ಗುರ್ಬಾಝ್ ಅಬ್ಬರಕ್ಕೆ ವಿರಾಟ್ ಕೊಹ್ಲಿ – ಸಚಿನ್ ತೆಂಡೂಲ್ಕರ್ ದಾಖಲೆ ಉಡೀಸ್
Afghanistan vs Bangladesh: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 50 ಓವರ್‌ಗಳಲ್ಲಿ 244 ರನ್ ಕಲೆಹಾಕಿತು. ಈ ಗುರಿಯನ್ನು 48.2 ಓವರ್‌ಗಳಲ್ಲಿ ಚೇಸ್ ಮಾಡಿ ಅಫ್ಘಾನಿಸ್ತಾನ್ 5 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ.
1 / 7
ಶಾರ್ಜಾದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ರಹಮಾನುಲ್ಲಾ ಗುರ್ಬಾಝ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಗುರ್ಬಾಝ್ 120 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 5 ಫೋರ್ ಗಳೊಂದಿಗೆ 101 ರನ್ ಬಾರಿಸಿದ್ದರು.
2 / 7
ಈ ಭರ್ಜರಿ ಶತಕದೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ಅತೀ ಕಡಿಮೆ ವಯಸ್ಸಿನಲ್ಲಿ ಅತ್ಯಧಿಕ ಶತಕ ಸಿಡಿಸಿದ ಏಷ್ಯನ್ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮುನ್ನ ಈ ವಿಶೇಷ ದಾಖಲೆ ವಿರಾಟ್ ಕೊಹ್ಲಿ ಹಾಗೂ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.
3 / 7
ಸಚಿನ್ ತೆಂಡೂಲ್ಕರ್ ತಮ್ಮ 22ನೇ (357 ದಿನಗಳು) ವಯಸ್ಸಿನಲ್ಲಿ 8 ಏಕದಿನ ಶತಕ ಸಿಡಿಸಿದ್ದರು. ಹಾಗೆಯೇ ವಿರಾಟ್ ಕೊಹ್ಲಿ 23ನೇ (027 ದಿನಗಳು) ವಯಸ್ಸಿನಲ್ಲಿ 8 ಏಕದಿನ ಶತಕ ಬಾರಿಸಿದ್ದರು.
4 / 7
ಆದರೀಗ 22ನೇ (349 ದಿನಗಳು) ವಯಸ್ಸಿನಲ್ಲಿ 8ನೇ ಶತಕ ಸಿಡಿಸುವ ಮೂಲಕ ರಹಮಾನುಲ್ಲಾ ಗುರ್ಬಾಝ್ ವಿರಾಟ್ ಕೊಹ್ಲಿ ಹಾಗೂ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದಿದ್ದಾರೆ. ಅಲ್ಲದೆ 23 ವರ್ಷದೊಳಗೆ ಅತ್ಯಧಿಕ ಏಕದಿನ ಶತಕ ಸಿಡಿಸಿದ ಏಷ್ಯನ್ ಬ್ಯಾಟರ್ ಎನಿಸಿಕೊಂಡಿದ್ದಾರೆ.
5 / 7
ಹಾಗೆಯೇ 23 ವರ್ಷದೊಳಗೆ ಅತೀ ಹೆಚ್ಚು ಸೆಂಚುರಿ ಸಿಡಿಸಿದ ವಿಶ್ವದ ಎರಡನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ ಸೌತ್ ಆಫ್ರಿಕಾದ ಕ್ವಿಂಟನ್ ಡಿಕಾಕ್ ಅಗ್ರಸ್ಥಾನದಲ್ಲಿದ್ದಾರೆ.
6 / 7
ಕ್ವಿಂಟನ್ ಡಿಕಾಕ್ 22ನೇ (312 ದಿನಗಳು) ವಯಸ್ಸಿನಲ್ಲಿ ಒಟ್ಟು 8 ಏಕದಿನ ಸೆಂಚುರಿ ಸಿಡಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದೀಗ ಈ ಪಟ್ಟಿಯಲ್ಲಿ ರಹಮಾನುಲ್ಲಾ ಗುರ್ಬಾಝ್ ದ್ವಿತೀಯ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ.
7 / 7
ಇನ್ನು ಗುರ್ಬಾಝ್ ಅವರ ಶತಕದ ನೆರವಿನಿಂದ ಈ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 50 ಓವರ್‌ಗಳಲ್ಲಿ 244 ರನ್ ಕಲೆಹಾಕಿತು. ಈ ಗುರಿಯನ್ನು 48.2 ಓವರ್‌ಗಳಲ್ಲಿ ಚೇಸ್ ಮಾಡಿ ಅಫ್ಘಾನಿಸ್ತಾನ್ 5 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ.