AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಢೀರ್ ನಿವೃತ್ತಿ ಘೋಷಿಸಿದ ಸೌತ್ ಆಫ್ರಿಕಾದ ಸ್ಫೋಟಕ ದಾಂಡಿಗ

Rassie van der Dussen retirement: ಸೌತ್ ಆಫ್ರಿಕಾ ತಂಡದ ಅನುಭವಿ ಬ್ಯಾಟರ್ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. 2018 ರಲ್ಲಿ ಶುರುವಾದ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಅವರ ಇಂಟರ್​ನ್ಯಾಷನಲ್ ಕ್ರಿಕೆಟ್ ಕೆರಿಯರ್ 2026 ರಲ್ಲಿ ಅಂತ್ಯವಾಗಿದೆ. ಇದಾಗ್ಯೂ ಅವರು ಫ್ರಾಂಚೈಸಿ ಲೀಗ್ ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 02, 2026 | 2:03 PM

Share
ಸೌತ್ ಆಫ್ರಿಕಾದ ಸ್ಫೋಟಕ ಬ್ಯಾಟರ್ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ (Rassie van der Dussen) ಅವರು ಇಂದು (ಏಪ್ರಿಲ್ 2, 2026) ಎಲ್ಲಾ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಏಳು ವರ್ಷಗಳಿಂದ ಸೌತ್ ಆಫ್ರಿಕಾ ತಂಡದ ಭಾಗವಾಗಿದ್ದ ಡಸ್ಸೆನ್ ಯುವ ಆಟಗಾರರಿಗೆ ಅವಕಾಶ ಕಲ್ಪಿಸುವ ಸಲುವಾಗಿ ನಿವೃತ್ತಿ ಘೋಷಿಸುತ್ತಿರುವುದಾಗಿ ತಿಳಿಸಿದ್ದಾರೆ.

1 / 5
ಆದರೆ ಕ್ರಿಕೆಟ್ ಸೌತ್ ಆಫ್ರಿಕಾ (CSA) ಇತ್ತೀಚೆಗೆ ಪ್ರಕಟಿಸಿದ 2026-27ರ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಅವರ ಹೆಸರನ್ನು ಕೈಬಿಡಲಾಗಿತ್ತು. ಇದು ಅವರ ನಿವೃತ್ತಿಯ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.

2 / 5
ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಆಡುತ್ತಿರುವುದು ಆಯಾಸ ತಂದಿದೆ, ಈಗ ಯುವಕರಿಗೆ ದಾರಿ ಮಾಡಿಕೊಡುವ ಸರಿಯಾದ ಸಮಯ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳುವ ಮೂಲಕ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ತಮ್ಮ ನಿವೃತ್ತಿಯನ್ನು ಅಧಿಕೃತಗೊಳಿಸಿದ್ದಾರೆ.

3 / 5
2018ರಲ್ಲಿ ಝಿಂಬಾಬ್ವೆ ವಿರುದ್ಧದ ಟಿ20 ಪಂದ್ಯದ ಮೂಲಕ ಸೌತ್ ಆಫ್ರಿಕಾ ಪರ ಪಾದಾರ್ಪಣೆ ಮಾಡಿದ ಡಸ್ಸೆನ್, ಅಲ್ಪಾವಧಿಯಲ್ಲೇ ತಂಡದ ಮಧ್ಯಾಂತರ ಕ್ರಮಾಂಕದ ಶಕ್ತಿಯಾದರು. ಆಗಸ್ಟ್ 16, 2025 ರಂದು ಆಸ್ಟ್ರೇಲಿಯಾ ವಿರುದ್ಧ ನಡೆದ ಟಿ20 ಪಂದ್ಯವೇ ಅವರ ವೃತ್ತಿಜೀವನದ ಕೊನೆಯ ಅಂತರರಾಷ್ಟ್ರೀಯ ಪಂದ್ಯವಾಯಿತು.

4 / 5
ಇದರ ನಡುವೆ 71 ಏಕದಿನ ಪಂದ್ಯಗಳನ್ನಾಡಿರುವ ಅವರು 6 ಶತಕ ಹಾಗೂ 17 ಅರ್ಧಶತಕಗಳೊಂದಿಗೆ 2657 ರನ್ ಕಲೆಹಾಕಿದ್ದಾರೆ. ಇನ್ನು 57 ಟಿ20 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಡಸ್ಸೆನ್ 10 ಅರ್ಧಶತಕಗಳೊಂದಿಗೆ 1406 ರನ್​ ಗಳಿಸಿದ್ದಾರೆ. ಹಾಗೆಯೇ 18 ಟೆಸ್ಟ್ ಪಂದ್ಯಗಳಲ್ಲಿ ಸೌತ್ ಆಫ್ರಿಕಾ ತಂಡವನ್ನು ಪ್ರತಿನಿಧಿಸಿರುವ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ 6 ಅರ್ಧಶತಕಗಳೊಂದಿಗೆ ಒಟ್ಟು 905 ರನ್​​ ಕಲೆಹಾಕಿದ್ದಾರೆ.

5 / 5
Follow Us