AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಆರ್. ಪ್ರೇಮದಾಸ ಸ್ಟೇಡಿಯಂ ಪಿಚ್ ಬಗ್ಗೆ ಕೇಳಿದ್ರೆ ಅಚ್ಚರಿ ಆಗುತ್ತೆ: ಹೇಗಿದೆ ನೋಡಿ ಪಿಚ್

R. Premadasa Stadium Pitch Report: ಏಷ್ಯಾಕಪ್​ನಲ್ಲಿ ಇಂದು ನಡೆಯಲಿರುವ ಭಾರತ-ಪಾಕಿಸ್ತಾನ ಪಂದ್ಯದ ಕೊಲಂಬೊದಲ್ಲಿನ ಆರ್ ಪ್ರೇಮದಾಸ ಕ್ರೀಡಾಂಗಣದ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗುತ್ತದೆ. ಹೊಸ ವಿಕೆಟ್​ನಲ್ಲಿ ಬ್ಯಾಟರ್‌ಗಳು ಕೊಂಚ ಯಶಸ್ಸು ಸಾಧಿಸುತ್ತಾರೆ. ಇಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ ಸುಮಾರು 248 ರನ್​ಗಳಾಗಿದೆ.

Vinay Bhat
|

Updated on: Sep 10, 2023 | 7:21 AM

Share
ಏಷ್ಯಾಕಪ್ 2023 ಟೂರ್ನಿ ರೋಚಕ ಘಟ್ಟದತ್ತ ತಲುಪುತ್ತಿದೆ. ಇಂದು ನಡೆಯಲಿರುವ ಸೂಪರ್-4 ಹಂತದ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗರಾದ ಭಾರತ-ಪಾಕಿಸ್ತಾನ ಮುಖಾಮುಖಿ ಆಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ.

1 / 7
ಸೂಪರ್-4ನಲ್ಲಿ ಈಗಾಗಲೇ ಮೊದಲ ಪಂದ್ಯ ಗೆದ್ದಿರುವ ಬಾಬರ್ ಪಡೆ ಮತ್ತೊಂದು ಜಯದತ್ತ ಕಣ್ಣಿಟ್ಟಿದ್ದರೆ, ಇತ್ತ ಟೀಮ್ ಇಂಡಿಯಾ ಮೊದಲ ಗೆಲುವಿನ ಆಸೆಯಲ್ಲಿದೆ. ಹೀಗಾಗಿ ಪ್ರೇಮದಾಸ ಸ್ಟೇಡಿಯಂನಲ್ಲಿ ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ. ಹಾಗಾದರೆ ಕೊಲಂಬೊ ಪಿಚ್ ಯಾರಿಗೆ ಸಹಕಾರಿ?, ಹೇಗಿದೆ ಎಂಬುದನ್ನು ನೋಡೋಣ.

2 / 7
ಕೊಲಂಬೊದಲ್ಲಿನ ಆರ್ ಪ್ರೇಮದಾಸ ಕ್ರೀಡಾಂಗಣದ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗುತ್ತದೆ. ಹೊಸ ವಿಕೆಟ್​ನಲ್ಲಿ ಬ್ಯಾಟರ್‌ಗಳು ಕೊಂಚ ಯಶಸ್ಸು ಸಾಧಿಸುತ್ತಾರೆ. ಇಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ ಸುಮಾರು 248 ರನ್​ಗಳಾಗಿದೆ. ಆದಾಗ್ಯೂ, 2023 ರ ಏಷ್ಯಾಕಪ್‌ನಲ್ಲಿ ಈ ಪಿಚ್ ಇನ್ನೂ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.

3 / 7
ಈ ಪಿಚ್ ನಿಧಾನಗತಿಯ ಬೌಲರ್‌ಗಳಿಗೆ ಕೂಡ ಸಹಾಯ ಮಾಡಲಿದೆ. ವಿಶೇಷವಾಗಿ ಮಧ್ಯಮ ಓವರ್‌ಗಳಲ್ಲಿ ಬ್ಯಾಟರ್‌ಗಳು ರನ್ ಗಳಿಸಲು ಪರದಾಡುವುದು ಖಚಿತ. ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿನ ಬೌಂಡರಿಗಳು ವಿಸ್ತಾರವಾಗಿಲ್ಲ, ಮತ್ತು ಔಟ್‌ಫೀಲ್ಡ್ ಸಾಕಷ್ಟು ವೇಗವಾಗಿದ್ದು, 250 ಕ್ಕಿಂತ ಹೆಚ್ಚು ರನ್ ಕಲೆಹಾಕಿದರೆ ಇದು ದೊಡ್ಡ ಟಾರ್ಗೆಟ್ ಎನ್ನಬಹುದು.

4 / 7
ಹಿಂದಿನ ಮುಖಾಮುಖಿಯಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಹೀನಾಯ ಬ್ಯಾಟಿಂಗ್ ಪ್ರದರ್ಶನ ತೋರಿತ್ತು. ನಾಯಕ ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಬೇಗೆನ ಔಟಾಗಿ ಪೆವಿಲಿಯನ್ ಸೇರಿದ್ದರು. ಇಶಾನ್ ಕಿಶನ್ ಮತ್ತು ಹಾರ್ದಿಕ್ ಪಾಂಡ್ಯ ಮಾತ್ರ ತಂಡಕ್ಕೆ ಆಸರೆಯಾಗಿದ್ದರು. ಇಂದಿನ ಪಂದ್ಯದಲ್ಲಿ ಭಾರತ ತಪ್ಪುಗಳನ್ನು ಸರಿಪಡಿಸಿ ಉತ್ತಮ ಆಟ ಆಡಬೇಕಿದೆ.

5 / 7
ಭಾರತಕ್ಕಿರುವ ಆತ್ಮವಿಶ್ವಾಸ ಎಂದರೆ ಪ್ರೇಮದಾಸ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ಉತ್ತಮ ದಾಖಲೆಯನ್ನು ಹೊಂದಿದೆ, ತನ್ನ ಕೊನೆಯ 8 ಪಂದ್ಯಗಳಲ್ಲಿ 7 ಅನ್ನು ಗೆದ್ದಿದೆ. ಪಾಕಿಸ್ತಾನ ಈ ಮೈದಾನದಲ್ಲಿ ತನ್ನ ಕೊನೆಯ 4 ಏಕದಿನದಲ್ಲಿ 2 ಗೆದ್ದಿದೆ ಮತ್ತು 2 ರಲ್ಲಿ ಸೋತಿದೆ.

6 / 7
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ.

7 / 7