ಮುರಳೀಧರನ್ ವಿಶ್ವ ದಾಖಲೆ ಸರಿಗಟ್ಟಿದ ಅಶ್ವಿನ್

India vs Bangladesh: ಚೆನ್ನೈನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 280 ರನ್​ಗಳ ಅಮೋಘ ಗೆಲುವು ದಾಖಲಿಸಿತ್ತು. ಇದೀಗ ಕಾನ್ಪುರದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಈ ಮೂಲಕ ಎರಡು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

|

Updated on: Oct 01, 2024 | 4:16 PM

ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಸರಣಿ ಗೆಲುವಿನ ರೂವಾರಿಗಳಲ್ಲಿ ರವಿಚಂದ್ರನ್ ಅಶ್ವಿನ್ ಕೂಡ ಒಬ್ಬರು. ಈ ಸರಣಿಯ 2ನೇ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 2 ವಿಕೆಟ್ ಪಡೆದಿದ್ದ ಅಶ್ವಿನ್, 2ನೇ ಇನಿಂಗ್ಸ್​ನಲ್ಲಿ ಮೂರು ವಿಕೆಟ್ ಉರುಳಿಸಿದ್ದರು.

1 / 6
ಇನ್ನು ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಭರ್ಜರಿ ಶತಕದ ಜೊತೆಗೆ 6 ವಿಕೆಟ್​ಗಳನ್ನು ಸಹ ಕಬಳಿಸಿದ್ದರು. ಈ ಮೂಲಕ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್​ ಸರಣಿಯ ಪ್ಲೇಯರ್ ಆಫ್ ದಿ ಸಿರೀಸ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಸರಣಿ ಶ್ರೇಷ್ಠ ಪ್ರಶಸ್ತಿಯೊಂದಿಗೆ ಟೀಮ್ ಇಂಡಿಯಾ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಅವರ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

2 / 6
ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ದಾಖಲೆ ಶ್ರೀಲಂಕಾದ ಸ್ಪಿನ್ ಲೆಜೆಂಡ್ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. ಲಂಕಾ ಸ್ಪಿನ್ನರ್ 61 ಟೆಸ್ಟ್ ಸರಣಿಗಳಲ್ಲಿ ಒಟ್ಟು 11 ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

3 / 6
ಇದೀಗ ಈ ದಾಖಲೆಯನ್ನು ಸರಿಗಟ್ಟುವಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ಯಶಸ್ವಿಯಾಗಿದ್ದಾರೆ. ಈವರೆಗೆ 43 ಟೆಸ್ಟ್ ಸರಣಿಗಳನ್ನಾಡಿರುವ ರವಿಚಂದ್ರನ್ ಅಶ್ವಿನ್ 11 ಬಾರಿ ಪ್ಲೇಯರ್ ಆಫ್ ದಿ ಸಿರೀಸ್ ಪ್ರಶಸ್ತಿ ಪಡೆದಿದ್ದಾರೆ. ಈ ಮೂಲಕ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಸರಿಗಟ್ಟಿ ಹೊಸ ಇತಿಹಾಸ ರಚಿಸುವತ್ತ ದಾಪುಗಾಲಿಟ್ಟಿದ್ದಾರೆ.

4 / 6
ಮುರಳೀಧರನ್ ವಿಶ್ವ ದಾಖಲೆ ಸರಿಗಟ್ಟಿದ ಅಶ್ವಿನ್

5 / 6
ಇನ್ನು ಮುರಳೀಧರನ್ ಹೆಸರಿನಲ್ಲಿರುವ ಈ ವಿಶ್ವ ದಾಖಲೆ ಮುರಿಯಲು ಅಶ್ವಿನ್​ ನ್ಯೂಝಿಲೆಂಡ್ ವಿರುದ್ಧದ ಸರಣಿಯವರೆಗೂ ಕಾಯಬೇಕು. ಅಕ್ಟೋಬರ್​ 16 ರಿಂದ ಆರಂಭವಾಗಲಿರುವ ಈ ಸರಣಿಯಲ್ಲಿ ಭಾರತ ತಂಡವು 3 ಟೆಸ್ಟ್ ಪಂದ್ಯಗಳನ್ನಾಡಲಿದೆ. ಈ ಸರಣಿಯಲ್ಲೂ ಅಶ್ವಿನ್ ಅದ್ಭುತ ಪ್ರದರ್ಶನದೊಂದಿಗೆ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರೆ ಹೊಸ ವಿಶ್ವ ದಾಖಲೆ ನಿರ್ಮಾಣವಾಗಲಿದೆ.

6 / 6
Follow us
ಚೈತ್ರಾ ಕುಂದಾಪುರ ಧ್ಯಾನ, ಮಾನಸ ಅನುಮಾನ, ನರಕದಲ್ಲಿ ಮತ್ತೆ ಅಸಮಾಧಾನ

ಮುಡಾ ಹಗರಣ: ಸಿದ್ದರಾಮಯ್ಯ ಬಗ್ಗೆ ಆಪ್ತ ಸ್ನೇಹಿತನ ಮನದ ಮಾತು

ಚಲಿಸುತ್ತಿದ್ದ ಬಸ್ ಚಕ್ರವೇ ಕಿತ್ತೋಯ್ತು, ಮುಂದೇನಾಯ್ತು?

ಮುಡಾ ಪ್ರಕರಣ: ಯಡಿಯೂರಪ್ಪ ಪುತ್ರ, ಕುಮಾರಸ್ವಾಮಿಯಿಂದ ಈ ಕಳಂಕ- ಸಿಎಂ ಸಹೋದರ

ಮುಡಾ ಸೈಟ್​ಗೂ ಮುನ್ನವೇ ಹಲವು ಸೈಟ್ ಪಡೆದಿದ್ದ ಸಿದ್ದರಾಮಯ್ಯ: ಕುಮಾರಸ್ವಾಮಿ

ಚಂದ್ರಶೇಖರ್​ ಗೆಟ್​ ಲಾಸ್ಟ್​​ : ADGP ವಿರುದ್ಧ ಸಿಂಹ ಪ್ರತಾಪ

ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ

ಶಓಮಿ ರೆಡ್ಮಿ ಸ್ಮಾರ್ಟ್​ವಾಚ್ ಬ್ಯಾಟರಿ 18 ದಿನ ಬಾಳಿಕೆ ಬರುತ್ತೆ!

ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ

ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ