Ranji Trophy 2024: ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಪ್ರಥಮ ಶತಕ ಸಿಡಿಸಿದ ಶಾರ್ದೂಲ್ ಠಾಕೂರ್..!

Updated on: Mar 03, 2024 | 6:29 PM

Ranji Trophy 2024: ತಮ್ಮ ಇನ್ನಿಂಗ್ಸ್​ನಲ್ಲಿ 105 ಎಸೆತಗಳನ್ನು ಎದುರಿಸಿದ ಠಾಕೂರ್ 13 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 109 ರನ್​ ಸಿಡಿಸಿದರು. ಕೇವಲ 89 ಎಸೆತಗಳಲ್ಲಿ ಶತಕ ಪೂರೈಸಿದ ಶಾರ್ದೂಲ್​ಗೆ ಇದು ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಮೊದಲ ಶತಕವಾಗಿದೆ.

1 / 6
ಭಾರತದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಸೀಸನ್​ನಲ್ಲಿ ಸದ್ಯ ಸೆಮಿಫೈನಲ್‌ ಸುತ್ತು ನಡೆಯುತ್ತಿದೆ. ಈ ಸುತ್ತಿನಲ್ಲಿ ಮುಂಬೈ ಹಾಗೂ ತಮಿಳುನಾಡು ತಂಡಗಳು ಮುಖಾಮುಖಿಯಾಗಿದ್ದು, ಪಂದ್ಯದಲ್ಲಿ ಮುಂಬೈ ತಂಡ ಮೇಲುಗೈ ಸಾಧಿಸಿದೆ.

ಭಾರತದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಸೀಸನ್​ನಲ್ಲಿ ಸದ್ಯ ಸೆಮಿಫೈನಲ್‌ ಸುತ್ತು ನಡೆಯುತ್ತಿದೆ. ಈ ಸುತ್ತಿನಲ್ಲಿ ಮುಂಬೈ ಹಾಗೂ ತಮಿಳುನಾಡು ತಂಡಗಳು ಮುಖಾಮುಖಿಯಾಗಿದ್ದು, ಪಂದ್ಯದಲ್ಲಿ ಮುಂಬೈ ತಂಡ ಮೇಲುಗೈ ಸಾಧಿಸಿದೆ.

2 / 6

ತಮಿಳುನಾಡು ತಂಡವನ್ನು 146 ರನ್​ಗಳಿಗೆ ಆಲೌಟ್ ಮಾಡಿ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಮುಂಬೈ ತಂಡ ಎರಡನೇ ದಿನದಾಟದಂತ್ಯಕ್ಕೆ 9 ವಿಕೆಟ್ ಕಳೆದುಕೊಂಡು 353 ರನ್ ಕಲೆಹಾಕಿದೆ. ತಂಡದ ಪರ ಕೆಳಕ್ರಮಾಂಕದಲ್ಲಿ ಶತಕದ ಇನ್ನಿಂಗ್ಸ್ ಆಡಿದ ಶಾರ್ದೂಲ್ ಠಾಕೂರ್ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದ್ದಾರೆ.

3 / 6

ತಮ್ಮ ಇನ್ನಿಂಗ್ಸ್​ನಲ್ಲಿ 105 ಎಸೆತಗಳನ್ನು ಎದುರಿಸಿದ ಠಾಕೂರ್ 13 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 109 ರನ್​ ಸಿಡಿಸಿದರು. ಕೇವಲ 89 ಎಸೆತಗಳಲ್ಲಿ ಶತಕ ಪೂರೈಸಿದ ಶಾರ್ದೂಲ್​ಗೆ ಇದು ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಮೊದಲ ಶತಕವಾಗಿದೆ.

4 / 6

ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ತಮಿಳುನಾಡು ತಂಡ ತನ್ನ ಮೊದಲ ಇನಿಂಗ್ಸ್‌ನಲ್ಲಿ ಕೇವಲ 146 ರನ್ ಗಳಿಸಿದೆ. ಇದಕ್ಕೆ ಉತ್ತರವಾಗಿ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಮುಂಬೈ ತಂಡ ಒಂದು ಹಂತದಲ್ಲಿ 106 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

5 / 6

ಇದಾದ ಬಳಿಕ ಮೈದಾನಕ್ಕಿಳಿದ ಶಾರ್ದೂಲ್ ಠಾಕೂರ್, ಹಾರ್ದಿಕ್ ತಮೋರ್ ಜೊತೆಗೂಡಿ 8ನೇ ವಿಕೆಟ್‌ಗೆ 105 ರನ್‌ಗಳ ಶತಕದ ಜೊತೆಯಾಟ ನಡೆಸಿ ತಂಡವನ್ನು ಅಪಾಯದಿಂದ ಪಾರು ಮಾಡಿದರು. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೀಂ ಇಂಡಿಯಾ ಪರ ಕೊನೆಯ ಪಂದ್ಯವನ್ನು ಆಡಿದ್ದ ಶಾರ್ದೂಲ್ ಠಾಕೂರ್ ಆ ನಂತರ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿಲ್ಲ.

6 / 6

ಇನ್ನು ಟೀಂ ಇಂಡಿಯಾದಿಂದ ಹೊರಗುಳಿದು ಮುಂಬೈ ಪರ ಕಣಕ್ಕಿಳಿಯುತ್ತಿರುವ ಶ್ರೇಯಸ್ ಅಯ್ಯರ್ ಮತ್ತು ಅಜಿಂಕ್ಯ ರಹಾನೆ ಈ ಇನ್ನಿಂಗ್ಸ್‌ನಲ್ಲಿ ನಿರೀಕ್ಷೆಗೆ ತಕ್ಕಂತ ಪ್ರದರ್ಶನ ನೀಡಲಿಲ್ಲ. ಶ್ರೇಯಸ್ ಅಯ್ಯರ್ ಕೇವಲ 3 ರನ್ ಗಳಿಸಿದರೆ, ಅಜಿಂಕ್ಯ ರಹಾನೆ 19 ರನ್ ಗಳಿಸಿ ಪೆವಿಲಿಯನ್‌ ಸೇರಿದರು. ಆದರೆ, ಕಳೆದ ಪಂದ್ಯದಲ್ಲಿ ದ್ವಿಶತಕ ಸಿಡಿಸಿದ್ದ ಮುಶೀರ್ ಖಾನ್ ಈ ಪಂದ್ಯದಲ್ಲೂ ಅದ್ಭುತ ಪ್ರದರ್ಶನ ನೀಡಿ 131 ಎಸೆತಗಳಲ್ಲಿ 55 ರನ್​ಗಳ ಇನ್ನಿಂಗ್ಸ್ ಆಡಿದರು.

Loading...
Unable to load recommendations.
Follow Us