R Ashwin: ಅಶ್ವಿನ್ ಸ್ಪಿನ್ಗೆ ಕುಂಬ್ಳೆ ದಾಖಲೆ ಕ್ಲೀನ್ ಬೌಲ್ಡ್
TV9 Web | Updated By: ಝಾಹಿರ್ ಯೂಸುಫ್
Updated on:
Feb 17, 2024 | 8:24 AM
Ravichandran Ashwin: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಒಂದು ವಿಕೆಟ್ ಪಡೆಯುವ ಮೂಲಕ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ಗಳನ್ನು ಪೂರೈಸಿದ್ದಾರೆ. ಈ ಮೂಲಕ ಭಾರತದ ಪರ ಟೆಸ್ಟ್ನಲ್ಲಿ ಅತೀ ವೇಗವಾಗಿ 500 ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಲೆಜೆಂಡ್ ಅನಿಲ್ ಕುಂಬ್ಳೆ ಹೆಸರಿನಲ್ಲಿತ್ತು.
1 / 7
ರಾಜ್ಕೋಟ್ನ ನಿರಂಜನ್ ಶಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ರವಿಚಂದ್ರನ್ ಅಶ್ವಿನ್ 1 ವಿಕೆಟ್ ಕಬಳಿಸಿದ್ದಾರೆ. ಈ ಒಂದು ವಿಕೆಟ್ನೊಂದಿಗೆ ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ಗಳ ಸಾಧನೆ ಮಾಡಿದ್ದಾರೆ.
2 / 7
ಇದರೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 500 ವಿಕೆಟ್ ಕಬಳಿಸಿದ ಟಾಪ್-5 ಬೌಲರ್ಗಳ ಪಟ್ಟಿಯಲ್ಲಿ ಅಶ್ವಿನ್ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. ಅದು ಕೂಡ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಹಾಗಿದ್ರೆ ಟೆಸ್ಟ್ನಲ್ಲಿ ಅತೀ ವೇಗವಾಗಿ ಐನೂರು ವಿಕೆಟ್ ಕಬಳಿಸಿದ ಬೌಲರ್ಗಳು ಯಾರೆಲ್ಲಾ ಎಂದು ನೋಡೋಣ...
3 / 7
5- ಗ್ಲೆನ್ ಮೆಕ್ಗ್ರಾಥ್: ಆಸ್ಟ್ರೇಲಿಯಾ ಪರ 124 ಟೆಸ್ಟ್ ಪಂದ್ಯಗಳನ್ನಾಡಿರುವ ಗ್ಲೆನ್ ಮೆಕ್ಗ್ರಾಥ್ 214 ಇನಿಂಗ್ಸ್ಗಳ ಮೂಲಕ 500 ವಿಕೆಟ್ಗಳ ಸಾಧನೆ ಮಾಡಿದ್ದರು.
4 / 7
4- ಶೇನ್ ವಾರ್ನ್: ಆಸ್ಟ್ರೇಲಿಯಾದ ಸ್ಪಿನ್ ಲೆಜೆಂಡ್ ಶೇನ್ ವಾರ್ನ್ 108 ಟೆಸ್ಟ್ ಪಂದ್ಯಗಳಲ್ಲಿ 201 ಇನಿಂಗ್ಸ್ ಆಡಿ 500 ವಿಕೆಟ್ಗಳ ದಾಖಲೆ ಬರೆದಿದ್ದರು.
5 / 7
3- ಅನಿಲ್ ಕುಂಬ್ಳೆ: ಟೆಸ್ಟ್ ಕ್ರಿಕೆಟ್ನಲ್ಲಿ 500+ ವಿಕೆಟ್ ಪಡೆದ ಟೀಮ್ ಇಂಡಿಯಾದ ಮೊದಲ ಬೌಲರ್ ಎಂಬ ದಾಖಲೆ ಅನಿಲ್ ಕುಂಬ್ಳೆ ಹೆಸರಿನಲ್ಲಿದೆ. ಕುಂಬ್ಳೆ 189 ಟೆಸ್ಟ್ ಇನಿಂಗ್ಸ್ ಮೂಲಕ 500 ವಿಕೆಟ್ಗಳ ಸಾಧನೆ ಮಾಡಿದ್ದರು.
6 / 7
2- ರವಿಚಂದ್ರನ್ ಅಶ್ವಿನ್: ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ 1 ವಿಕೆಟ್ ಕಬಳಿಸುವ ಮೂಲಕ ರವಿಚಂದ್ರನ್ ಅಶ್ವಿನ್ ಕೇವಲ 184 ಇನಿಂಗ್ಸ್ಗಳಲ್ಲಿ 500 ವಿಕೆಟ್ಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಅತೀ ವೇಗವಾಗಿ 500 ಟೆಸ್ಟ್ ವಿಕೆಟ್ ಪಡೆದ ವಿಶ್ವದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.
7 / 7
1- ಮುತ್ತಯ್ಯ ಮುರಳೀಧರನ್: ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶ್ವ ದಾಖಲೆ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. ಮುರಳೀಧರನ್ ಕೇವಲ 144 ಇನಿಂಗ್ಸ್ಗಳ ಮೂಲಕ 500 ವಿಕೆಟ್ಗಳನ್ನು ಪೂರೈಸಿದ್ದರು.