Updated on: Jul 24, 2023 | 3:15 PM
India vs West Indies: ಪೋರ್ಟ್ ಆಫ್ ಸ್ಪೇನ್ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಒಟ್ಟು 3 ವಿಕೆಟ್ ಕಬಳಿಸುವುದರೊಂದಿಗೆ ರವಿಚಂದ್ರ ಅಶ್ವಿನ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.
ಈ ಪಂದ್ಯದಲ್ಲಿ 3 ವಿಕೆಟ್ ಪಡೆಯುವುದರೊಂದಿಗೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ವಿಕೆಟ್ ಪಡೆದವರ ಪಟ್ಟಿಯಲ್ಲಿ ಅಶ್ವಿನ್ 2ನೇ ಸ್ಥಾನಕ್ಕೇರಿದ್ದಾರೆ. ಈ ಮೂಲಕ ಭಾರತದ 2ನೇ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿದ್ದಾರೆ.
ಹಾಗಿದ್ರೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ (ಏಷ್ಯಾನ್ ಇಲೆವೆನ್ ಒಳಗೊಂಡಂತೆ) ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ಗಳು ಯಾರೆಲ್ಲಾ ಎಂದು ನೋಡೋಣ...
1- ಅನಿಲ್ ಕುಂಬ್ಳೆ: ಟೀಮ್ ಇಂಡಿಯಾದ ಮಾಜಿ ನಾಯಕ ಅನಿಲ್ ಕುಂಬ್ಳೆ ಒಟ್ಟು 956 ವಿಕೆಟ್ ಕಬಳಿಸಿ ಈ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ.
2- ರವಿಚಂದ್ರನ್ ಅಶ್ವಿನ್: ಒಟ್ಟು 712 ವಿಕೆಟ್ಗಳನ್ನು ಕಬಳಿಸುವ ಮೂಲಕ ರವಿಚಂದ್ರನ್ ಅಶ್ವಿನ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ.
3- ಹರ್ಭಜನ್ ಸಿಂಗ್: ಟರ್ಬನೇಟರ್ ಖ್ಯಾತಿಯ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ಒಟ್ಟು 711 ವಿಕೆಟ್ ಕಬಳಿಸಿದ್ದಾರೆ.
4- ಕಪಿಲ್ ದೇವ್: ಟೀಮ್ ಇಂಡಿಯಾದ ಮಾಜಿ ನಾಯಕ ಕಪಿಲ್ ದೇವ್ ಒಟ್ಟು 687 ವಿಕೆಟ್ ಪಡೆದಿದ್ದಾರೆ.
5- ಝಹೀರ್ ಖಾನ್: ಟೀಮ್ ಇಂಡಿಯಾದ ಮಾಜಿ ಎಡಗೈ ವೇಗಿ ಝಹೀರ್ ಖಾನ್ ಒಟ್ಟು 610 ವಿಕೆಟ್ ಕಬಳಿಸಿ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.