ಟಿ20 ಕ್ರಿಕೆಟ್ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ರಶೀದ್ ಖಾನ್
Rashid Khan World Record: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ರಶೀದ್ ಖಾನ್ ಭರ್ಜರಿ ದಾಖಲೆ ಬರೆದಿದ್ದಾರೆ. ಈ ದಾಖಲೆಯೊಂದಿಗೆ ರಶೀದ್ ನ್ಯೂಝಿಲೆಂಡ್ ವೇಗಿ ಟಿಮ್ ಸೌಥಿ ಅವರ ವಿಶ್ವ ದಾಖಲೆಯನ್ನು ಮುರಿದಿದ್ದಾರೆ. ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್ನಲ್ಲಿ ಯಾರು ಮಾಡಲಾಗದ ವಿಶೇಷ ಸಾಧನೆಯ ಮೈಲುಗಲ್ಲನ್ನು ಮುಟ್ಟಿದ್ದಾರೆ.
Updated on: Sep 02, 2025 | 9:59 AM

ಅಫ್ಘಾನಿಸ್ತಾನದ ಸ್ಪಿನ್ ಮೋಡಿಗಾರ ರಶೀದ್ ಖಾನ್ (Rashid Khan) ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಸಹ ಅತ್ಯಧಿಕ ವಿಕೆಟ್ ಕಬಳಿಸುವ ಮೂಲಕ ಎಂಬುದು ವಿಶೇಷ. ಶಾರ್ಜಾದಲ್ಲಿ ನಡೆದ ಯುಎಇ ವಿರುದ್ಧದ ಪಂದ್ಯದಲ್ಲಿ ರಶೀದ್ ಖಾನ್ 4 ಓವರ್ಗಳಲ್ಲಿ 21 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು.

ಈ ಮೂರು ವಿಕೆಟ್ಗಳೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್ ಎಂಬ ವಿಶ್ವ ದಾಖಲೆಯನ್ನು ರಶೀದ್ ಖಾನ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಖೂ ಮುನ್ನ ಈ ವರ್ಲ್ಡ್ ರೆಕಾರ್ಡ್ ನ್ಯೂಝಿಲೆಂಡ್ನ ಟಿಮ್ ಸೌಥಿ ಹೆಸರಿನಲ್ಲಿತ್ತು.

ನ್ಯೂಝಿಲೆಂಡ್ ವೇಗಿ ಟಿಮ್ ಸೌಥಿ 123 ಇನಿಂಗ್ಸ್ಗಳಲ್ಲಿ 458.5 ಓವರ್ಗಳನ್ನು ಎಸೆದಿದ್ದಾರೆ. ಈ ವೇಳೆ ಎಸೆದ 2753 ಎಸೆತಗಳಲ್ಲಿ 164 ವಿಕೆಟ್ ಕಬಳಿಸಿದ್ದರು. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದರು.

ಇದೀಗ ಈ ದಾಖಲೆಯನ್ನು ರಶೀದ್ ಖಾನ್ ಮುರಿದಿದ್ದಾರೆ. 2015 ರಿಂದ ಅಂತಾರಾಷ್ಟ್ರೀಯ ಟಿ20 ಪಂದ್ಯವಾಡುತ್ತಿರುವ ರಶೀದ್ 98 ಟಿ20 ಪಂದ್ಯಗಳಲ್ಲಿ 373.2 ಓವರ್ಗಳನ್ನು ಎಸೆದಿದ್ದಾರೆ. ಈ ಓವರ್ಗಳಲ್ಲಿ ಎಸೆದ 2240 ಎಸೆತಗಳ ಮೂಲಕ 165 ವಿಕೆಟ್ ಕಬಳಿಸಿ ಹೊಸ ತಿಹಾಸ ನಿರ್ಮಿಸಿದ್ದಾರೆ.

ಇನ್ನು ಟಿ20 ಕ್ರಿಕೆಟ್ನಲ್ಲಿ (ಟಿ20 ಅಂತಾರಾಷ್ಟ್ರೀಯ+ಟಿ20 ಲೀಗ್) ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ಕೂಡ ರಶೀದ್ ಖಾನ್ ಹೆಸರಿನಲ್ಲಿದೆ. 484 ಟಿ20 ಇನಿಂಗ್ಸ್ ಗಳಲ್ಲಿ ಬೌಲಿಂಗ್ ಮಾಡಿರುವ ರಶೀದ್ ಖಾನ್ ಈವರೆಗೆ 661 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟಿ20 ಇತಿಹಾಸದಲ್ಲೇ 650+ ವಿಕೆಟ್ ಪಡೆದ ಏಕೈಕ ಬೌಲರ್ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.
