ಒಂದೇ ಪಂದ್ಯದಲ್ಲಿ ಅಶ್ವಿನ್​ಗೆ ಮೂವರ ದಾಖಲೆ ಮುರಿಯುವ ಅವಕಾಶ

| Updated By: ಝಾಹಿರ್ ಯೂಸುಫ್

Updated on: Sep 24, 2024 | 12:52 PM

India vs Bangladesh Test: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 280 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು 2 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇನ್ನು ಭಾರತ-ಬಾಂಗ್ಲಾದೇಶ್ ನಡುವಣ 2ನೇ ಟೆಸ್ಟ್ ಪಂದ್ಯವು ಸೆಪ್ಟೆಂಬರ್ 27 ರಿಂದ ಶುರುವಾಗಲಿದೆ.

1 / 6
ಬಾಂಗ್ಲಾದೇಶ್ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ರವಿಚಂದ್ರನ್ ಅಶ್ವಿನ್​ ಕೂಡ ಒಬ್ಬರು. ಮೊದಲ ಇನಿಂಗ್ಸ್​ನಲ್ಲಿ 113 ರನ್ ಬಾರಿಸಿದ್ದ ಅಶ್ವಿನ್ ದ್ವಿತೀಯ ಇನಿಂಗ್ಸ್​ನಲ್ಲಿ 6 ವಿಕೆಟ್ ಕಬಳಿಸಿದ್ದರು. ಈ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು.

2 / 6
ಇದರೊಂದಿಗೆ ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿಯಲ್ಲಿ ಅಶ್ವಿನ್ 6ನೇ ಸ್ಥಾನಕ್ಕೇರಿದ್ದರು. ಅದು ಸಹ ರವೀಂದ್ರ ಜಡೇಜಾ, ವಿರಾಟ್ ಕೊಹ್ಲಿ ಹಾಗೂ ಅನಿಲ್ ಕುಂಬ್ಳೆ ಅವರ ದಾಖಲೆಗಳನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

3 / 6
ಟೀಮ್ ಇಂಡಿಯಾ ಪರ 73 ಟೆಸ್ಟ್ ಪಂದ್ಯಗಳನ್ನಾಡಿರುವ ರವೀಂದ್ರ ಜಡೇಜಾ 10 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ, ವಿರಾಟ್ ಕೊಹ್ಲಿ 114 ಪಂದ್ಯಗಳಲ್ಲಿ 10 ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪಡೆದುಕೊಂಡಿದ್ದಾರೆ. ಇನ್ನು ಅನಿಲ್ ಕುಂಬ್ಳೆ 132 ಟೆಸ್ಟ್ ಪಂದ್ಯಗಳಿಂದ 10 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 6
ಇದೀಗ 101ನೇ ಟೆಸ್ಟ್ ಪಂದ್ಯದ ಮೂಲಕ ರವಿಚಂದ್ರನ್ ಅಶ್ವಿನ್ 10ನೇ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ ಅತೀ ಹೆಚ್ಚು ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪಡೆದ 6ನೇ ಆಟಗಾರ ಎನಿಸಿಕೊಂಡಿದ್ದಾರೆ.

5 / 6
ಇದೀಗ ಪಂದ್ಯ ಶ್ರೇಷ್ಠ ಪ್ರಶಸ್ತಿಯ ದಾಖಲೆ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿರುವ ಅಶ್ವಿನ್​ ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಹಾಗೂ ಅನಿಲ್ ಕುಂಬ್ಳೆ ಅವರನ್ನು ಹಿಂದಿಕ್ಕಲು ಒಂದು ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಯ ಅವಶ್ಯಕತೆಯಿದೆ. ಅದರಂತೆ ಕಾನ್ಪುರದಲ್ಲಿ ನಡೆಯಲಿರುವ ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್​ ಕಡೆಯಿಂದ ಭರ್ಜರಿ ದಾಖಲೆಯನ್ನು ನಿರೀಕ್ಷಿಸಬಹುದು.

6 / 6
ಅಂದಹಾಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ವಿಶ್ವ ದಾಖಲೆ ಸೌತ್ ಆಫ್ರಿಕಾದ ಜಾಕ್ಸ್ ಕಾಲಿಸ್ ಹೆಸರಿನಲ್ಲಿದೆ. 166 ಟೆಸ್ಟ್ ಪಂದ್ಯಗಳನ್ನಾಡಿರುವ ಕಾಲಿಸ್ ಒಟ್ಟು 23 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಈ ಮೂಲಕ ಟೆಸ್ಟ್​ನಲ್ಲಿ 20 ಕ್ಕೂ ಅಧಿಕ ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದ ವಿಶ್ವದ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ.