AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ರಹಮಾನುಲ್ಲಾ ಗುರ್ಬಾಝ್!

India vs Afghanistan, 1st ODI: ಮಳೆಯ ಕಾರಣ 25 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡ 194 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಟೀಮ್ ಇಂಡಿಯಾ 22.5 ಓವರ್​ಗಳಲ್ಲಿ ಚೇಸ್ ಮಾಡಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Jun 14, 2026 | 10:07 AM

Share
ಅಫ್ಘಾನಿಸ್ತಾನ್  ತಂಡದ ಆರಂಭಿಕ ದಾಂಡಿಗ ರಹಮಾನುಲ್ಲಾ ಗುರ್ಬಾಝ್ ಭಾರತದ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಧರ್ಮಶಾಲಾದ ಹೆಚ್.ಪಿ.ಸಿ.ಎ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಗುರ್ಬಾಝ್ ಕೇವಲ 48 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಆ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ... (PC: gettyimages)

1 / 5
ಅತ್ಯಂತ ವೇಗದ ಶತಕ: ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 50ಕ್ಕಿಂತ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿದ ಅಫ್ಘಾನಿಸ್ತಾನದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಗುರ್ಬಾಝ್ ಪಾತ್ರರಾಗಿದ್ದಾರೆ. ಈ ಹಿಂದೆ ಮೊಹಮ್ಮದ್ ಶಝಾದ್ ಹೆಸರಲ್ಲಿದ್ದ (72 ಎಸೆತಗಳು) ದಾಖಲೆಯನ್ನು ರಹಮಾನುಲ್ಲಾ ಗುರ್ಬಾಝ್ ಮುರಿದಿದ್ದಾರೆ. (PC: gettyimages)

2 / 5
ಎರಡನೇ ಅತ್ಯಂತ ವೇಗದ ಶತಕ: ಭಾರತ ತಂಡದ ವಿರುದ್ಧ ಏಕದಿನ ಪಂದ್ಯವೊಂದರಲ್ಲಿ ದಾಖಲಾದ ಎರಡನೇ ಅತ್ಯಂತ ವೇಗದ ಶತಕ ಇದಾಗಿದೆ. 2005ರಲ್ಲಿ ಪಾಕಿಸ್ತಾನದ ಶಾಹಿದ್ ಅಫ್ರಿದಿ 45 ಎಸೆತಗಳಲ್ಲಿ ಶತಕ ಗಳಿಸಿದ್ದು ಸರ್ವಶ್ರೇಷ್ಠ ದಾಖಲೆಯಾಗಿದೆ. ಇದೀಗ 48 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಗುರ್ಬಾಝ್ ಟೀಮ್ ಇಂಡಿಯಾ ವಿರುದ್ಧ ಅತೀ ವೇಗದ ಶತಕ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: gettyimages)

3 / 5
ಮೊದಲ ಬ್ಯಾಟರ್: ಟೀಮ್ ಇಂಡಿಯಾ ವಿರುದ್ಧ ಭಾರತದಲ್ಲಿ ಏಕದಿನ ಶತಕ ಸಿಡಿಸಿದ ಅಫ್ಘಾನಿಸ್ತಾನದ ಮೊದಲ ಬ್ಯಾಟರ್​ ಎಂಬ ಐತಿಹಾಸಿಕ ದಾಖಲೆ ಕೂಡ ರಹಮಾನುಲ್ಲಾ ಗುರ್ಬಾಝ್ ಪಾಲಾಗಿದೆ. ಇದಕ್ಕೂ ಮುನ್ನ ಅಫ್ಘಾನ್ ತಂಡ ಯಾವುದೇ ಬ್ಯಾಟರ್ ಭಾರತದಲ್ಲಿ ಭಾರತದ ವಿರುದ್ಧ ಶತಕ ಸಿಡಿಸಿದ ಇತಿಹಾಸ ಇರಲಿಲ್ಲ. (PC: gettyimages)

4 / 5
ಎರಡನೇ ಬ್ಯಾಟರ್: ಟೀಮ್ ಇಂಡಿಯಾ ವಿರುದ್ಧ ಏಕದಿನ ಕ್ರಿಕೆಟ್​ನಲ್ಲಿ 50 ಕ್ಕಿಂತ ಕಡಿಮೆ ಎಸೆತಗಳಲ್ಲಿ ಸೆಂಚುರಿ ಸಿಡಿಸಿದ 2ನೇ ವಿದೇಶಿ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನೂ ಕೂಡ ರಹಮಾನುಲ್ಲಾ ಗುರ್ಬಾಝ್ ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಪಾಕಿಸ್ತಾನದ ಮಾಜಿ ಆಟಗಾರ ಶಾಹಿದ್ ಅಫ್ರಿದಿ (45 ಎಸೆತಗಳು) ಅಗ್ರಸ್ಥಾನದಲ್ಲಿದ್ದಾರೆ. (PC: gettyimages)

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಮಂತ್ರಾಲಯದಲ್ಲಿ ಪ್ರತಿನಿತ್ಯ ಭಕ್ತ ಸಾಗರ: ವಸತಿಗೂ ಪರದಾಟ

ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ?
ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ?
ಇಂದು ಈ ರಾಶಿಯವರು ಕೆಲಸಗಳಲ್ಲಿ ಅವಸರ ಮಾಡಬೇಡಿ
ಇಂದು ಈ ರಾಶಿಯವರು ಕೆಲಸಗಳಲ್ಲಿ ಅವಸರ ಮಾಡಬೇಡಿ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ: ಸಿಎಂ ಡಿಕೆಶಿ ಮಾಹಿತಿ

ಫುಟ್​​ಬಾಲ್ ವಿಶ್ವಕಪ್ ಉದ್ಘಾಟನೆಯಲ್ಲಿ ಹೀಗಿತ್ತು ನೋರಾ ಫತೇಹಿ ಪ್ರದರ್ಶನ

ಸಾವಿನ ಬಗ್ಗೆ ಪದೇ ಪದೇ ಸುಳ್ಳು ಸುದ್ದಿ: ನಟ ದೊಡ್ಡಣ್ಣ ಹೇಳಿದ್ದೇನು?

ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​

ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್

ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ

ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ