ವಾಸ್ತವವಾಗಿ ಟೀಂ ಇಂಡಿಯಾದ ಎಲ್ಲಾ ಆಟಗಾರರು ಪ್ರಸ್ತುತ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ ಕಣಕ್ಕಿಳಿದಿದ್ದಾರೆ. ಆದರೆ ಜಡೇಜಾರನ್ನು ಹೊರತುಪಡಿಸಿ ಮಿಕ್ಕವರ್ಯಾರು ಉತ್ತಮ ಪ್ರದರ್ಶನ ನೀಡಿಲ್ಲ. ರೋಹಿತ್ ಶರ್ಮಾ, ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್ ಕೂಡ ದಯನೀಯವಾಗಿ ವಿಫಲರಾಗಿದ್ದಾರೆ. ರೋಹಿತ್ ಶರ್ಮಾ 19 ಎಸೆತಗಳಲ್ಲಿ 3 ರನ್ ಗಳಿಸಿದರೆ, ಜೈಸ್ವಾಲ್ ಮತ್ತು ಶುಭಮನ್ ಗಿಲ್ ಕೂಡ ತಲಾ 4 ರನ್ ಹಾಗೂ ಪಂತ್ ಕೇವಲ 1 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ.