Ranji Trophy 2023: ಶುಭ್ಮನ್ ಗಿಲ್ರಂತೆಯೇ ದ್ವಿಶತಕ ಸಿಡಿಸಿ ಮಿಂಚಿದ ಕನ್ನಡಿಗ ಮಯಾಂಕ್ ಅಗರ್ವಾಲ್..!
TV9 Web | Updated By: ಪೃಥ್ವಿಶಂಕರ
Updated on:
Jan 20, 2023 | 4:04 PM
Mayank Agarwal: ಈ ಸೀಸನ್ನಲ್ಲಿ ಇದುವರೆಗೆ 9 ಇನ್ನಿಂಗ್ಸ್‌ಗಳನ್ನಾಡಿರುವ ಮಯಾಂಕ್ 72.8 ಸರಾಸರಿಯಲ್ಲಿ 583 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ, ಒಂದು ದ್ವಿಶತಕ ಮತ್ತು 4 ಅರ್ಧ ಶತಕಗಳು ಸೇರಿವೆ.
1 / 5
ರಣಜಿ ಟ್ರೋಫಿಯಲ್ಲಿ ಕರ್ನಾಟಕದ ನಾಯಕ ಮಯಾಂಕ್ ಅಗರ್ವಾಲ್ ಅವರ ಅದ್ಭುತ ಪ್ರದರ್ಶನ ಮುಂದುವರೆದಿದೆ. ಕೇರಳ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕನ್ನಡಿಗ ಮಯಾಂಕ್ ಅಗರ್ವಾಲ್ 360 ಎಸೆತಗಳಲ್ಲಿ 208 ರನ್ ಚಚ್ಚಿದ್ದಾರೆ.
2 / 5
ಕೆಸಿಎ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ 17 ಬೌಂಡರಿ ಮತ್ತು 5 ಸಿಕ್ಸರ್‌ಗಳ ಸಹಿತ ಈ ದ್ವಿಶತಕದ ಸಾಧನೆ ಮಾಡಿದ್ದಾರೆ. ಮಯಾಂಕ್ ಅವರ ಈ ಬಲಿಷ್ಠ ಇನ್ನಿಂಗ್ಸ್‌ನಿಂದಾಗಿ ಕರ್ನಾಟಕ ತಂಡ ಕೇರಳ ವಿರುದ್ಧ 410 ರನ್ ಗಳಿಸುವ ಮೂಲಕ ಪಂದ್ಯದಲ್ಲಿ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿದೆ.
3 / 5
ಕಳೆದ ಮಾರ್ಚ್‌ನಲ್ಲಿ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಪರ ಕೊನೆಯ ಪಂದ್ಯವನ್ನು ಆಡಿದ್ದ ಮಯಾಂಕ್ ಅಗರ್ವಾಲ್ ಕಳೆದ 9 ತಿಂಗಳಿಂದ ತಂಡದಿಂದ ಹೊರಗಿದ್ದಾರೆ. ಇದಾದ ಬಳಿಕ ಮಯಾಂಕ್‌ಗೆ ತಂಡದಲ್ಲಿ ಅವಕಾಶ ಸಿಗಲಿಲ್ಲ. ಬಾಂಗ್ಲಾದೇಶ ಟೆಸ್ಟ್ ಸರಣಿಯ ತಂಡದಲ್ಲಿಯೂ ಮಯಾಂಕ್ ಸ್ಥಾನ ಪಡೆದಿರಲಿಲ್ಲ.
4 / 5
ಈಗ ಮತ್ತೊಮ್ಮೆ ಅದ್ಭುತ ಪ್ರದರ್ಶನ ನೀಡಿರುವ ಮಯಾಂಕ್ ಆಯ್ಕೆಗಾರರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ರಣಜಿ ಟ್ರೋಫಿಯ ಈ ಸೀಸನ್ನಲ್ಲಿ ಇದುವರೆಗೆ 9 ಇನ್ನಿಂಗ್ಸ್‌ಗಳನ್ನಾಡಿರುವ ಮಯಾಂಕ್ 72.8 ಸರಾಸರಿಯಲ್ಲಿ 583 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ, ಒಂದು ದ್ವಿಶತಕ ಮತ್ತು 4 ಅರ್ಧ ಶತಕಗಳು ಸೇರಿವೆ.
5 / 5
ಕಾಕತಾಳಿಯವೆಂದರೆ ಈಗ ರಣಜಿಯಲ್ಲಿ ಮಯಾಂಕ್ ಅಗರ್ವಾಲ್ 208 ರನ್‌ಗಳ ಇನ್ನಿಂಗ್ಸ್‌ಗಳನ್ನು ಆಡಿದ್ದರೆ, ನ್ಯೂಜಿಲೆಂಡ್ ವಿರುದ್ಧ ಹೈದರಾಬಾದ್ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಶುಭಮನ್ ಗಿಲ್ ಕೂಡ ಅದೇ ಸಂಖ್ಯೆಯ ರನ್ ಗಳಿಸಿದ್ದರು.
Published On - 3:51 pm, Fri, 20 January 23