ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಟೀಂ ಇಂಡಿಯಾದ ಹೀನಾಯ ಸೋಲಿನ ನಂತರ, ಕ್ರಿಕೆಟ್ ದಿಗ್ಗಜರು ಭಾರತೀಯ ಆಟಗಾರರಿಗೆ ದೇಶೀಯ ಕ್ರಿಕೆಟ್ ಆಡಲು ಸಲಹೆ ನೀಡಿದ್ದರು. ಇತ್ತೀಚೆಗೆ, ಪರಿಶೀಲನಾ ಸಭೆಯ ನಂತರ, ಬಿಸಿಸಿಐ ಕೂಡ ತಂಡದ ಆಟಗಾರರು ದೇಶೀಯ ಕ್ರಿಕೆಟ್ ಆಡುವುದನ್ನು ಕಡ್ಡಾಯಗೊಳಿಸಿತ್ತು. ಆ ಪ್ರಕಾರ ಶೀಘ್ರದಲ್ಲೇ ಆರಂಭವಾಗಲಿರುವ ರಣಜಿ ಟ್ರೋಫಿಯ ಎರಡನೇ ಸುತ್ತಿನಲ್ಲಿ ಭಾರತದ ಹಲವು ಸ್ಟಾರ್ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ.