ಅಲ್ಲದೆ ಶ್ರೇಯಸ್ ಅವರ ಶತಕದ ಆಧಾರದ ಮೇಲೆ, ಮುಂಬೈ ಇದುವರೆಗೆ ಇನ್ನೂರಕ್ಕೂ ಹೆಚ್ಚು ರನ್‌ಗಳ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಯಿತು. ತಮ್ಮ ಇನ್ನಿಂಗ್ಸ್ನಲ್ಲಿ 131 ಎಸೆತಗಳನ್ನು ಎದುರಿಸಿದ ಅಯ್ಯರ್ ಒಂಬತ್ತು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ಸಹಾಯದಿಂದ ಶತಕ ಪೂರೈಸಿದರು. ಅಂತಿಮವಾಗಿ ಅಯ್ಯರ್ 190 ಎಸೆತಗಳಲ್ಲಿ 12 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 142 ರನ್ ಬಾರಿಸಿ ಔಟಾದರು.