Rachin Ravindra: ಸ್ಪೋಟಕ ಶತಕ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ ಕನ್ನಡಿಗ ರಚಿನ್ ರವೀಂದ್ರ
TV9 Web | Updated By: ಝಾಹಿರ್ ಯೂಸುಫ್
Updated on:
Oct 28, 2023 | 5:57 PM
Rachin Ravindra Century: ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಚಿನ್ ರವೀಂದ್ರ 89 ಎಸೆತಗಳನ್ನು ಎದುರಿಸಿದರು. ಈ ವೇಳೆ 5 ಭರ್ಜರಿ ಸಿಕ್ಸ್ ಹಾಗೂ 9 ಫೋರ್ಗಳೊಂದಿಗೆ 116 ರನ್ ಬಾರಿಸಿದರು. ಅಲ್ಲದೆ ಅಂತಿಮವಾಗಿ ಪ್ಯಾಟ್ ಕಮಿನ್ಸ್ ಎಸೆತದಲ್ಲಿ ಮಾರ್ನಸ್ ಲಾಬುಶೇನ್ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.
1 / 7
ಧರ್ಮಶಾಲಾದ ಹೆಚ್ಪಿಸಿಎ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್ನ 27ನೇ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ಯುವ ಎಡಗೈ ದಾಂಡಿಗ ರಚಿನ್ ರವೀಂದ್ರ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಚಿನ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.
2 / 7
ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ನೊಂದಿಗೆ ರನ್ ಕಲೆಹಾಕುತ್ತಾ ಸಾಗಿದ ರಚಿನ್ ರವೀಂದ್ರ ಅರ್ಧಶತಕದ ಬಳಿಕ ಬಿರುಸಿನ ಆಟಕ್ಕೆ ಒತ್ತು ನೀಡಿದರು. ಪರಿಣಾಮ ಕೇವಲ 77 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿದರು.
3 / 7
ಈ ಸೆಂಚುರಿಯೊಂದಿಗೆ ಏಕದಿನ ವಿಶ್ವಕಪ್ನಲ್ಲಿ 2 ಶತಕ ಬಾರಿಸಿದ 2ನೇ ಅತೀ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ರಚಿನ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಇಂತಹದೊಂದು ವಿಶೇಷ ದಾಖಲೆ ನಿರ್ಮಿಸಿದ್ದರು.
4 / 7
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 23ನೇ ವಯಸ್ಸಿನಲ್ಲಿ 2 ವಿಶ್ವಕಪ್ ಶತಕಗಳನ್ನು ಬಾರಿಸಿ ದಾಖಲೆ ಬರೆದಿದ್ದರು. ಇದೀಗ ರಚಿನ್ ರವೀಂದ್ರ ಕೂಡ 23ನೇ ವಯಸ್ಸಿನಲ್ಲೇ ಈ ಸಾಧನೆಯನ್ನು ಸರಿಗಟ್ಟಿರುವುದು ವಿಶೇಷ.
5 / 7
ಇದಲ್ಲದೆ ಏಕದಿನ ವಿಶ್ವಕಪ್ ಆವೃತ್ತಿಯಲ್ಲಿ 2 ಶತಕ ಬಾರಿಸಿದ ನ್ಯೂಝಿಲೆಂಡ್ನ ನಾಲ್ಕನೇ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ರಚಿನ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಗ್ಲೆನ್ ಟರ್ನರ್, ಮಾರ್ಟಿನ್ ಗಪ್ಟಿಲ್ ಹಾಗೂ ಕೇನ್ ವಿಲಿಯಮ್ಸನ್ ಮಾತ್ರ ಈ ಸಾಧನೆ ಮಾಡಿದ್ದರು.
6 / 7
ಇದೀಗ ಈ ಬಾರಿಯ ವಿಶ್ವಕಪ್ನಲ್ಲಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಸಿಡಿಸುವ ಮೂಲಕ ರಚಿನ್ ರವೀಂದ್ರ ಈ ಸಾಧನೆ ಮಾಡಿದ ನ್ಯೂಝಿಲೆಂಡ್ನ ಮೊದಲ ಎಡಗೈ ದಾಂಡಿಗ ಹಾಗೂ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
7 / 7
ಇನ್ನು ಈ ಪಂದ್ಯದಲ್ಲಿ 89 ಎಸೆತಗಳನ್ನು ಎದುರಿಸಿದ ರಚಿನ್ ರವೀಂದ್ರ 5 ಭರ್ಜರಿ ಸಿಕ್ಸ್ ಹಾಗೂ 9 ಫೋರ್ಗಳೊಂದಿಗೆ 116 ರನ್ ಬಾರಿಸಿ ಔಟಾದರು.