Yashasvi Jaiswal: ಇತಿಹಾಸ ನಿರ್ಮಿಸಿದ ಯಶಸ್ವಿ ಜೈಸ್ವಾಲ್: ಐಪಿಎಲ್ನಲ್ಲಿ ಯಾರೂ ಮಾಡಿಲ್ಲ ಈ ಸಾಧನೆ
RR vs PBKS, IPL 2023: ರಾಜಸ್ಥಾನ್ ಗೆಲುವಿನಲ್ಲಿ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅರ್ಧಶತಕ ಸಿಡಿಸಿ ನೆರವಾದರು. 36 ಎಸೆತಗಳಲ್ಲಿ 8 ಫೋರ್ನೊಂದಿಗೆ 50 ರನ್ ಚಚ್ಚಿದರು. ಇದರ ಜೊತೆಗೆ ಐಪಿಎಲ್ನಲ್ಲಿ ಇದುವರೆಗೆ ಯಾರೂ ಮಾಡಿರದ ವಿಶೇಷ ಸಾಧನೆ ಗೈದಿದ್ದಾರೆ.
1 / 7
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಶುಕ್ರವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 4 ವಿಕೆಟ್ಗಳ ರೋಚಕ ಜಯ ಸಾಧಿಸಿತು. ಈ ಮೂಲಕ ಆರ್ಆರ್ ತನ್ನ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿದೆ.
2 / 7
ರಾಜಸ್ಥಾನ್ ಗೆಲುವಿನಲ್ಲಿ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅರ್ಧಶತಕ ಸಿಡಿಸಿ ನೆರವಾದರು. 36 ಎಸೆತಗಳಲ್ಲಿ 8 ಫೋರ್ನೊಂದಿಗೆ 50 ರನ್ ಚಚ್ಚಿದರು. ಇದರ ಜೊತೆಗೆ ಐಪಿಎಲ್ನಲ್ಲಿ ಇದುವರೆಗೆ ಯಾರೂ ಮಾಡಿರದ ವಿಶೇಷ ಸಾಧನೆ ಗೈದಿದ್ದಾರೆ.
3 / 7
188 ರನ್‌ಗಳ ಗುರಿ ಬೆನ್ನತ್ತಿದ್ದ ರಾಜಸ್ಥಾನ್ ಪರ ಜೈಸ್ವಾಲ್ 41 ರನ್ ಗಳಿಸುತ್ತಿದ್ದಂತೆಯೇ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಅನ್‌ಕ್ಯಾಪ್ಡ್ (ರಾಷ್ಟ್ರೀಯ ತಂಡದ ಪರ ಆಡದ) ಆಟಗಾರ ಎಂಬ ದಾಖಲೆ ಸೃಷ್ಟಿಸಿದ್ದಾರೆ.
4 / 7
15 ವರ್ಷಗಳ ಹಿಂದೆ 2008ರಲ್ಲಿ ನಡೆದ ಚೊಚ್ಚಲ ಐಪಿಎಲ್ ಆವೃತ್ತಿಯಲ್ಲಿ ಆಸ್ಟ್ರೇಲಿಯಾದ ಆಟಗಾರ ಶಾನ್ ಮಾರ್ಷ್ 616 ರನ್‌ಗಳೊಂದಿಗೆ ದಾಖಲೆ ನಿರ್ಮಿಸಿದ್ದರು. ಇದೀಗ ಜೈಸ್ವಾಲ್ 625 ರನ್‌ಗಳೊಂದಿಗೆ ಈ ದಾಖಲೆ ಮುರಿದು ವಿಶೇಷ ಸಾಧನೆ ಮಾಡಿದ್ದಾರೆ.
5 / 7
ಇದಿಷ್ಟೆ ಅಲ್ಲದೆ 25 ವರ್ಷ ವಯಸ್ಸಿಗೂ ಮೊದಲೇ ಐಪಿಎಲ್ ಟೂರ್ನಿಯ ಆವೃತ್ತಿ ಒಂದರಲ್ಲಿ 600+ ರನ್ ಕಲೆಹಾಕಿದ ಭಾರತೀಯ ಬ್ಯಾಟರ್‌ಗಳ ಪಟ್ಟಿಗೆ ಜೈಸ್ವಾಲ್ ಸೇರಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ, ರಿಷಭ್ ಪಂತ್ ಮತ್ತು ಋತುರಾಜ್ ಗಾಯಕ್ವಾಡ್ ಇರುವ ವಿಶೇಷ ದಾಖಲೆ ಪಟ್ಟಿಗೆ ಸೇರಿದ್ದಾರೆ.
6 / 7
ಧರ್ಮಶಾಲಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲ ಬ್ಯಾಟಿಂಗ್ ಮಾಡಿದ ಪಂಬಾಜ್ 187 ರನ್ಗಳನ್ನು ಪೇರಿಸಿತ್ತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡವು ಇನ್ಸಿಂಗ್ಸ್ನ ಎರಡು ಎಸೆತಗಳು ಬಾಕಿ ಇರುವಾಗಲೇ 189 ರನ್ ಬಾರಿಸಿ ಗೆಲುವಿನ ನಗೆ ಬೀರಿತು.
7 / 7
ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ ನಾಲ್ಕು ವಿಕೆಟ್ಗಳ ರೋಚಕ ಜಯ ದಾಖಲಿಸುವ ಮೂಲಕ ಪ್ಲೇ ಆಫ್ ರೇಸ್ನಲ್ಲಿ ಉಳದಿದೆ. ಸೋಲಿನೊಂದಿಗೆ ಐಪಿಎಲ್ ಟೂರ್ನಿನಿಂದ ಶಿಖರ್ ಧವನ್ ಪಡೆ ಹೊರ ಬಿದ್ದಿದೆ.