ಟೀಂ ಇಂಡಿಯಾ ಮುಂದಿನ ತಿಂಗಳು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದು, ಐದು ಟೆಸ್ಟ್‌ಗಳ ಸರಣಿಯನ್ನು ಆಡಲಿದೆ. ಆ ಪ್ರವಾಸದಲ್ಲಿ ಪೂಜಾರಗೆ ಟೀಂ ಇಂಡಿಯಾದಲ್ಲಿ ಅವಕಾಶ ಸಿಗುವ ಸಾಧ್ಯತೆಗಳಿವೆ. ಪೂಜಾರ ಆಸ್ಟ್ರೇಲಿಯಾ ವಿರುದ್ಧ 50 ರ ಸರಾಸರಿಯಲ್ಲಿ ರನ್ ಕಲೆಹಾಕಿದ್ದು, ಆಸ್ಟ್ರೇಲಿಯಾ ನೆಲದಲ್ಲಿ ಅವರು 3 ಶತಕ ಸೇರಿದಂತೆ ಒಟ್ಟು 993 ರನ್ ಕಲೆಹಾಕಿದ್ದಾರೆ.