- Kannada News Photo gallery Cricket photos R Ashwin equalled Anil Kumble's record for most five wicket hauls in Test cricket
IND vs ENG: ಅನಿಲ್ ಕುಂಬ್ಳೆ ದಾಖಲೆ ಸರಿಗಟ್ಟಿದ ಆರ್ ಅಶ್ವಿನ್..!
R Ashwin: ಎರಡನೇ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ಗಳ ಗೊಂಚಲು ಪಡೆದ ಅಶ್ವಿನ್ಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಇದು 35ನೇ 5 ವಿಕೆಟ್ ಸಾಧನೆಯಾಗಿದೆ. ಈ ಮೂಲಕ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ಐದು ವಿಕೆಟ್ ಪಡೆದವರ ಪಟ್ಟಿಯಲ್ಲಿ ಚಾಣಾಕ್ಷ ಆಫ್ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
Updated on: Feb 25, 2024 | 7:35 PM

ಭಾರತ ಮತ್ತು ಇಂಗ್ಲೆಂಡ್ ನಡುವೆ ರಾಂಚಿ ಮೈದಾನದಲ್ಲಿ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ರೋಚಕ ಹಂತಕ್ಕೆ ಬಂದು ನಿಂತಿದೆ. ಮೂರನೇ ದಿನದಾಟದ ಅಂತ್ಯಕ್ಕೆ ಭಾರತ ತಂಡ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದ್ದು, ಗೆಲುವಿಗೆ ಇನ್ನೂ 152 ರನ್ ಗಳಿಸಬೇಕಿದೆ.

46 ರನ್ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ರವಿಚಂದ್ರನ್ ಅಶ್ವಿನ್ ದಾಳಿಗೆ ತತ್ತರಿಸಿ ಕೇವಲ 145 ರನ್‌ಗಳಿಗೆ ಆಲೌಟ್ ಆಯಿತು. ಈ ಇನ್ನಿಂಗ್ಸ್‌ನಲ್ಲಿ ಬರೋಬ್ಬರಿ 5 ವಿಕೆಟ್ ಕಬಳಿಸಿದ ಅಶ್ವಿನ್ ಆಂಗ್ಲರನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು.

ಅಶ್ವಿನ್ ದಾಳಿಗೆ ಬಲಿಯಾದವರ ಪಟ್ಟಿಯಲ್ಲಿ ಮೊದಲ ಇನ್ನಿಂಗ್ಸ್‌ನ ಶತಕವೀರ ಜೋ ರೂಟ್ ಸಹ ಸೇರಿದ್ದಾರೆ. ರೂಟ್ಗೂ ಮೊದಲು ಅಶ್ವಿನ್, ಬೆನ್ ಡಕೆಟ್ ಮತ್ತು ಆಲಿ ಪೋಪ್ ಅವರನ್ನು ಬ್ಯಾಕ್ ಟು ಬ್ಯಾಕ್ ಎಸೆತಗಳಲ್ಲಿ ಔಟ್ ಮಾಡಿದ್ದರು. ಆ ನಂತರ ಬೆನ್ ಫೋಕ್ಸ್‌ರನ್ನು ಬಲಿ ಪಡೆದ ಅಶ್ವಿನ್ ಕೊನೆಯದಾಗಿ ಜೇಮ್ಸ್ ಆಂಡರ್ಸನ್ ಅವರನ್ನು ಪೆವಿಲಿಯನ್ಗಟ್ಟಿದರು.

ಎರಡನೇ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ಗಳ ಗೊಂಚಲು ಪಡೆದ ಅಶ್ವಿನ್ಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಇದು 35ನೇ 5 ವಿಕೆಟ್ ಸಾಧನೆಯಾಗಿದೆ. ಈ ಮೂಲಕ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ಐದು ವಿಕೆಟ್ ಪಡೆದವರ ಪಟ್ಟಿಯಲ್ಲಿ ಚಾಣಾಕ್ಷ ಆಫ್ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಅಲ್ಲದೆ ಟೆಸ್ಟ್ನಲ್ಲಿ ಅಧಿಕ ಬಾರಿ 5 ವಿಕೆಟ್ ಪಡೆದವರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಅಶ್ವಿನ್ ಆಕ್ರಮಿಸಿಕೊಂಡಿದ್ದಾರೆ. ಕನ್ನಡಿಗ ಅನಿಲ್ ಕುಂಬ್ಳೆ 132 ಪಂದ್ಯಗಳಲ್ಲಿ 35 ಬಾರಿ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದು, ಇದೀಗ 5ನೇ ಸ್ಥಾನಕ್ಕೆ ಜಾರಿದ್ದಾರೆ

ನಾಲ್ಕನೇ ಸ್ಥಾನಕ್ಕೆ ಮುಂಬಡ್ತಿ ಪಡೆದಿರುವ ಅಶ್ವಿನ್ 99 ಟೆಸ್ಟ್ ಪಂದ್ಯಗಳಲ್ಲಿ 35 ಬಾರಿ ಐದು ವಿಕೆಟ್ ಪಡೆದ ದಾಖಲೆ ನಿರ್ಮಿಸಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಶ್ರೀಲಂಕಾ ಲೆಜೆಂಡ್ ಮುತ್ತಯ್ಯ ಮುರಳೀಧರನ್ 133 ಟೆಸ್ಟ್ ಪಂದ್ಯಗಳಲ್ಲಿ ದಾಖಲೆಯ 67 ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.




