- Kannada News Photo gallery Cricket photos Rahul dravid can join an ipl team as head coach says reports
Rahul Dravid: ಮತ್ತೆ ಐಪಿಎಲ್ ಅಖಾಡಕ್ಕೆ ‘ದಿ ವಾಲ್’? ಯಾವ ತಂಡ ಸೇರ್ತಾರೆ ಗುರು ದ್ರಾವಿಡ್?
Rahul Dravid: ವರದಿಗಳ ಪ್ರಕಾರ, ರಾಹುಲ್ ದ್ರಾವಿಡ್ ಮತ್ತೊಮ್ಮೆ ಐಪಿಎಲ್‌ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿರುವಂತೆ ರಾಹುಲ್ ದ್ರಾವಿಡ್ ಐಪಿಎಲ್ ತಂಡದೊಂದಿಗೆ ಎರಡು ವರ್ಷಗಳ ಒಪ್ಪಂದಕ್ಕಾಗಿ ಮಾತುಕತೆ ನಡೆಸುತ್ತಿದ್ದಾರೆ.
Updated on: Nov 23, 2023 | 10:07 PM

ಏಕದಿನ ವಿಶ್ವಕಪ್ ಮುಕ್ತಾಯದೊಂದಿಗೆ ರಾಹುಲ್ ದ್ರಾವಿಡ್ ಅವರ ಮುಖ್ಯ ಕೋಚ್ ಅವಧಿಯೂ ಮುಕ್ತಾಯವಾಗಿದೆ. ರಾಹುಲ್ ದ್ರಾವಿಡ್ ತಮ್ಮ ಅಧಿಕಾರಾವಧಿಯನ್ನು ಮತ್ತೆ ವಿಸ್ತರಿಸುತ್ತಾರಾ? ಇಲ್ಲವಾ ಅಂಬ ಪ್ರಶ್ನೆ ಕಾಡಲಾರಂಭಿಸಿದೆ.

ಮೂಲಗಳ ಪ್ರಕಾರ, ದ್ರಾವಿಡ್ಗೆ ತಂಡದೊಂದಿಗಿನ ಅತಿ ಹೆಚ್ಚಿನ ಪ್ರಯಾಣ ಹೊರೆ ಎನಿಸಿದೆ. ಅಲ್ಲದೆ ದ್ರಾವಿಡ್ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯಲು ಬಯಸುತ್ತಿದ್ದಾರೆ. ಹಾಗಾಗಿ ಅವರು ಟೀಂ ಇಂಡಿಯಾ ಜೊತೆ ತಮ್ಮ ಅಧಿಕಾರಾವಧಿಯನ್ನು ವಿಸ್ತರಿಸುವುದಿಲ್ಲ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ, ರಾಹುಲ್ ದ್ರಾವಿಡ್ ಮತ್ತೊಮ್ಮೆ ಐಪಿಎಲ್‌ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿರುವಂತೆ ರಾಹುಲ್ ದ್ರಾವಿಡ್ ಐಪಿಎಲ್ ತಂಡದೊಂದಿಗೆ ಎರಡು ವರ್ಷಗಳ ಒಪ್ಪಂದಕ್ಕಾಗಿ ಮಾತುಕತೆ ನಡೆಸುತ್ತಿದ್ದಾರೆ.

ಇನ್ನು ದ್ರಾವಿಡ್ ಐಪಿಎಲ್‌ನಲ್ಲಿ ಮತ್ತೆ ಕಾಣಿಸಿಕೊಂಡರೆ ಯಾವ ತಂಡ ಸೇರಿಕೊಳ್ಳುತ್ತಾರೆ ಎಂಬುದು ಪ್ರಶ್ನೆಯಾಗಿದೆ. ಪ್ರಸ್ತುತ, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮುಖ್ಯ ಕೋಚ್ ಇಲ್ಲ. ಏಕೆಂದರೆ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಅವರು ಕೆಲವು ದಿನಗಳ ಹಿಂದೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದಲ್ಲದೇ ರಾಜಸ್ಥಾನ ರಾಯಲ್ಸ್ ತಂಡದ ಮುಖ್ಯ ಕೋಚ್ ಕುಮಾರ್ ಸಂಗಕ್ಕಾರ ಕೂಡ ಈಗಾಗಲೇ ತಂಡ ತೊರೆದಿದ್ದಾರೆ. ಹಾಗಾಗಿ ಈ ಎರಡು ತಂಡಗಳ ಪೈಕಿ ಒಂದರ ಜೊತೆ ದ್ರಾವಿಡ್ ಮಾತುಕತೆ ನಡೆಸುವ ಸಾಧ್ಯತೆ ಇದೆ.

ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ಜೊತೆ ಐಪಿಎಲ್‌ನಲ್ಲಿ ಸಾಕಷ್ಟು ಸಮಯ ಕಳೆದಿದ್ದಾರೆ. ಈ ಐಪಿಎಲ್ ತಂಡವನ್ನೂ ಅವರು ಮುನ್ನಡೆಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಾಹುಲ್ ದ್ರಾವಿಡ್ ರಾಜಸ್ಥಾನ ರಾಯಲ್ಸ್ ತಂಡದ ನೂತನ ಕೋಚ್ ಆಗಲಿದ್ದಾರೆ ಎಂಬುದು ಹಲವರ ಅಭಿಪ್ರಾಯವಾಗಿದೆ.

ರಾಹುಲ್ ದ್ರಾವಿಡ್ ಕೋಚಿಂಗ್ನಲ್ಲಿ ಭಾರತ ತಂಡ 2022 ರ ಟಿ20 ವಿಶ್ವಕಪ್‌ನ ಸೆಮಿಫೈನಲ್ ತಲುಪಿತು . ಇದಲ್ಲದೆ, 2021-23 ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲೂ ಫೈನಲ್ ತಲುಪಿತ್ತು. ಇದೀಗ 2023ರ ಏಕದಿನ ವಿಶ್ವಕಪ್ ಫೈನಲ್‌ಗೂ ಟೀಂ ಇಂಡಿಯಾ ತಲುಪಿತ್ತು. ಆದರೆ ಐಸಿಸಿ ಟ್ರೋಫಿ ಗೆಲ್ಲುವಲ್ಲಿ ತಂಡ ವಿಫಲವಾಯಿತು.
























