R Ashwin: ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಅಶ್ವಿನ್
Ravichandran Ashwin: ರವಿಚಂದ್ರನ್ ಅಶ್ವಿನ್ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಈವರೆಗೆ 2 ಶತಕಗಳನ್ನು ಬಾರಿಸಿದ್ದಾರೆ. 2021 ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 106 ರನ್ ಬಾರಿಸಿದ್ದ ಅಶ್ವಿನ್, ಇದೀಗ ಬಾಂಗ್ಲಾದೇಶ್ ವಿರುದ್ಧ 113 ರನ್ಗಳನ್ನು ಸಿಡಿಸಿದ್ದಾರೆ. ಈ ಶತಕಗಳೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ.
1 / 6
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಭರ್ಜರಿ ಶತಕ ಸಿಡಿಸಿ ರವಿಚಂದ್ರನ್ ಅಶ್ವಿನ್ (R Ashwin) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅಶ್ವಿನ್ 133 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ 113 ರನ್ ಬಾರಿಸಿದ್ದರು.
2 / 6
ಈ ಸೆಂಚುರಿಯೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಮೈದಾನದಲ್ಲಿ 2 ಶತಕ ಹಾಗೂ ಮೂರಕ್ಕಿಂತ ಹೆಚ್ಚು ಬಾರಿ 5 ವಿಕೆಟ್ ಪಡೆದ ಏಕೈಕ ಆಟಗಾರ ಎಂಬ ವಿಶ್ವ ದಾಖಲೆಯನ್ನು ರವಿಚಂದ್ರನ್ ಅಶ್ವಿನ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಇಂತಹದೊಂದು ಅಪರೂಪದ ದಾಖಲೆ ಇಂಗ್ಲೆಂಡ್ನ ಮಾಜಿ ನಾಯಕ ಇಯಾನ್ ಬಾಥಮ್ ಹೆಸರಿನಲ್ಲಿತ್ತು.
3 / 6
ಇಯಾನ್ ಬಾಥಮ್ ಇಂಗ್ಲೆಂಡ್ನ ಹೆಂಡಿಗ್ಲೆ ಮೈದಾನದಲ್ಲಿ 2 ಟೆಸ್ಟ್ ಶತಕಗಳನ್ನು ಬಾರಿಸಿದ್ದಾರೆ. ಇದರ ಜೊತೆಗೆ ಮೂರು ಬಾರಿ 5 ವಿಕೆಟ್ಗಳನ್ನು ಕಬಳಿಸಿದ್ದರು. ಈ ಮೂಲಕ ಒಂದೇ ಮೈದಾನದಲ್ಲಿ 2 ಶತಕ ಹಾಗೂ 3 ಬಾರಿ 5 ವಿಕೆಟ್ ಪಡೆದ ವಿಶ್ವದ ಏಕೈಕ ಆಟಗಾರ ಎಂಬ ವಿಶ್ವ ದಾಖಲೆಯನ್ನು ಬರೆದಿದ್ದರು. ಇದೀಗ ಈ ದಾಖಲೆಯನ್ನು ಅಶ್ವಿನ್ ಅಳಿಸಿ ಹಾಕಿದ್ದಾರೆ.
4 / 6
ಚೆನ್ನೈನ ಎಂಎ ಚಿದಂಬರಂ (ಚೆಪಾಕ್) ಸ್ಟೇಡಿಯಂನಲ್ಲಿ ಅಶ್ವಿನ್ ಈವರೆಗೆ 2 ಟೆಸ್ಟ್ ಶತಕಗಳನ್ನು ಬಾರಿಸಿದ್ದಾರೆ. ಹಾಗೆಯೇ 4 ಬಾರಿ ಐದು ವಿಕೆಟ್ಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಒಂದೇ ಮೈದಾನದಲ್ಲಿ ಅತ್ಯಧಿಕ ಶತಕ ಹಾಗೂ ಅತೀ ಹೆಚ್ಚು ಬಾರಿ 5 ವಿಕೆಟ್ ಪಡೆದ ವಿಶ್ವ ದಾಖಲೆಯನ್ನು ರವಿಚಂದ್ರನ್ ಅಶ್ವಿನ್ ತಮ್ಮದಾಗಿಸಿಕೊಂಡಿದ್ದಾರೆ.
5 / 6
ಹಾಗೆಯೇ ಟೆಸ್ಟ್ ಕ್ರಿಕೆಟ್ನಲ್ಲಿ 8ನೇ ಕ್ರಮಾಂಕ ಅಥವಾ ಅದಕ್ಕಿಂತ ಕೆಲ ಕ್ರಮಾಂಕದಲ್ಲಿ ಕಣಕ್ಕಿಳಿದು ಅತ್ಯಧಿಕ ಶತಕ ಸಿಡಿಸಿದ ವಿಶ್ವ ದಾಖಲೆ ಸರಿಗಟ್ಟಲು ಅಶ್ವಿನ್ ಕೇವಲ ಒಂದು ಸೆಂಚುರಿಯ ಅವಶ್ಯಕತೆಯಿದೆ. ಈ ಪಟ್ಟಿಯಲ್ಲಿ ನ್ಯೂಝಿಲೆಂಡ್ ತಂಡದ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ಅಗ್ರಸ್ಥಾನದಲ್ಲಿದ್ದಾರೆ.
6 / 6
ವೆಟ್ಟೋರಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಒಟ್ಟು 5 ಶತಕಗಳನ್ನು ಬಾರಿಸಿದ್ದಾರೆ. ಇದೀಗ 8ನೇ ಕ್ರಮಾಂಕದಲ್ಲಿ ಅಶ್ವಿನ್ 4 ಸೆಂಚುರಿಗಳನ್ನು ಸಿಡಿಸಿದ್ದು, ಹೀಗಾಗಿ ಇನ್ನೊಂದು ಶತಕದೊಂದಿಗೆ ವೆಟ್ಟೋರಿಯ ವಿಶ್ವ ದಾಖಲೆಯನ್ನು ಸರಿಗಟ್ಟುವುದನ್ನು ನಿರೀಕ್ಷಿಸಬಹುದು.