- Kannada News Photo gallery Cricket photos Ranji Trophy: Mayank Agarwal Century in Karnataka vs Saurashtra Match Kannada News zp
Mayank Agarwal: ಸೆಮಿಫೈನಲ್ನಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ ಮಯಾಂಕ್ ಅಗರ್ವಾಲ್
Ranji Trophy 2023: ಮೊದಲ ದಿನದಾಟದ ಮುಕ್ತಾಯದ ವೇಳೆಗೆ ಕರ್ನಾಟಕ ತಂಡವು ಪ್ರಥಮ ಇನಿಂಗ್ಸ್ನಲ್ಲಿ 5 ವಿಕೆಟ್ ಕಳೆದುಕೊಂಡು 229 ರನ್ ಕಲೆಹಾಕಿದೆ.
Updated on: Feb 08, 2023 | 7:54 PM

Ranji Trophy 2022-23: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯ 2ನೇ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌರಾಷ್ಟ್ರ ತಂಡವು ಬೌಲಿಂಗ್ ಆಯ್ದುಕೊಂಡಿತು.

ಅದರಂತೆ ಇನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 3 ರನ್ಗಳಿಸಿ ರವಿಕುಮಾರ್ ಸಮರ್ಥ್ ನಿರ್ಗಮಿಸಿದರು. ಆ ಬಳಿಕ ಬಂದ ದೇವದತ್ ಪಡಿಕ್ಕಲ್ ಕೂಡ 9 ರನ್ಗಳಿಸಿ ಪೆವಿಲಿಯನ್ಗೆ ಹಿಂತಿರುಗಿದರು. ಇದಾಗ್ಯೂ ನಾಯಕ ಮಯಾಂಕ್ ಅಗರ್ವಾಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು.

ಎಚ್ಚರಿಕೆಯ ಬ್ಯಾಟಿಂಗ್ನೊಂದಿಗೆ ರನ್ ಗತಿ ಹೆಚ್ಚಿಸುತ್ತಾ ಸಾಗಿದ ಮಯಾಂಕ್ ಅಗರ್ವಾಲ್ 216 ಎಸೆತಗಳಲ್ಲಿ ಶತಕ ಪೂರೈಸಿದರು. ಆದರೆ ಮತ್ತೊಂದೆಡೆ 18 ರನ್ಗಳಿಸಿದ ನಿಕಿನ್ ಜೋಸ್, ಮನೀಷ್ ಪಾಂಡೆ (7) ಹಾಗೂ ಶ್ರೇಯಸ್ ಗೋಪಾಲ್ (15) ಹೆಚ್ಚು ಕ್ರೀಸ್ನಲ್ಲಿ ನಿಲ್ಲಲಿಲ್ಲ.

ಈ ಹಂತದಲ್ಲಿ ಜೊತೆಗೂಡಿದ ಮಯಾಂಕ್ ಅಗರ್ವಾಲ್ - ಶ್ರೀನಿವಾಸ್ ಶರತ್ ಶತಕದ ಜೊತೆಯಾಟವಾಡಿದರು. ಪರಿಣಾಮ ಮೊದಲ ದಿನಾದಾಟದ ಮೂರನೇ ಸೆಷನ್ನಲ್ಲಿ ಕರ್ನಾಟಕ ತಂಡದ ಮೊತ್ತವು 200 ರ ಗಡಿದಾಟಿತು. ಇದರ ನಡುವೆ ಶ್ರೀನಿವಾಸ್ ಶರತ್ ಅರ್ಧಶತಕ ಪೂರೈಸಿದರು.

ಅದರಂತೆ ಮೊದಲ ದಿನದಾಟದ ಮುಕ್ತಾಯದ ವೇಳೆಗೆ ಕರ್ನಾಟಕ ತಂಡವು ಮೊದಲ ಇನಿಂಗ್ಸ್ನಲ್ಲಿ 5 ವಿಕೆಟ್ ಕಳೆದುಕೊಂಡು 229 ರನ್ ಕಲೆಹಾಕಿದೆ. 110 ರನ್ ಬಾರಿಸಿರುವ ಮಯಾಂಕ್ ಅಗರ್ವಾಲ್ ಹಾಗೂ ಶ್ರೀನಿವಾಸ್ ಶರತ್ (58) 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
