Rachin Ravindra: ಸ್ಪೋಟಕ ಶತಕ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ ಕನ್ನಡಿಗ ರಚಿನ್ ರವೀಂದ್ರ

Rachin Ravindra Century: ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಚಿನ್ ರವೀಂದ್ರ 89 ಎಸೆತಗಳನ್ನು ಎದುರಿಸಿದರು. ಈ ವೇಳೆ 5 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 116 ರನ್ ಬಾರಿಸಿದರು. ಅಲ್ಲದೆ ಅಂತಿಮವಾಗಿ ಪ್ಯಾಟ್ ಕಮಿನ್ಸ್ ಎಸೆತದಲ್ಲಿ ಮಾರ್ನಸ್ ಲಾಬುಶೇನ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

TV9 Web
| Updated By: ಝಾಹಿರ್ ಯೂಸುಫ್

Updated on: Oct 28, 2023 | 5:57 PM

ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್​ನ 27ನೇ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ಯುವ ಎಡಗೈ ದಾಂಡಿಗ ರಚಿನ್ ರವೀಂದ್ರ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಚಿನ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

1 / 7
ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ರನ್ ಕಲೆಹಾಕುತ್ತಾ ಸಾಗಿದ ರಚಿನ್ ರವೀಂದ್ರ ಅರ್ಧಶತಕದ ಬಳಿಕ ಬಿರುಸಿನ ಆಟಕ್ಕೆ ಒತ್ತು ನೀಡಿದರು. ಪರಿಣಾಮ ಕೇವಲ 77 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿದರು.

2 / 7
ಈ ಸೆಂಚುರಿಯೊಂದಿಗೆ ಏಕದಿನ ವಿಶ್ವಕಪ್​ನಲ್ಲಿ 2 ಶತಕ ಬಾರಿಸಿದ 2ನೇ ಅತೀ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ರಚಿನ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಇಂತಹದೊಂದು ವಿಶೇಷ ದಾಖಲೆ ನಿರ್ಮಿಸಿದ್ದರು.

3 / 7
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 23ನೇ ವಯಸ್ಸಿನಲ್ಲಿ 2 ವಿಶ್ವಕಪ್ ಶತಕಗಳನ್ನು ಬಾರಿಸಿ ದಾಖಲೆ ಬರೆದಿದ್ದರು. ಇದೀಗ ರಚಿನ್ ರವೀಂದ್ರ ಕೂಡ 23ನೇ ವಯಸ್ಸಿನಲ್ಲೇ ಈ ಸಾಧನೆಯನ್ನು ಸರಿಗಟ್ಟಿರುವುದು ವಿಶೇಷ.

4 / 7
ಇದಲ್ಲದೆ ಏಕದಿನ ವಿಶ್ವಕಪ್​ ಆವೃತ್ತಿಯಲ್ಲಿ 2 ಶತಕ ಬಾರಿಸಿದ ನ್ಯೂಝಿಲೆಂಡ್​ನ ನಾಲ್ಕನೇ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ರಚಿನ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಗ್ಲೆನ್ ಟರ್ನರ್, ಮಾರ್ಟಿನ್ ಗಪ್ಟಿಲ್ ಹಾಗೂ ಕೇನ್ ವಿಲಿಯಮ್ಸನ್ ಮಾತ್ರ ಈ ಸಾಧನೆ ಮಾಡಿದ್ದರು.

5 / 7
ಇದೀಗ ಈ ಬಾರಿಯ ವಿಶ್ವಕಪ್​ನಲ್ಲಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಸಿಡಿಸುವ ಮೂಲಕ ರಚಿನ್ ರವೀಂದ್ರ ಈ ಸಾಧನೆ ಮಾಡಿದ ನ್ಯೂಝಿಲೆಂಡ್​ನ ಮೊದಲ ಎಡಗೈ ದಾಂಡಿಗ ಹಾಗೂ 4ನೇ ಬ್ಯಾಟರ್​ ಎನಿಸಿಕೊಂಡಿದ್ದಾರೆ.

6 / 7
ಇನ್ನು ಈ ಪಂದ್ಯದಲ್ಲಿ 89 ಎಸೆತಗಳನ್ನು ಎದುರಿಸಿದ ರಚಿನ್ ರವೀಂದ್ರ 5 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 116 ರನ್ ಬಾರಿಸಿ ಔಟಾದರು.

7 / 7
Follow us
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್