 68 ಇನಿಂಗ್ಸ್ಗಳ ಮೂಲಕ ಆಸ್ಟ್ರೇಲಿಯಾ ವಿರುದ್ಧ 144 ವಿಕೆಟ್ ಉರುಳಿಸಿರುವ ರವಿಚಂದ್ರನ್ ಅಶ್ವಿನ್ ತಂಡವೊಂದರ ವಿರುದ್ಧ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.
5 / 6
ಹಾಗೆಯೇ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಕಪಿಲ್ ದೇವ್ ಇದ್ದಾರೆ. ಟೀಮ್ ಇಂಡಿಯಾದ ಮಾಜಿ ನಾಯಕ ಪಾಕಿಸ್ತಾನ್ ವಿರುದ್ಧ ಒಟ್ಟು 141 ವಿಕೆಟ್ ಕಬಳಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.
6 / 6
ಒಟ್ಟಿನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂಲಕ ಏಕದಿನ ಕ್ರಿಕೆಟ್ಗೆ ಕಂಬ್ಯಾಕ್ ಮಾಡಿರುವ ರವಿಚಂದ್ರನ್ ಅಶ್ವಿನ್ ಇದೀಗ ಮೊದಲೆರಡು ಪಂದ್ಯಗಳಿಂದ ಒಟ್ಟು 4 ವಿಕೆಟ್ ಕಬಳಿಸಿ ಐತಿಹಾಸಿಕ ದಾಖಲೆಯನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.