AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಾವೊ ವಿಶ್ವ ದಾಖಲೆ ಬೌಲ್ಡ್: ಹೊಸ ಇತಿಹಾಸ ನಿರ್ಮಿಸಿದ ರಶೀದ್ ಖಾನ್

Rashid Khan Record: ಟಿ20 ಕ್ರಿಕೆಟ್​ನಲ್ಲಿ ಕೇವಲ ಇಬ್ಬರು ಬೌಲರ್​​ಗಳು ಮಾತ್ರ 600+ ವಿಕೆಟ್ ಕಬಳಿಸಿದ್ದಾರೆ. ಈ ಸಾಧನೆ ಮಾಡಿದ ಮೊದಲ ಬೌಲರ್ ವೆಸ್ಟ್ ಇಂಡೀಸ್​ನ ಡ್ವೇನ್ ಬ್ರಾವೊ. ಇದೀಗ ಬ್ರಾವೊ ಅವರ ವಿಶ್ವ ದಾಖಲೆಯನ್ನು ಮುರಿದು ರಶೀದ್ ಖಾನ್ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಆ ದಾಖಲೆಯ ಸಂಪೂರ್ಣ ವಿವರ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: Feb 05, 2025 | 9:04 AM

Share
ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ವಿಕೆಟ್ ಪಡೆದ ವಿಶ್ವ ದಾಖಲೆ ರಶೀದ್ ಖಾನ್ ಪಾಲಾಗಿದೆ. ಸೌತ್ ಆಫ್ರಿಕಾದಲ್ಲಿ ನಡೆದ SA20 ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ 2 ವಿಕೆಟ್ ಕಬಳಿಸುವುದರೊಂದಿಗೆ ರಶೀದ್ ಖಾನ್ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ.

1 / 6
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಂಐ ಕೇಪ್ ಟೌನ್ ತಂಡವು 20 ಓವರುಗಳಲ್ಲಿ 199 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಾರ್ಲ್ ರಾಯಲ್ಸ್ 19.4 ಓವರುಗಳಲ್ಲಿ 160 ರನ್ ಗಳಿಸಿ ಆಲೌಟ್ ಆಗಿದೆ. ಎಂಐ ಕೇಪ್ ಟೌನ್ ಪರ ನಾಯಕ ರಶೀದ್ ಖಾನ್ 4 ಓವರುಗಳಲ್ಲಿ 33 ರನ್ ನೀಡಿ 2 ವಿಕೆಟ್ ಕಬಳಿಸಿದರು.

2 / 6
ಈ ಎರಡು ವಿಕೆಟ್ ಗಳೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್ ಎಂಬ ವಿಶ್ವ ದಾಖಲೆ ರಶೀದ್ ಖಾನ್ ಪಾಲಾಯಿತು. ಇದಕ್ಕೂ ಮುನ್ನ ಈ ವರ್ಲ್ಡ್ ರೆಕಾರ್ಡ್ ವೆಸ್ಟ್ ಇಂಡೀಸ್​ನ ಆಲ್​​ರೌಂಡರ್​ ಡ್ವೇನ್ ಬ್ರಾವೊ ಹೆಸರಿನಲ್ಲಿತ್ತು.

3 / 6
2006 ರಿಂದ 2024 ರವರೆಗೆ 582	ಟಿ20 ಪಂದ್ಯಗಳನ್ನಾಡಿರುವ ಡ್ವೇನ್ ಬ್ರಾವೊ 546 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 11183 ಎಸೆತಗಳನ್ನು ಎಸೆದಿರುವ ಅವರು ಒಟ್ಟು 631 ವಿಕೆಟ್ ಪಡೆದಿದ್ದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಅಫ್ಘಾನ್ ಸ್ಪಿನ್ನರ್ ರಶೀದ್ ಖಾನ್ ಮುರಿದಿದ್ದಾರೆ.

4 / 6
2015 ರಿಂದ ಟಿ20 ಪಂದ್ಯಗಳನ್ನಾಡುತ್ತಿರುವ ರಶೀದ್ ಖಾನ್ ಈವರೆಗೆ 457 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 10564 ಎಸೆತಗಳನ್ನು ಎಸೆದಿರುವ ಅವರು ಒಟ್ಟು 633 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

5 / 6
ಇನ್ನು ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ಹೆಚ್ಚು ವಿಕೆಟ್ ಕಬಳಿಸಿದ ದಾಖಲೆ ಯುಜ್ವೇಂದ್ರ ಚಹಲ್ ಹೆಸರಿನಲ್ಲಿದೆ. 2009 ರಿಂದ ಟಿ20 ಪಂದ್ಯಗಳನ್ನಾಡುತ್ತಿರುವ ಚಹಲ್ ಈವರೆಗೆ 309 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡುತ್ತಿದ್ದಾರೆ. ಈ ವೇಳೆ 6695 ಎಸೆತಗಳಲ್ಲಿ 364 ವಿಕೆಟ್ ಪಡೆದು ಈ ದಾಖಲೆ ನಿರ್ಮಿಸಿದ್ದಾರೆ.

6 / 6
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ

ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ

ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್

ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ

ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ

5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್

‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ