AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಅನಿಲ್ ಕುಂಬ್ಳೆ ದಾಖಲೆ ಸರಿಗಟ್ಟಿದ ಆರ್​ ಅಶ್ವಿನ್..!

R Ashwin: ಎರಡನೇ ಇನ್ನಿಂಗ್ಸ್​ನಲ್ಲಿ 5 ವಿಕೆಟ್​ಗಳ ಗೊಂಚಲು ಪಡೆದ ಅಶ್ವಿನ್​ಗೆ ಟೆಸ್ಟ್​ ಕ್ರಿಕೆಟ್​ನಲ್ಲಿ ಇದು 35ನೇ 5 ವಿಕೆಟ್ ಸಾಧನೆಯಾಗಿದೆ. ಈ ಮೂಲಕ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ಐದು ವಿಕೆಟ್ ಪಡೆದವರ ಪಟ್ಟಿಯಲ್ಲಿ ಚಾಣಾಕ್ಷ ಆಫ್ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಪೃಥ್ವಿಶಂಕರ
|

Updated on: Feb 25, 2024 | 7:35 PM

Share
ಭಾರತ ಮತ್ತು ಇಂಗ್ಲೆಂಡ್ ನಡುವೆ ರಾಂಚಿ ಮೈದಾನದಲ್ಲಿ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ರೋಚಕ ಹಂತಕ್ಕೆ ಬಂದು ನಿಂತಿದೆ. ಮೂರನೇ ದಿನದಾಟದ ಅಂತ್ಯಕ್ಕೆ ಭಾರತ ತಂಡ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದ್ದು, ಗೆಲುವಿಗೆ ಇನ್ನೂ 152 ರನ್ ಗಳಿಸಬೇಕಿದೆ.

1 / 7
46 ರನ್​ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ರವಿಚಂದ್ರನ್ ಅಶ್ವಿನ್ ದಾಳಿಗೆ ತತ್ತರಿಸಿ ಕೇವಲ 145 ರನ್‌ಗಳಿಗೆ ಆಲೌಟ್ ಆಯಿತು. ಈ ಇನ್ನಿಂಗ್ಸ್​ನಲ್ಲಿ ಬರೋಬ್ಬರಿ 5 ವಿಕೆಟ್ ಕಬಳಿಸಿದ ಅಶ್ವಿನ್ ಆಂಗ್ಲರನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು.

2 / 7
ಅಶ್ವಿನ್ ದಾಳಿಗೆ ಬಲಿಯಾದವರ ಪಟ್ಟಿಯಲ್ಲಿ ಮೊದಲ ಇನ್ನಿಂಗ್ಸ್‌ನ ಶತಕವೀರ ಜೋ ರೂಟ್‌ ಸಹ ಸೇರಿದ್ದಾರೆ. ರೂಟ್​ಗೂ ಮೊದಲು ಅಶ್ವಿನ್, ಬೆನ್ ಡಕೆಟ್ ಮತ್ತು ಆಲಿ ಪೋಪ್ ಅವರನ್ನು ಬ್ಯಾಕ್ ಟು ಬ್ಯಾಕ್ ಎಸೆತಗಳಲ್ಲಿ ಔಟ್ ಮಾಡಿದ್ದರು. ಆ ನಂತರ ಬೆನ್ ಫೋಕ್ಸ್‌ರನ್ನು ಬಲಿ ಪಡೆದ ಅಶ್ವಿನ್ ಕೊನೆಯದಾಗಿ ಜೇಮ್ಸ್ ಆಂಡರ್ಸನ್ ಅವರನ್ನು ಪೆವಿಲಿಯನ್​ಗಟ್ಟಿದರು.

3 / 7
ಎರಡನೇ ಇನ್ನಿಂಗ್ಸ್​ನಲ್ಲಿ 5 ವಿಕೆಟ್​ಗಳ ಗೊಂಚಲು ಪಡೆದ ಅಶ್ವಿನ್​ಗೆ ಟೆಸ್ಟ್​ ಕ್ರಿಕೆಟ್​ನಲ್ಲಿ ಇದು 35ನೇ 5 ವಿಕೆಟ್ ಸಾಧನೆಯಾಗಿದೆ. ಈ ಮೂಲಕ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ಐದು ವಿಕೆಟ್ ಪಡೆದವರ ಪಟ್ಟಿಯಲ್ಲಿ ಚಾಣಾಕ್ಷ ಆಫ್ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

4 / 7
ಅಲ್ಲದೆ ಟೆಸ್ಟ್​ನಲ್ಲಿ ಅಧಿಕ ಬಾರಿ 5 ವಿಕೆಟ್ ಪಡೆದವರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಅಶ್ವಿನ್ ಆಕ್ರಮಿಸಿಕೊಂಡಿದ್ದಾರೆ. ಕನ್ನಡಿಗ ಅನಿಲ್ ಕುಂಬ್ಳೆ 132 ಪಂದ್ಯಗಳಲ್ಲಿ 35 ಬಾರಿ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದು, ಇದೀಗ 5ನೇ ಸ್ಥಾನಕ್ಕೆ ಜಾರಿದ್ದಾರೆ

5 / 7
ನಾಲ್ಕನೇ ಸ್ಥಾನಕ್ಕೆ ಮುಂಬಡ್ತಿ ಪಡೆದಿರುವ ಅಶ್ವಿನ್ 99 ಟೆಸ್ಟ್​ ಪಂದ್ಯಗಳಲ್ಲಿ 35 ಬಾರಿ ಐದು ವಿಕೆಟ್ ಪಡೆದ ದಾಖಲೆ ನಿರ್ಮಿಸಿದ್ದಾರೆ.

6 / 7
ಇನ್ನು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಶ್ರೀಲಂಕಾ ಲೆಜೆಂಡ್ ಮುತ್ತಯ್ಯ ಮುರಳೀಧರನ್ 133 ಟೆಸ್ಟ್​ ಪಂದ್ಯಗಳಲ್ಲಿ ದಾಖಲೆಯ 67 ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

7 / 7
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಎಲ್‌ಎಸಿಯಲ್ಲಿ ಸೈನ್ಯದ ಗಸ್ತು ಮಾದರಿ ಬದಲಾವಣೆ; ಚೀನಾ ನಡೆಗೆ ಭಾರತ ಆಕ್ಷೇಪ

ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್