R Ashwin: 10+2 ವಿಕೆಟ್ಗಳೊಂದಿಗೆ ವಿಶೇಷ ದಾಖಲೆ ಬರೆಯಲಿದ್ದಾರೆ ಅಶ್ವಿನ್
TV9 Web | Updated By: ಝಾಹಿರ್ ಯೂಸುಫ್
Updated on:
Jan 22, 2024 | 2:53 PM
India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು 2ನೇ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿರುವ ವೈಎಸ್ಆರ್ ಸ್ಟೇಡಿಯಂ ಆತಿಥ್ಯವಹಿಸಿದರೆ, 3ನೇ ಪಂದ್ಯವು ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ.
1 / 7
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮೂಲಕ ವಿಶೇಷ ದಾಖಲೆ ಬರೆಯುವ ಅವಕಾಶ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮುಂದಿದೆ. ಈ ಸರಣಿಯ 5 ಪಂದ್ಯಗಳಿಂದ ಅಶ್ವಿನ್ 12 ವಿಕೆಟ್ ಕಬಳಿಸಿದರೆ ಹೊಸ ದಾಖಲೆ ನಿರ್ಮಾಣವಾಗಲಿದೆ. ಅದು ಕೂಡ ಟೀಮ್ ಇಂಡಿಯಾ ಪರ ಇದುವರೆಗೆ ಯಾರೂ ಕೂಡ ಮಾಡದ ರೆಕಾರ್ಡ್ ಎಂಬುದು ವಿಶೇಷ.
2 / 7
ಅಂದರೆ ಟೆಸ್ಟ್ ಕ್ರಿಕೆಟ್ನಲ್ಲಿ ಇಂಗ್ಲೆಂಡ್ ವಿರುದ್ಧದ 100 ವಿಕೆಟ್ಗಳನ್ನು ಕಬಳಿಸಿದ ಮೊದಲ ಭಾರತೀಯ ಎನಿಸಿಕೊಳ್ಳಲು ರವಿಚಂದ್ರನ್ ಅಶ್ವಿನ್ಗೆ ಬೇಕಿರುವುದು ಕೇವಲ 12 ವಿಕೆಟ್ಗಳು ಮಾತ್ರ. ಹೀಗಾಗಿ ಐದು ಪಂದ್ಯಗಳ 10 ಇನಿಂಗ್ಸ್ಗಳಿಂದ ಈ ವಿಶೇಷ ದಾಖಲೆಯನ್ನು ನಿರೀಕ್ಷಿಸಬಹುದು.
3 / 7
ಸದ್ಯ ಈ ಪಟ್ಟಿಯಲ್ಲಿ ಭಾರತದ ಮಾಜಿ ಆಟಗಾರ ಬಿಎಸ್ ಚಂದ್ರಶೇಖರ್ ಅಗ್ರಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧ 38 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿರುವ ಚಂದ್ರಶೇಖರ್ 95 ವಿಕೆಟ್ಗಳನ್ನು ಕಬಳಿಸಿ ದಾಖಲೆ ಬರೆದಿದ್ದಾರೆ. ಈ ದಾಖಲೆಯನ್ನು ಮುರಿದು ಹೊಸ ಇತಿಹಾಸ ಬರೆಯುವ ಅವಕಾಶ ಅಶ್ವಿನ್ ಮುಂದಿದೆ.
4 / 7
ಇದಲ್ಲದೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅಶ್ವಿನ್ 10 ವಿಕೆಟ್ಗಳನ್ನು ಪಡೆದರೆ ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ ಕಬಳಿಸಿದ ವಿಶೇಷ ಸಾಧಕರ ಪಟ್ಟಿಗೂ ಸೇರ್ಪಡೆಯಾಗಲಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ 2ನೇ ಭಾರತೀಯ ಎನಿಸಿಕೊಳ್ಳಲಿದ್ದಾರೆ.
5 / 7
ಟೆಸ್ಟ್ ಕ್ರಿಕೆಟ್ನಲ್ಲಿ ಭಾರತದ ಪರ ಅತ್ಯಧಿಕ ವಿಕೆಟ್ ಪಡೆದ ದಾಖಲೆ ಅನಿಲ್ ಕುಂಬ್ಳೆ ಹೆಸರಿನಲ್ಲಿದೆ. ಟೀಮ್ ಇಂಡಿಯಾ ಪರ 236 ಟೆಸ್ಟ್ ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿರುವ ಕುಂಬ್ಳೆ ಒಟ್ಟು 619 ವಿಕೆಟ್ಗಳನ್ನು ಕಬಳಿಸಿ ದಾಖಲೆ ನಿರ್ಮಿಸಿದ್ದಾರೆ.
6 / 7
ಇದೀಗ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳಿಂದ ರವಿಚಂದ್ರನ್ ಅಶ್ವಿನ್ 10+2 ವಿಕೆಟ್ ಪಡೆದರೆ ಎರಡು ವಿಶೇಷ ದಾಖಲೆ ಅವರ ಪಾಲಾಗಲಿದೆ. ಈ ಮೂಲಕ ಅಶ್ವಿನ್ ಹೊಸ ಇತಿಹಾಸ ನಿರ್ಮಿಸಲಿದ್ದಾರಾ ಕಾದು ನೋಡೋಣ.
7 / 7
ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು 2ನೇ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿರುವ ವೈಎಸ್ಆರ್ ಸ್ಟೇಡಿಯಂ ಆತಿಥ್ಯವಹಿಸಿದರೆ, 3ನೇ ಪಂದ್ಯವು ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ನಾಲ್ಕನೇ ಟೆಸ್ಟ್ ಪಂದವು ರಾಂಚಿಯ ಜೆಎಸ್ಸಿಎ ಸ್ಟೇಡಿಯಂನಲ್ಲಿ ನಡೆಯಲಿದ್ದು, ಕೊನೆಯ ಟೆಸ್ಟ್ ಪಂದ್ಯಕ್ಕೆ ಧರ್ಮಶಾಲಾದ ಹೆಚ್ಪಿಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ.