AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Musheer Khan: ಭರ್ಜರಿ ದ್ವಿಶತಕ ಸಿಡಿಸಿದ ಮುಶೀರ್ ಖಾನ್

Ranji Trophy 2024: ಬರೋಡಾ ವಿರುದ್ಧದ ರಣಜಿ ಟೂರ್ನಿ ಕ್ವಾರ್ಟರ್ ಫೈನಲ್​ನಲ್ಲಿ ಸರ್ಫರಾಝ್ ಖಾನ್ ಸಹೋದರ ಮುಶೀರ್ ಖಾನ್ ಭರ್ಜರಿ ದ್ವಿಶತಕ ಬಾರಿಸಿದ್ದಾರೆ. ಈ ದ್ವಿಶತಕದೊಂದಿಗೆ ಮುಂಬೈ ತಂಡವು ಮೊದಲ ಇನಿಂಗ್ಸ್​ನಲ್ಲಿ 384 ರನ್ ಕಲೆಹಾಕಿದೆ. ಅಂದರೆ ತಂಡದ ಒಟ್ಟಾರೆ ಸ್ಕೋರ್​ನ ಮುಕ್ಕಾಲು ಭಾಗದಷ್ಟು ಮುಶೀರ್ ಖಾನ್ ಕಲೆಹಾಕಿರುವುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್|

Updated on: Feb 24, 2024 | 2:52 PM

Share
ಮುಂಬೈನ ಶರದ್ ಪವಾರ್ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಕ್ವಾರ್ಟರ್ ಫೈನಲ್​ನಲ್ಲಿ ಯುವ ದಾಂಡಿಗ ಮುಶೀರ್ ಖಾನ್ (Musheer Khan) ಭರ್ಜರಿ ದ್ವಿಶತಕ ಬಾರಿಸಿ ಮಿಂಚಿದ್ದಾರೆ. ಬರೋಡಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ತಂಡದ ನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್ ಆಯ್ದುಕೊಂಡಿದ್ದರು.

1 / 6
ಅದರಂತೆ ಇನಿಂಗ್ಸ್ ಆರಂಭಿಸಿದ ಮುಂಬೈ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಪೃಥ್ವಿ ಶಾ (33) ಹಾಗೂ ಲಾಲ್ವಾನಿ (19) ಬೇಗನೆ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಕಣಕ್ಕಿಳಿದ 18 ವರ್ಷದ ಮುಶೀರ್ ಖಾನ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ರಕ್ಷಣಾತ್ಮಕ ಬ್ಯಾಟಿಂಗ್​ಗೆ ಒತ್ತು ನೀಡಿದ ಮುಶೀರ್ ಮುಂಬೈ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

2 / 6
ಆದರೆ ಮತ್ತೊಂದೆಡೆ ಅಜಿಂಕ್ಯ ರಹಾನೆ (3), ಶಮ್ಸ್ ಮುಲಾನಿ (6) ಹಾಗೂ ಸೂರ್ಯಂಶ್ (20) ಔಟಾಗುವ ಮೂಲಕ ಮುಂಬೈ ಮತ್ತೆ ದಿಢೀರ್ ಕುಸಿತಕ್ಕೊಳಗಾಯಿತು. ಇದಾಗ್ಯೂ ಹಾರ್ದಿಕ್ ತಾಮೊರೆ (57) ಜೊತೆಗೂಡಿ ಇನಿಂಗ್ಸ್ ಕಟ್ಟಿದ ಮುಶೀರ್ ಮೊದಲ ದಿನದಾಟದ ಅಂತ್ಯಕ್ಕೆ 128 ರನ್ ಬಾರಿಸಿ ಅಜೇಯರಾಗಿ ಉಳಿದರು.

3 / 6
ಇನ್ನು ದ್ವಿತೀಯ ದಿನದಾಟದಲ್ಲೂ ಏಕಾಂಗಿ ಹೋರಾಟ ಮುಂದುವರೆಸಿದ ಮುಶೀರ್ ಖಾನ್ 357 ಎಸೆತಗಳಲ್ಲಿ 18 ಭರ್ಜರಿ ಪೋರ್​ಗಳೊಂದಿಗೆ ಅಜೇಯ 203 ರನ್ ಬಾರಿಸಿದರು. ಮುಶೀರ್ ಖಾನ್ ಅವರ ಈ ಭರ್ಜರಿ ದ್ವಿಶತಕದ ನೆರವಿನಿಂದ ಮುಂಬೈ ತಂಡವು ಮೊದಲ ಇನಿಂಗ್ಸ್​ನಲ್ಲಿ 384 ರನ್ ಕಲೆಹಾಕಿದೆ.

4 / 6
ವಿಶೇಷ ಎಂದರೆ ಈ ಬಾರಿಯ ರಣಜಿ ಟೂರ್ನಿಗೆ ಮುಶೀರ್ ಖಾನ್ ಆಯ್ಕೆಯಾಗಿರಲಿಲ್ಲ. ಆದರೆ ಮುಂಬೈ ಆಟಗಾರ ಶಿವಂ ದುಬೆ ಗಾಯಗೊಂಡಿದ್ದ ಕಾರಣ ಅವರನ್ನು ಕ್ವಾರ್ಟರ್ ಫೈನಲ್ ಪಂದ್ಯಕ್ಕೆ ಆಯ್ಕೆ ಮಾಡಲಾಗಿತ್ತು. ಇದೀಗ ನಿರ್ಣಾಯಕ ಪಂದ್ಯದಲ್ಲಿ ಡಬಲ್ ಸೆಂಚುರಿ ಸಿಡಿಸುವ ಮೂಲಕ ಯುವ ಆಟಗಾರ ಅಬ್ಬರಿಸಿದ್ದಾರೆ.

5 / 6
ಅಂದಹಾಗೆ ಮುಶೀರ್ ಖಾನ್ ಟೀಮ್ ಇಂಡಿಯಾ ಆಟಗಾರ ಸರ್ಫರಾಝ್ ಖಾನ್ ಅವರ ಸಹೋದರ. ಅಣ್ಣ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಬಾರಿಸಿ ಅಬ್ಬರಿಸಿದರೆ, ತಮ್ಮ ಬರೋಡಾ ವಿರುದ್ಧ ದ್ವಿಶತಕ ಬಾರಿಸಿ ಮಿಂಚಿದ್ದಾರೆ.

6 / 6
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ