Ranji Trophy 2024: ತಮಿಳುನಾಡು ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ದೇವದತ್ ಪಡಿಕ್ಕಲ್..!
Devdutt Padikkal: ಇಂದಿನಿಂದ ತಮಿಳುನಾಡಿನ ಎಂ ಚಿದಂಬರಂ ಸ್ಟೇಡಿಯಂನಲ್ಲಿ ಆರಂಭವಾಗಿರುವ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ರಣಜಿ ಪಂದ್ಯದಲ್ಲಿ ಕರ್ನಾಟಕ ತಂಡದ ಯುವ ಬ್ಯಾಟರ್ ದೇವದತ್ ಪಡಿಕ್ಕಲ್ ತಮ್ಮ ಇನ್ನಿಂಗ್ಸ್ನಲ್ಲಿ 216 ಎಸೆತಗಳನ್ನು ಎದುರಿಸಿ 12 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್ಗಳ ಆಧಾರದ ಮೇಲೆ 151 ರನ್ ಕಲೆಹಾಕಿ ಎರಡನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.