R Ashwin: ಸ್ಪಿನ್ ಮೋಡಿಗಾರ ಅಶ್ವಿನ್ ಮುಂದಿದೆ 4 ದಾಖಲೆಗಳು

Edited By:

Updated on: Jan 24, 2024 | 3:29 PM

India vs England 1st Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಗುರುವಾರದಿಂದ ಶುರುವಾಗಲಿದೆ. ಈ ಸರಣಿಯ ಐದು ಪಂದ್ಯಗಳ ಮೂಲಕ 4 ವಿಶೇಷ ದಾಖಲೆಯ ಬರೆಯುವ ಹೊಸ್ತಿಲಲ್ಲಿದ್ದಾರೆ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಈ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

1 / 6
ಭಾರತ ಮತ್ತು ಇಂಗ್ಲೆಂಡ್ (IND vs ENG) ನಡುವಣ ಪ್ರತಿಷ್ಠಿತ ಟೆಸ್ಟ್ ಸರಣಿಯು ಗುರುವಾರದಿಂದ ಶುರುವಾಗಲಿದೆ. 5 ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ಗೆ ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಸ್ಪಿನ್ ಮೋಡಿ ಮಾಡಿದರೆ ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್ (R Ashwin)​ ಹೆಸರಿಗೆ ಒಂದಷ್ಟು ದಾಖಲೆಗಳು ಸೇರ್ಪಡೆಯಾಗಲಿದೆ.

2 / 6
ಅಂದರೆ ರವಿಚಂದ್ರನ್ ಅಶ್ವಿನ್ ಹಲವು ದಾಖಲೆಗಳನ್ನು ಬರೆಯುವ ಹೊಸ್ತಿಲಲ್ಲಿದ್ದಾರೆ. ಆ ದಾಖಲೆ ಬರೆಯಲು ಅಶ್ವಿನ್ ಎಷ್ಟು ವಿಕೆಟ್​ಗಳನ್ನು ಕಬಳಿಸಬೇಕು?, ಈ ಮೂಲಕ ಯಾರ ದಾಖಲೆ ಮುರಿಯಬಹುದು? ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

3 / 6
500 ವಿಕೆಟ್​ಗಳ ದಾಖಲೆ: ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್​ನಲ್ಲಿ 500 ವಿಕೆಟ್​ ಪೂರೈಸಲು ಬೇಕಿರುವುದು ಕೇವಲ 10 ವಿಕೆಟ್​ಗಳು ಮಾತ್ರ. 179 ಟೆಸ್ಟ್ ಇನಿಂಗ್ಸ್​ಗಳಿಂದ 490 ವಿಕೆಟ್ ಪಡೆದಿರುವ ಅಶ್ವಿನ್ ಇಂಗ್ಲೆಂಡ್ ವಿರುದ್ಧ ಹತ್ತು ವಿಕೆಟ್ ಕಬಳಿಸಿದರೆ, ಟೆಸ್ಟ್ ಕ್ರಿಕೆಟ್​ನಲ್ಲಿ 500 ವಿಕೆಟ್ ಉರುಳಿಸಿದ 2ನೇ ಭಾರತೀಯ ಎನಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ (619) ಅಗ್ರಸ್ಥಾನದಲ್ಲಿದ್ದಾರೆ.

4 / 6
100 ವಿಕೆಟ್​ಗಳ ಸಾಧನೆ: ಟೆಸ್ಟ್ ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ವಿರುದ್ಧ ನೂರು ವಿಕೆಟ್​ಗಳನ್ನು ಕಬಳಿಸಿದ ಮೊದಲ ಭಾರತೀಯ ಎನಿಸಿಕೊಳ್ಳಲು ರವಿಚಂದ್ರನ್ ಅಶ್ವಿನ್​ 12 ವಿಕೆಟ್​ಗಳ ಅಂತರದಲ್ಲಿದ್ದಾರೆ. ಹೀಗಾಗಿ ಐದು ಪಂದ್ಯಗಳ ಈ ಸರಣಿಯಲ್ಲಿ ರವಿ ಅಶ್ವಿನ್​ ಕಡೆಯಿಂದ ಈ ವಿಶೇಷ ದಾಖಲೆಯನ್ನು ನಿರೀಕ್ಷಿಸಬಹುದು.

5 / 6
ದಾಖಲೆ ಮುರಿಯಲು 7 ವಿಕೆಟ್: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆ  ಬಿಎಸ್ ಚಂದ್ರಶೇಖರ್ ಹೆಸರಿನಲ್ಲಿದೆ. 38 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಚಂದ್ರಶೇಖರ್ 95 ವಿಕೆಟ್​ಗಳನ್ನು ಕಬಳಿಸಿ ಈ ದಾಖಲೆ ಬರೆದಿದ್ದಾರೆ. ಇದೀಗ ಆಂಗ್ಲರ ವಿರುದ್ಧ 88 ವಿಕೆಟ್​ಗಳನ್ನು ಕಬಳಿಸಿರುವ ಅಶ್ವಿನ್​ಗೆ ಈ ದಾಖೆ ಮುರಿಯಲು ಕೇವಲ 7 ವಿಕೆಟ್​ಗಳ ಅವಶ್ಯಕತೆಯಿದೆ.

6 / 6
5 ವಿಕೆಟ್​ಗಳ ದಾಖಲೆ: ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಪರ ಅತ್ಯಧಿಕ ಬಾರಿ 5 ವಿಕೆಟ್​ ಪಡೆದ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಸರಿಗಟ್ಟುವ ಅವಕಾಶ ಕೂಡ ಅಶ್ವಿನ್ ಮುಂದಿದೆ. ಅನಿಲ್ ಕುಂಬ್ಳೆ ಟೆಸ್ಟ್‌ನಲ್ಲಿ 35 ಐದು ವಿಕೆಟ್‌ಗಳ ಸಾಧನೆ ಮಾಡಿದ್ದರೆ, ಇದೀಗ 34 ಬಾರಿ ಐದು ವಿಕೆಟ್​​ಗಳನ್ನು ಕಬಳಿಸಿರುವ ಅಶ್ವಿನ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಎರಡು ಬಾರಿ 5 ವಿಕೆಟ್ ಕಬಳಿಸಿದ ರವಿಚಂದ್ರನ್ ಅಶ್ವಿನ್ ಹೆಸರಿಗೆ ಹೊಸ ದಾಖಲೆ ಸೇರ್ಪಡೆಯಾಗಲಿದೆ.

Published On - 3:29 pm, Wed, 24 January 24