AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rachin Ravindra: ಟೆಸ್ಟ್​ನಲ್ಲೂ ಕನ್ನಡಿಗನ ಕಮಾಲ್​: ಭರ್ಜರಿ ಸೆಂಚುರಿ ಸಿಡಿಸಿದ ರಚಿನ್ ರವೀಂದ್ರ

Rachin Ravindra: ನ್ಯೂಝಿಲೆಂಡ್ ಪರ ಕಣಕ್ಕಿಳಿಯುತ್ತಿರುವ ಕರ್ನಾಟಕ ಮೂಲದ 24 ವರ್ಷದ ರಚಿನ್ ರವೀಂದ್ರ ಈಗಾಗಲೇ 4 ಅಂತಾರಾಷ್ಟ್ರೀಯ ಶತಕಗಳನ್ನು ಸಿಡಿಸಿದ್ದಾರೆ. ಕಳೆದ ಬಾರಿಯ ಏಕದಿನ ವಿಶ್ವಕಪ್​ನಲ್ಲಿ 3 ಭರ್ಜರಿ ಸೆಂಚುರಿ ಸಿಡಿಸಿ ಅಬ್ಬರಿಸಿದ್ದ ರಚಿನ್ ಇದೀಗ ಟೆಸ್ಟ್ ಕ್ರಿಕೆಟ್​ನಲ್ಲಿ ಚೊಚ್ಚಲ ಶತಕ ಬಾರಿಸಿದ್ದಾರೆ.

TV9 Web
| Edited By: |

Updated on: Feb 04, 2024 | 2:04 PM

Share
ನ್ಯೂಝಿಲೆಂಡ್​ನ	ಮೌಂಟ್ ಮೌಂಗನುಯಿನಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಯುವ ಎಡಗೈ ಬ್ಯಾಟರ್ ರಚಿನ್ ರವೀಂದ್ರ (Rachin Ravindra) ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿತು.

1 / 7
ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ಟಾಮ್ ಲಾಥಮ್ (20) ಹಾಗೂ ಡೆವೊನ್ ಕಾನ್ವೆ (1) ಬೇಗನೆ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಜೊತೆಗೂಡಿದ ಕೇನ್ ವಿಲಿಯಮ್ಸನ್ ಮತ್ತು ರಚಿನ್ ರವೀಂದ್ರ ನ್ಯೂಝಿಲೆಂಡ್ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

2 / 7
ಆರಂಭದಿಂದಲೇ ಎಚ್ಚರಿಕೆಯೊಂದಿಗೆ ಬ್ಯಾಟಿಂಗ್ ಪ್ರದರ್ಶಿಸಿದ ರಚಿನ್ ರವೀಂದ್ರ ಕೇನ್​ ವಿಲಿಯಮ್ಸ್​ಗೆ ಉತ್ತಮ ಸಾಥ್ ನೀಡಿದರು. ಪರಿಣಾಮ 241 ಎಸೆತಗಳಲ್ಲಿ ವಿಲಿಯಮ್ಸನ್ 30ನೇ ಟೆಸ್ಟ್​ ಶತಕ ಪೂರೈಸಿದರು.

3 / 7
ಮತ್ತೊಂದೆಡೆ ಆಕರ್ಷಕ ಹೊಡೆತಗಳೊಂದಿಗೆ ರನ್ ಪೇರಿಸುತ್ತಾ ಸಾಗಿದ ರಚಿನ್ ರವೀಂದ್ರ 189 ಎಸೆತಗಳಲ್ಲಿ 10 ಫೋರ್ ಹಾಗೂ 1 ಸಿಕ್ಸರ್​ನೊಂದಿಗೆ ಚೊಚ್ಚಲ ಟೆಸ್ಟ್ ಶತಕ ಪೂರೈಸಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲೂ ಛಾಪು ಮೂಡಿಸುವಲ್ಲಿ ರಚಿನ್ ರವೀಂದ್ರ ಯಶಸ್ವಿಯಾಗಿದ್ದಾರೆ.

4 / 7
ಈ ಅಜೇಯ ಶತಕಗಳೊಂದಿಗೆ ರಚಿನ್ ರವೀಂದ್ರ (118) ಹಾಗೂ ಕೇನ್ ವಿಲಿಯಮ್ಸನ್ (112) 3ನೇ ವಿಕೆಟ್​ಗೆ 219 ರನ್​ ಕಲೆಹಾಕಿದ್ದಾರೆ. ಈ ಮೂಲಕ ಮೊದಲ ದಿನದಾಟದ ಮುಕ್ತಾಯದ ವೇಳೆಗೆ ನ್ಯೂಝಿಲೆಂಡ್ 2 ವಿಕೆಟ್ ಕಳೆದುಕೊಂಡು 258 ರನ್ ಕಲೆಹಾಕಿದೆ.

5 / 7
ಅಂದಹಾಗೆ ಇದು 24 ವರ್ಷದ ರಚಿನ್ ರವೀಂದ್ರ ಅವರ 4ನೇ ಅಂತಾರಾಷ್ಟ್ರೀಯ ಶತಕ ಎಂಬುದು ವಿಶೇಷ. ಇದಕ್ಕೂ ಮುನ್ನ ಏಕದಿನ ಕ್ರಿಕೆಟ್​ನಲ್ಲಿ ರಚಿನ್ 3 ಶತಕ ಬಾರಿಸಿ ಮಿಂಚಿದ್ದಾರೆ. ಈ ಮೂರು ಏಕದಿನ ಶತಕಗಳು 2023 ರ ವಿಶ್ವಕಪ್​ನಲ್ಲಿ ಮೂಡಿಬಂದಿತ್ತು.

6 / 7
ಕಳೆದ ಬಾರಿಯ ವಿಶ್ವಕಪ್​ನಲ್ಲಿ 10 ಪಂದ್ಯಗಳನ್ನಾಡಿದ್ದ ರಚಿನ್ 578 ರನ್ ಬಾರಿಸಿ ನ್ಯೂಝಿಲೆಂಡ್ ಪರ ಟಾಪ್ ರನ್ ಸ್ಕೋರರ್ ಆಗಿ ಹೊರಹೊಮ್ಮಿದ್ದರು. ಇದೀಗ ಟೆಸ್ಟ್ ಕ್ರಿಕೆಟ್​ನಲ್ಲೂ ಶತಕದ ಖಾತೆ ತೆರೆದಿರುವ ಯುವ ದಾಂಡಿಗನಿಂದ ಮುಂಬರುವ ದಿನಗಳಲ್ಲಿ ಭರ್ಜರಿ ಬ್ಯಾಟಿಂಗ್ ಅನ್ನು ನಿರೀಕ್ಷಿಸಬಹುದು.

7 / 7
Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​