- Kannada News Photo gallery Cricket photos Rajat Patidar Smashes Hundred in Just 68 Balls Ranji Trophy
ರಣಜಿ ಟೂರ್ನಿಯಲ್ಲಿ ತೂಫಾನ್ ಶತಕ ಸಿಡಿಸಿ ದಾಖಲೆ ಬರೆದ ರಜತ್ ಪಾಟಿದಾರ್
Rajat Patidar: Madhya Pradesh vs Haryana: ಮಧ್ಯ ಪ್ರದೇಶ ಮತ್ತು ಹರ್ಯಾಣ ನಡುವಣ ರಣಜಿ ಟೂರ್ನಿಯ ಪಂದ್ಯದಲ್ಲಿ ರಜತ್ ಪಾಟಿದಾರ್ ಸ್ಪೋಟಕ ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ರಣಜಿ ಟೂರ್ನಿಯಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
Updated on: Oct 29, 2024 | 3:17 PM

ಇಂದೋರ್ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ರಜತ್ ಪಾಟಿದಾರ್ ತೂಫಾನ್ ಶತಕ ಸಿಡಿಸಿದ್ದಾರೆ. ಅದು ಕೂಡ ಕೇವಲ 68 ಎಸೆತಗಳಲ್ಲಿ ಎಂಬುದು ವಿಶೇಷ. ಹರ್ಯಾಣ ವಿರುದ್ಧದ ಈ ಪಂದ್ಯದಲ್ಲಿ ಮಧ್ಯ ಪ್ರದೇಶ ಪರ ಮೂರಣೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಾಟಿದಾರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಪಾಟಿದಾರ್ ಹರ್ಯಾಣ ಬೌಲರ್ಗಳ ಬೆಂಡೆತ್ತಿದರು. ಪರಿಣಾಮ ಪಾಟಿದಾರ್ ಬ್ಯಾಟ್ನಿಂದ 3 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳು ಮೂಡಿಬಂದವು. ಈ ಸಿಕ್ಸ್-ಫೋರ್ಗಳೊಂದಿಗೆ ರಜತ್ ಕೇವಲ 68 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ರಣಜಿ ಟೂರ್ನಿಯಲ್ಲಿ ಅತೀ ವೇಗದ ಶತಕ ಸಿಡಿಸಿದ ಮೂರನೇ ಬ್ಯಾಟರ್ ಎನಿಸಿಕೊಂಡರು.

ಇನ್ನು ರಣಜಿ ಟೂರ್ನಿಯಲ್ಲಿ ಅತೀ ವೇಗದ ಶತಕ ಬಾರಿಸಿದ ದಾಖಲೆ ರಿಷಭ್ ಪಂತ್ ಹೆಸರಿನಲ್ಲಿದೆ. 2016 ರಲ್ಲಿ ದೆಹಲಿ ಪರ ಕಣಕ್ಕಿಳಿದಿದ್ದ ಪಂತ್ ಜಾರ್ಖಂಡ್ ವಿರುದ್ಧ ಕೇವಲ 48 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಇದು ರಣಜಿ ಟೂರ್ನಿಯ ಇತಿಹಾಸದಲ್ಲೇ ದಾಖಲಾದ ಅತ್ಯಂತ ವೇಗದ ಶತಕವಾಗಿದೆ.

2023 ರಲ್ಲಿ ಛತ್ತೀಗಢ ವಿರುದ್ಧದ ಪಂದ್ಯದಲ್ಲಿ ಅಸ್ಸಾಂ ಪರ ಅಬ್ಬರಿಸಿದ್ದ ರಿಯಾನ್ ಪರಾಗ್ ಕೇವಲ 56 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. ಇದು ರಣಜಿ ಟೂರ್ನಿಯ ಎರಡನೇ ವೇಗದ ಶತಕವಾಗಿದೆ.

ಇದೀಗ ಕೇವಲ 68 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ರಜತ್ ಪಾಟಿದಾರ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ಮಧ್ಯ ಪ್ರದೇಶ್ ಪರ ರಣಜಿ ಟೂರ್ನಿಯಲ್ಲಿ ಅತೀ ವೇಗವಾಗಿ ಶತಕ ಬಾರಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
