Ranji Trophy: ಅಜೇಯ 157 ರನ್ ಸಿಡಿಸಿದ ಪೂಜಾರ; ಇಂಗ್ಲೆಂಡ್ ವಿರುದ್ಧ ತಂಡಕ್ಕೆ ಆಯ್ಕೆ?
Ranji Trophy: ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಾರ್ಖಂಡ್ ತಂಡ ಕೇವಲ 142 ರನ್ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಇತ್ತ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಸೌರಾಷ್ಟ್ರ ತಂಡ ಎರಡನೇ ದಿನದಾಟದಂತ್ಯಕ್ಕೆ ಪೂಜಾರ ಅವರ ಅಜೇಯ 157 ರನ್ಗಳ ಇನ್ನಿಂಗ್ಸ್ನಿಂದಾಗಿ ಪಂದ್ಯದಲ್ಲಿ ಮೇಲುಗೈ ಸಾಧಿಸಿದೆ.
1 / 6
ಭಾರತ ಟೆಸ್ಟ್ ತಂಡದಿಂದ ಹೊರಗುಳಿದಿರುವ ಬಲಗೈ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ನಿರ್ಣಾಯಕ ಸಮಯದಲ್ಲಿ ದೊಡ್ಡ ಇನ್ನಿಂಗ್ಸ್ ನಿರ್ಮಿಸಿದ್ದಾರೆ. ರಣಜಿ ಟ್ರೋಫಿಯಲ್ಲಿ ಜಾರ್ಖಂಡ್ ವಿರುದ್ಧ ಪೂಜಾರ ಅದ್ಭುತ ಶತಕ ಸಿಡಿಸಿದ್ದಾರೆ. ಅವರ ಇನ್ನಿಂಗ್ಸ್ ಆಧಾರದ ಮೇಲೆ ಸೌರಾಷ್ಟ್ರ ತಂಡ ಪಂದ್ಯದಲ್ಲಿ ಬಿಗಿ ಹಿಡಿತ ಸಾಧಿಸಿದೆ.
2 / 6
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಾರ್ಖಂಡ್ ತಂಡ ಕೇವಲ 142 ರನ್ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಇತ್ತ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಸೌರಾಷ್ಟ್ರ ತಂಡ ಎರಡನೇ ದಿನದಾಟದಂತ್ಯಕ್ಕೆ ಪೂಜಾರ ಅವರ ಅಜೇಯ 157 ರನ್ಗಳ ಇನ್ನಿಂಗ್ಸ್ನಿಂದಾಗಿ ಪಂದ್ಯದಲ್ಲಿ ಮೇಲುಗೈ ಸಾಧಿಸಿದೆ.
3 / 6
ದಿನದಾಟದಂತ್ಯಕ್ಕೆ ಸೌರಾಷ್ಟ್ರ ತಂಡ 4 ವಿಕೆಟ್ ಕಳೆದುಕೊಂಡು 406 ರನ್ಗಳ ಬೃಹತ್ ಮೊತ್ತ ದಾಖಲಿಸಿದೆ. ತಂಡದ ಪರ ಪೂಜಾರ 239 ಎಸೆತಗಳಲ್ಲಿ 19 ಬೌಂಡರಿಗಳ ಸಹಿತ ಅಜೇಯ 157 ರನ್ ಕಲೆಹಾಕಿದ್ದಾರೆ. ಈ ಮೂಲಕ ಪೂಜಾರ ಮತ್ತೊಮ್ಮೆ ಟೀಂ ಇಂಡಿಯಾದಲ್ಲಿ ಕಾಣಿಸಿಕೊಳ್ಳುವ ಸುಳಿವು ನೀಡಿದ್ದಾರೆ.
4 / 6
ವಾಸ್ತವವಾಗಿ ಪೂಜಾರ ಭಾರತ ಟೆಸ್ಟ್ ತಂಡದಿಂದ ಹೊರಬಿದ್ದು ತಿಂಗಳುಗಳೇ ಕಳೆದಿವೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಪೂಜಾರ ಕೊನೆಯದಾಗಿ ಟೀಂ ಇಂಡಿಯಾ ಪರ ಆಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಪೂಜಾರ ಉತ್ತಮ ಪ್ರದರ್ಶನ ನೀಡಲಿಲ್ಲ. ಈ ಕಾರಣದಿಂದಾಗಿ ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಅವರನ್ನು ತಂಡದಿಂದ ಕೈಬಿಡಲಾಯಿತು.
5 / 6
ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆಯೂ ಪೂಜಾರ ತಂಡದಲ್ಲಿ ಆಯ್ಕೆಯಾಗಿರಲಿಲ್ಲ. ಇದರ ಬೆಲೆ ತೆತ್ತ ಭಾರತ, ದಕ್ಷಿಣ ಆಫ್ರಿಕಾ ನೆಲದಲ್ಲಿ ಕಳಪೆ ಬ್ಯಾಟಿಂಗ್ನಿಂದಾಗಿ ಭಾರಿ ಟೀಕೆಗೆ ಗುರಿಯಾಗಿತ್ತು. ಇದೀಗ ಭಾರತ ಮುಂದಿನ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ ವಿರುದ್ಧ ಆಡಬೇಕಿದ್ದು, ಇನ್ನು ಕೆಲವೇ ದಿನಗಳಲ್ಲಿ ಈ ಸರಣಿಗೆ ತಂಡವನ್ನು ಆಯ್ಕೆ ಮಾಡಬೇಕಿದೆ.
6 / 6
ಇದಕ್ಕೂ ಮುನ್ನ ಪೂಜಾರ ಶತಕ ಬಾರಿಸಿರುವ ಪೂಜಾರ ತಂಡದಲ್ಲಿ ಮತ್ತೊಂದು ಅವಕಾಶಕ್ಕಾಗಿ ಎದುರು ನೋಡುತ್ತಿದ್ದಾರೆ. ವಾಸ್ತವವಾಗಿ ಈ ಹಿಂದೆಯೂ ಪೂಜಾರ ಅವರನ್ನು ಟೆಸ್ಟ್ ತಂಡದಿಂದ ಕೈಬಿಡಲಾಗಿತ್ತು. ಆದರೆ ಈ ಆಟಗಾರ ಪುನರಾಗಮನ ಮಾಡಿ ಅದ್ಭುತವಾಗಿ ಆಡಿದ್ದರು.