AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬರ್ ವಿಶ್ವ ದಾಖಲೆ ಮುರಿದ ಗುರ್ಬಾಝ್

ಟಿ20 ಕ್ರಿಕೆಟ್ ಜಗತ್ತಿನಲ್ಲಿ ಈಗ ಅಫ್ಘಾನ್ ತಾರೆ ರಹಮಾನುಲ್ಲಾ ಗುರ್ಬಾಝ್ ಅವರದ್ದೇ ಹವಾ! ಕೆರೆಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅಬ್ಬರಿಸುತ್ತಿರುವ ಈ ಯುವ ಬ್ಯಾಟರ್, ಪಾಕಿಸ್ತಾನದ ರನ್‌ ಮಷೀನ್ ಬಾಬರ್ ಆಝಂ ಅವರ ಸಾರ್ವಕಾಲಿಕ ದಾಖಲೆಯನ್ನೇ ಅಳಿಸಿ ಹಾಕಿದ್ದಾರೆ. ಆ ಮೂಲಕ ಅಫ್ಘಾನ್ ದಾಂಡಿಗ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 05, 2026 | 11:04 AM

Share
ಅಫ್ಘಾನಿಸ್ತಾನ್ ತಂಡದ ಸ್ಫೋಟಕ ಬ್ಯಾಟರ್ ರಹಮಾನುಲ್ಲಾ ಗುರ್ಬಾಝ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಪಾಕಿಸ್ತಾನ್ ತಂಡದ ಬಾಬರ್ ಆಝಂ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಗುರ್ಬಾಝ್, ಕೇವಲ 24ನೇ ವಯಸ್ಸಿನಲ್ಲಿಯೇ ಈ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. (PC: CPL)

1 / 5
ಕೆರಿಬಿಯನ್ ಪ್ರೀಮಿಯರ್ ಲೀಗ್​ನ 26ನೇ ಪಂದ್ಯದಲ್ಲಿ ಜಮೈಕಾ ಕಿಂಗ್ಸ್​ಮೆನ್ ವಿರುದ್ಧ ಗಯಾನಾ ಅಮೆಝಾನ್ ವಾರಿಯರ್ಸ್ ಪರ ಕಣಕ್ಕಿಳಿದ ರಹಮಾನುಲ್ಲಾ ಗುರ್ಬಾಝ್ ಕೇವಲ 35 ಎಸೆತಗಳಲ್ಲಿ 54 ರನ್ ಬಾರಿಸಿದ್ದರು. ಈ 54 ರನ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ 7 ಸಾವಿರ ರನ್ ಪೂರೈಸಿದ್ದಾರೆ. (PC: CPL)

2 / 5
ಈ 7000 ರನ್​ಗಳೊಂದಿಗೆ, ಟಿ20 ಕ್ರಿಕೆಟ್ ಇತಿಹಾಸದಲ್ಲೇ 7 ಸಾವಿರ ರನ್​ ಪೂರೈಸಿದ ವಿಶ್ವದ ಅತ್ಯಂತ ಕಿರಿಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಪಾಕಿಸ್ತಾನ್ ತಂಡದ ಬ್ಯಾಟರ್ ಬಾಬರ್ ಆಝಂ ಹೆಸರಿನಲ್ಲಿತ್ತು. (PC: CPL)

3 / 5
ಪಾಕಿಸ್ತಾನದ ಬಾಬರ್ ಆಝಂ ತಮ್ಮ 27ನೇ ವಯಸ್ಸಿನಲ್ಲಿ (27 ವರ್ಷ 342 ದಿನಗಳು) ಟಿ20 ಕ್ರಿಕೆಟ್​ನಲ್ಲಿ 7000 ರನ್ ಪೂರೈಸಿದ್ದರು. ಈ ಮೂಲಕ ಚುಟುಕು ಕ್ರಿಕೆಟ್​ನಲ್ಲಿ 7 ಸಾವಿರ ರನ್ ಪೂರೈಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಗುರ್ಬಾಝ್ ಮುರಿದಿದ್ದಾರೆ. (PC: PSL)

4 / 5
ರಹಮಾನುಲ್ಲಾ ಗುರ್ಬಾಝ್ ಕೇವಲ 24ನೇ ವಯಸ್ಸಿಗೆ ಈ ಮೈಲಿಗಲ್ಲು ತಲುಪಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ 7000 ರನ್ ಕಲೆಹಾಕಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: CPL)

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ

ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ

ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ

ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ

ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು

ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?

ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ

ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ

ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ

ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ