Ranji Trophy 2024: ರಣಜಿಯಲ್ಲಿ ಸ್ಫೋಟಕ ಶತಕ ಸಿಡಿಸಿದ ಪೃಥ್ವಿ ಶಾ..!

Prithvi Shaw: ಮುಂಬೈ ಹಾಗೂ ಛತ್ತೀಸ್‌ಗಢ ನಡುವೆ ನಡೆಯುತ್ತಿರುವ ರಣಜಿ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಮುಂಬೈ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಪೃಥ್ವಿ ಶಾ ಕೇವಲ 102 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದ್ದಾರೆ. ತಮ್ಮ ಇನ್ನಿಂಗ್ಸ್​ನಲ್ಲಿ 185 ಎಸೆತಗಳನ್ನು ಎದುರಿಸಿದ ಪೃಥ್ವಿ 18 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್ ಸಹಿತ 159 ರನ್ ಕಲೆಹಾಕಿ ಪೆವಿಲಿಯನ್ ಸೇರಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on:Feb 09, 2024 | 4:38 PM

ಕಳಪೆ ಫಾರ್ಮ್​ನಿಂದಾಗಿ ಪ್ರಸ್ತುತ ಟೀಂ ಇಂಡಿಯಾದಿಂದ ಹೊರಗುಳಿದಿರುವ ತಂಡದ ಆರಂಭಿಕ ಆಟಗಾರ ಪೃಥ್ವಿ ಶಾ ರಣಜಿ ಟ್ರೋಫಿಯಲ್ಲಿ ಅದ್ಭುತ ಶತಕ ಸಿಡಿಸಿದ್ದಾರೆ. ಈ ಮೂಲಕ ಟೀಂ ಇಂಡಿಯಾದಲ್ಲಿ ಮತ್ತೊಮ್ಮೆ ಅವಕಾಶಗಿಟ್ಟಿಸಿಕೊಳ್ಳಲು ಮೊದಲ ಹೆಜ್ಜೆ ಇಟ್ಟಿದ್ದಾರೆ.

1 / 8
ಇಂದಿನಿಂದ ಮುಂಬೈ ಹಾಗೂ  ಛತ್ತೀಸ್‌ಗಢ ನಡುವೆ ರಣಜಿ ಪಂದ್ಯ ಆರಂಭವಾಗಿದ್ದು, ಮೊದಲ ಇನ್ನಿಂಗ್ಸ್ ಆರಂಭಿಸಿರುವ ಮುಂಬೈ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಪೃಥ್ವಿ ಶಾ ಕೇವಲ 102 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದರು.

2 / 8
ವೈಯಕ್ತಿಕ ಬದುಕಿನಲ್ಲಿ ಸಾಕಷ್ಟು ವಿವಾದ ಮಾಡಿಕೊಂಡು ಸದಾ ಸುದ್ದಿಯಲ್ಲಿರುತ್ತಿದ್ದ ಪೃಥ್ವಿ ಶಾ ಪ್ರಸ್ತುತ 2024 ರ ರಣಜಿ ಟ್ರೋಫಿಯಲ್ಲಿ ಮುಂಬೈ ಪರ ಆಡುತ್ತಿದ್ದಾರೆ. ಬಂಗಾಳದ ವಿರುದ್ಧ ಮೊದಲ ರಣಜಿ ಪಂದ್ಯವನ್ನಾಡಿದ್ದ ಪೃಥ್ವಿ ಕೇವಲ 35 ರನ್ ಕಲೆಹಾಕಿದ್ದರು. ಆದರೂ ಆ ಪಂದ್ಯವನ್ನು ಮುಂಬೈ ಸುಲಭವಾಗಿ ಗೆದ್ದುಕೊಂಡಿತು.

3 / 8
ಇದೀಗ ಛತ್ತೀಸ್‌ಗಢ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಶಾ ಕೇವಲ 43 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಆ ನಂತರ ಆಕ್ರಮಣಕಾರಿ ಬ್ಯಾಟಿಂಗ್ ಆರಂಭಿಸಿದ ಪೃಥ್ವಿ ಕೇವಲ 102 ಎಸೆತಗಳಲ್ಲಿ ಶತಕ ಪೂರೈಸಿದ್ದರು.

4 / 8
ಅಂತಿಮವಾಗಿ ತಮ್ಮ ಇನ್ನಿಂಗ್ಸ್​ನಲ್ಲಿ 185 ಎಸೆತಗಳನ್ನು ಎದುರಿಸಿದ ಪೃಥ್ವಿ 18 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್ ಸಹಿತ 159 ರನ್ ಕಲೆಹಾಕಿ ಪೆವಿಲಿಯನ್ ಸೇರಿಕೊಂಡಿದ್ದಾರೆ.

5 / 8
2018 ರಲ್ಲಿ ಭಾರತ ಟೆಸ್ಟ್ ತಂಡದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದ ಪೃಥ್ವಿ ಶಾ, ವೆಸ್ಟ್ ಇಂಡೀಸ್ ವಿರುದ್ಧ ಆಡಿದ್ದ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಬಾರಿಸಿದ್ದರು. ಈ ಮೂಲಕ ಭವಿಷ್ಯದಲ್ಲಿ ಭರವಸೆಯ ಆಟಗಾರನಾಗುವ ಸುಳಿವು ನೀಡಿದ್ದರು. ಆದರೆ ಆ ಬಳಿಕ ಪೃಥ್ವಿ ಪ್ರದರ್ಶನ ಕಳೆಗುಂದಿತ್ತು.

6 / 8
ಶಾ ಭಾರತದ ಪರ ಇದುವರೆಗೆ 5 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಇದರಲ್ಲಿ 1 ಶತಕ ಮತ್ತು 2 ಅರ್ಧ ಶತಕ ಸೇರಿದಂತೆ ಒಟ್ಟು 339 ರನ್ ಗಳಿಸಿದ್ದಾರೆ. ಟೆಸ್ಟ್ ಅಲ್ಲದೆ ಶಾ ಭಾರತ ಪರ 6 ಏಕದಿನ ಪಂದ್ಯಗಳನ್ನೂ ಆಡಿದ್ದಾರೆ. ಇದರಲ್ಲಿ ಅವರು ಗಳಿಸಿದ್ದು ಕೇವಲ 189 ರನ್.

7 / 8
ಪೃಥ್ವಿ ಶಾ ಜುಲೈ 2021 ರಲ್ಲಿ ಶ್ರೀಲಂಕಾ ವಿರುದ್ಧ ಭಾರತದ ಪರ ತಮ್ಮ ಕೊನೆಯ ಅಂತರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಈ ಪಂದ್ಯದಲ್ಲಿ ಅವರು ಶೂನ್ಯಕ್ಕೆ ಔಟಾಗಿದ್ದರು. ಆ ಬಳಿಕ ಅವರನ್ನು ತಂಡದಿಂದ ಕೈಬಿಡಲಾಗಿದೆ. ಆದರೆ, ಪೃಥ್ವಿ ಶಾ ಅವರ ಈ ಪ್ರದರ್ಶನದ ನಂತರ, ಆಯ್ಕೆದಾರರು ಪೃಥ್ವಿ ಶಾಗೆ ಮತ್ತೊಂದು ಅವಕಾಶ ನೀಡಲು ಯೋಚಿಸುವ ಸಾಧ್ಯತೆಗಳಿವೆ.

8 / 8

Published On - 4:37 pm, Fri, 9 February 24

Follow us