AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ರಶೀದ್ ಖಾನ್

Rashid Khan's New World Record: ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬೌಲರ್​ರೊಬ್ಬರು 700 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಸಾಧನೆ ಮಾಡಿದ ವಿಶ್ವದ ಏಕೈಕ ಬೌಲರ್ ಎಂಬ ಹೆಗ್ಗಳಿಕೆಯನ್ನು ಅಫ್ಘಾನಿಸ್ತಾನ್ ಸ್ಪಿನ್ನರ್ ಮಾಂತ್ರಿಕ ರಶೀದ್ ಖಾನ್ ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on:Feb 16, 2026 | 1:55 PM

Share
ಟಿ20 ಕ್ರಿಕೆಟ್​ನಲ್ಲಿ ಅಫ್ಘಾನಿಸ್ತಾನ್ ಸ್ಪಿನ್ನರ್ ರಶೀದ್ ಖಾನ್ (Rashid Khan) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ  ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆಯನ್ನು ಬರೆಯುವ ಮೂಲಕ ಎಂಬುದು ವಿಶೇಷ. ರಶೀದ್ ಖಾನ್ ಬರೆದಿರುವ ಹೊಸ ವಿಶ್ವ ದಾಖಲೆ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

1 / 5
ದೆಹಲಿಯಲ್ಲಿ ನಡೆದ ಟಿ20 ವಿಶ್ವಕಪ್​ನ 28ನೇ ಪಂದ್ಯದಲ್ಲಿ ಯುಎಇ ವಿರುದ್ಧ ರಶೀದ್ ಖಾನ್ 4 ಓವರ್​ಗಳನ್ನು ಎಸೆದಿದ್ದರು. ಈ ವೇಳೆ 24 ರನ್ ನೀಡಿ 1 ವಿಕೆಟ್ ಕಬಳಿಸಿದ್ದಾರೆ. ಈ ಒಂದು ವಿಕೆಟ್​ನೊಂದಿಗೆ ಟಿ20 ಕ್ರಿಕೆಟ್​​ನಲ್ಲಿ 700 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

2 / 5
ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಯಾರೂ ಕೂಡ 700 ವಿಕೆಟ್ ಪಡೆದಿರಲಿಲ್ಲ. ಈ ಹಿಂದೆ ಮೂವರು ಬೌಲರ್​ಗಳು 600 ಕ್ಕಿಂತ ಹೆಚ್ಚು ವಿಕೆಟ್ ಕಬಳಿಸಿ ಈ ಸಾಧನೆ ಮಾಡಿದ್ದರು. ಇದೀಗ ಆರು ನೂರರ ಪಟ್ಟಿಯಿಂದ ರಶೀದ್ ಖಾನ್ ಏಳು ನೂರರ ಪಟ್ಟಿಗೆ ಎಂಟ್ರಿ ಕೊಟ್ಟಿದ್ದಾರೆ. ಅದು ಸಹ ತನ್ನ 27ನೇ ವಯಸ್ಸಿನಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ. 

3 / 5
ಟಿ20 ಕ್ರಿಕೆಟ್​ನಲ್ಲಿ ಈವರೆಗೆ 513ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ರಶೀದ್ ಖಾನ್ 11794 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 12961 ರನ್ ನೀಡಿ ಬರೋಬ್ಬರಿ 700 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 700 ವಿಕೆಟ್ ಕಬಳಿಸಿದ ವಿಶ್ವದ ಮೊದಲ ಹಾಗೂ ಏಕೈಕ ಬೌಲರ್ ಎನಿಸಿಕೊಂಡಿದ್ದಾರೆ.

4 / 5
ಇನ್ನು ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಎರಡನೇ ಬೌಲರ್ ದಾಖಲೆ ವೆಸ್ಟ್ ಇಂಡೀಸ್​ನ ಡ್ವೇನ್ ಬ್ರಾವೊ (631) ಹೆಸರಿನಲ್ಲಿದೆ. ಹಾಗೆಯೇ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ವಿಂಡೀಸ್​ನ ಸುನಿಲ್ ನರೈನ್ ಇದ್ದು, ಈವರೆಗೆ 613 ವಿಕೆಟ್ ಕಬಳಿಸಿದ್ದಾರೆ. ಅಂದರೆ ಇಲ್ಲಿ ಸುನಿಲ್ ನರೈನ್ ನಿವೃತ್ತಿಯಂಚಿನಲ್ಲಿರುವ ಕಾರಣ ರಶೀದ್ ಖಾನ್ ಅವರ ಈ ವಿಶ್ವ ದಾಖಲೆಯನ್ನು ಮುರಿಯಲು ಸಾಧ್ಯವಾಗುವುದಿಲ್ಲ ಎಂದೇ ಹೇಳಬಹುದು.

5 / 5

Published On - 1:53 pm, Mon, 16 February 26

ರಣಜಿ ಟ್ರೋಫಿ ಸೆಮಿಫೈನಲ್‌; ಸ್ಮರಣೀಯ ಶತಕ ಸಿಡಿಸಿದ ಸ್ಮರಣ್

ಭಾರತದ ವಿರುದ್ಧ ಸೋಲು; ಪಾಕಿಸ್ತಾನದಲ್ಲಿ ಟಿವಿಗಳು ಪುಡಿಪುಡಿ

ಅಪಘಾತಕ್ಕೆ 2 ವರ್ಷದ ಮಗು ಬಲಿ: ರಸ್ತೆ ದುಃಸ್ಥಿತಿ ಖಂಡಿಸಿ ಪ್ರತಿಭಟನೆ

ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಮಣಿಶಂಕರ್ ಅಯ್ಯರ್

ನಾಪತ್ತೆಯಾದ ಮಹಿಳೆ ಪರಪುರುಷನ ಮನೆಯಲ್ಲಿ ಪತ್ತೆ: ಇಲ್ಲಿದೆ Exclusive ದೃಶ್ಯ

ಮಿತಿಮೀರಿ ನಡೆದುಕೊಂಡ ದರ್ಶನ್ ಅಭಿಮಾನಿಗೆ ಪೊಲೀಸ್ ಅಧಿಕಾರಿಯಿಂದ ಕಪಾಳಮೋಕ್ಷ

ರಿಂಕು ಸಿಂಗ್ ಕೈಯಲ್ಲಿ ಬೌಲಿಂಗ್ ಮಾಡಿಸಿ ನಮ್ಮ ಮರ್ಯಾದೆಯನ್ನೇ ತೆಗೆದುಬಿಟ್ರು

ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ ಹೇಗೆ? ಹೀಗ್ಯಾಕಂದ್ರು ಸಚಿವ ಮಹದೇವಪ್ಪ!

ರಾಜಸ್ಥಾನದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಶಬರಿಮಲೆಗೆ ಮಹಿಳೆಯರ ಪ್ರವೇಶ: ಏ. 7ರಿಂದ ಮರುಪರಿಶೀಲನಾ ಅರ್ಜಿಗಳ ವಿಚಾರಣೆ