ಏಕದಿನ ಕ್ರಿಕೆಟ್ನಲ್ಲಿ ಭರ್ಜರಿ ದಾಖಲೆ ಬರೆದ ರಶೀದ್ ಖಾನ್
Afghanistan vs Bangladesh, 1st ODI: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 48.5 ಓವರ್ಗಳಲ್ಲಿ 221 ರನ್ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು 47.1 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 226 ರನ್ ಕಲೆಹಾಕಿದೆ. ಈ ಮೂಲಕ ಅಫ್ಘಾನ್ ಪಡೆ ಐದು ವಿಕೆಟ್ಗಳ ಜಯ ಸಾಧಿಸಿದೆ.
Updated on: Oct 09, 2025 | 8:21 AM

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ಹೊಂದಿರುವ ರಶೀದ್ ಖಾನ್ (Rashid Khan) ಇದೀಗ ಅಫ್ಘಾನಿಸ್ತಾನ್ ಪರ ಏಕದಿನ ಕ್ರಿಕೆಟ್ನಲ್ಲಿ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಅಫ್ಗಾನ್ ತಂಡದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ.

ಅಬುಧಾಬಿಯಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 10 ಓವರ್ಗಳನ್ನು ಎಸೆದ ರಶೀದ್ ಖಾನ್ ಕೇವಲ 38 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಈ ಮೂರು ವಿಕೆಟ್ಗಳೊಂದಿಗೆ ರಶೀದ್ ಏಕದಿನ ಕ್ರಿಕೆಟ್ನಲ್ಲಿ 200 ವಿಕೆಟ್ಗಳನ್ನು ಪೂರೈಸಿದ್ದಾರೆ.

ಈ ಮೂಲಕ ಅಫ್ಘಾನಿಸ್ತಾನ್ ಪರ ಏಕದಿನ ಕ್ರಿಕೆಟ್ನಲ್ಲಿ 200 ವಿಕೆಟ್ಗಳನ್ನು ಕಬಳಿಸಿದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಒನ್ ಡೇ ಕ್ರಿಕೆಟ್ನಲ್ಲಿ ಅತೀ ಕಡಿಮೆ ಇನಿಂಗ್ಸ್ನಲ್ಲಿ 200 ವಿಕೆಟ್ ಉರುಳಿಸಿದ ವಿಶ್ವದ 2ನೇ ಸ್ಪಿನ್ನರ್ ಎಂಬ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಅಫ್ಘಾನಿಸ್ತಾನದ ಮಾಜಿ ಸ್ಪಿನ್ನರ್ ಸಖ್ಲೈನ್ ಮುಷ್ತಾಕ್. ಏಕದಿನ ಕ್ರಿಕೆಟ್ನಲ್ಲಿ 200 ವಿಕೆಟ್ ಕಬಳಿಸಿದ ಸಖ್ಲೈನ್ ತೆಗೆದುಕೊಂಡಿರುವುದು ಕೇವಲ 104 ಇನಿಂಗ್ಸ್ಗಳನ್ನು ಮಾತ್ರ. ಈ ಮೂಲಕ ಒನ್ಡೇ ಕ್ರಿಕೆಟ್ನಲ್ಲಿ ಅತೀ ಕಡಿಮೆ ಇನಿಂಗ್ಸ್ನಲ್ಲಿ 200 ವಿಕೆಟ್ ಕಬಳಿಸಿದ ಸ್ಪಿನ್ನರ್ ಎಂಬ ವಿಶ್ವ ದಾಖಲೆ ಬರೆದಿದ್ದಾರೆ.

ಇದೀಗ ಕೇವಲ 107 ಇನಿಂಗ್ಸ್ಗಳ ಮೂಲಕ ರಶೀದ್ ಖಾನ್ ಏಕದಿನ ಕ್ರಿಕೆಟ್ನಲ್ಲಿ 202 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಸಖ್ಲೈನ್ ನಂತರ 110 ಕ್ಕಿಂತ ಕಡಿಮೆ ಇನಿಂಗ್ಸ್ಗಳ ಮೂಲಕ ಒನ್ಡೇ ಕ್ರಿಕೆಟ್ನಲ್ಲಿ 200 ವಿಕೆಟ್ ಪಡೆದ ವಿಶ್ವದ 2ನೇ ಸ್ಪಿನ್ನರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More
