ರಾಹುಲ್ ದ್ರಾವಿಡ್ ಪುತ್ರ ಸಮಿತ್ ಅನ್​ಸೋಲ್ಡ್..!

Updated on: Jul 17, 2025 | 9:23 AM

Samit Dravid: ಟೀಮ್ ಇಂಡಿಯಾದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರ ಸುಪುತ್ರ ಸಮಿತ್ ದ್ರಾವಿಡ್ ಕಳೆದ ಬಾರಿಯ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಮೈಸೂರು ವಾರಿಯರ್ಸ್ ಪರ ಕಣಕ್ಕಿಳಿದಿದ್ದರು. 7 ಪಂದ್ಯಗಳಲ್ಲಿ ಅವಕಾಶ ಪಡೆದಿದ್ದ ಸಮಿತ್ ಒಂದೇ ಒಂದು ಅರ್ಧಶತಕ ಬಾರಿಸಿರಲಿಲ್ಲ. ಅಲ್ಲದೆ ಕೇವಲ 9 ಫೋರ್ ಹಾಗೂ 3 ಸಿಕ್ಸ್ ಬಾರಿಸಲಷ್ಟೇ ಶಕ್ತರಾಗಿದ್ದಾರೆ.

1 / 5
ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಮೂರನೇ ಸೀಸನ್​ಗೆ ಸಿದ್ಧತೆಗಳು ಶುರುವಾಗಿದೆ. ಅದರ ಮೊದಲ ಭಾಗವಾಗಿ ಇದೀಗ 6 ತಂಡಗಳ ಹರಾಜು ಪ್ರಕ್ರಿಯೆ ಮುಗಿದಿದೆ. ಈ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಲೆಜೆಂಡ್ ರಾಹುಲ್​ ದ್ರಾವಿಡ್ ಪುತ್ರ ಸಮಿತ್ ದ್ರಾವಿಡ್ ಬಿಕರಿಯಾಗದೇ ಉಳಿದಿದ್ದಾರೆ. ಅಂದರೆ ಯಾವುದೇ ಫ್ರಾಂಚೈಸಿ ಅವರನ್ನು ಖರೀದಿಸಿಲ್ಲ.

2 / 5
ಕಳೆದ ಸೀಸನ್​ನಲ್ಲಿ ಮೈಸೂರು ವಾರಿಯರ್ಸ್ ಪರ ಕಣಕ್ಕಿಳಿದಿದ್ದ ಸಮಿತ್ ದ್ರಾವಿಡ್ ಅವರಿಗಾಗಿ ಬಿಡ್ ಮಾಡಲು ಯಾವುದೇ ಫ್ರಾಂಚೈಸಿ ಮುಂದೆ ಬರಲಿಲ್ಲ. ಇದಕ್ಕೆ ಮುಖ್ಯ ಕಾರಣ ಕಳೆದ ಸೀಸನ್​ನಲ್ಲಿನ ಕಳಪೆ ಪ್ರದರ್ಶನ. 2024 ರಲ್ಲಿ ಮೈಸೂರು ವಾರಿಯರ್ಸ್ ತಂಡದ ಪರ 7 ಪಂದ್ಯಗಳನ್ನಾಡಿದ್ದ ಸಮಿತ್ ಕಲೆಹಾಕಿದ್ದು ಕೇವಲ 82 ರನ್​ಗಳು.  ಈ 82 ರನ್​ಗಳನ್ನು ಬಾರಿಸಲು ತೆಗೆದುಕೊಂಡಿದ್ದು ಬರೋಬ್ಬರಿ 72 ಎಸೆತಗಳನ್ನು ಎಂಬುದು ಇಲ್ಲಿ ಉಲ್ಲೇಖಾರ್ಹ.

3 / 5
ಮೈಸೂರು ವಾರಿಯರ್ಸ್​ ಪರ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಸಮಿತ್ ದ್ರಾವಿಡ್ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಕಲೆಹಾಕಿದ್ದು ಕೇವಲ 5 ರನ್​ಗಳು. ಇನ್ನು ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧ 12, ಹುಬ್ಬಳ್ಳಿ ಟೈಗರ್ಸ್ ವಿರುದ್ಧ 2, ಮಂಗಳೂರು ಡ್ರಾಗನ್ಸ್ ವಿರುದ್ಧ 16, ಶಿವಮೊಗ್ಗ ಲಯನ್ಸ್ ವಿರುದ್ಧ 7 ಹಾಗೂ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ 7 ರನ್​ ​ಗಳಿಸಲಷ್ಟೇ ಶಕ್ತರಾಗಿದ್ದರು.

4 / 5
ಇನ್ನು ಕಳೆದ ಬಾರಿ ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧದ ಪಂದ್ಯದಲ್ಲಿ 24 ಎಸೆತಗಳಲ್ಲಿ 33 ರನ್ ಬಾರಿಸಿದ್ದು ಸಮಿತ್ ಅವರ ಗರಿಷ್ಠ ಸ್ಕೋರ್. ಅದರಂತೆ 7 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದ ಯುವ ದಾಂಡಿಗ ಕೇವಲ 11.71 ಸರಾಸರಿಯಲ್ಲಿ 84 ರನ್​ ಮಾತ್ರ ಕಲೆಹಾಕಿದ್ದರು. ಈ ಕಳಪೆ ಬ್ಯಾಟಿಂಗ್ ಕಾರಣದಿಂದಲೇ ಸಮಿತ್ ದ್ರಾವಿಡ್ ಅವರನ್ನು ಮೈಸೂರು ವಾರಿಯರ್ಸ್ ತಂಡವು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳಲ್ಲಿ ಕಣಕ್ಕಿಳಿಸಿರಲಿಲ್ಲ. 

5 / 5
ಇದಾಗ್ಯೂ ಈ ಬಾರಿಯ ಮಹರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಮತ್ತೊಂದು ಅವಕಾಶವನ್ನು ಎದುರು ನೋಡಿದ್ದ 19 ವರ್ಷದ ಸಮಿತ್ ದ್ರಾವಿಡ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ. ಹೀಗಾಗಿ ಈ ಬಾರಿಯ ಮಹಾರಾಜ ಟ್ರೋಫಿ ಟಿ20 ಲೀಗ್​ನಲ್ಲಿ ರಾಹುಲ್ ದ್ರಾವಿಡ್ ಪುತ್ರ ಕಾಣಿಸಿಕೊಳ್ಳುವುದಿಲ್ಲ.