Ravichandran Ashwin: ಪಾಕ್ ವೇಗಿಯ ಶ್ರೇಷ್ಠ ದಾಖಲೆ ಮುರಿದ ಅಶ್ವಿನ್..!

Ravichandran Ashwin: ನ್ಯೂಜಿಲೆಂಡ್ ವಿರುದ್ದ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಪಡೆದಿದ್ದ ಅಶ್ವಿನ್ ಇದೀಗ 2ನೇ ಇನಿಂಗ್ಸ್​ನಲ್ಲಿ ಒಂದು ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಒಟ್ಟು ವಿಕೆಟ್​ಗಳ ಸಂಖ್ಯೆಯನ್ನು 417 ಕ್ಕೇರಿಸಿದ್ದಾರೆ. ಈ ಮೂಲಕ ಪಾಕ್ ವೇಗಿ ವಾಸಿಂ ಅಕ್ರಂ ಅವರ 414 ವಿಕೆಟ್​ಗಳ ಶ್ರೇಷ್ಠ ದಾಖಲೆಯನ್ನು ಹಿಂದಿಕ್ಕಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Nov 28, 2021 | 10:31 PM

ಭಾರತ ಕ್ರಿಕೆಟ್ ತಂಡದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಪಾಕಿಸ್ತಾನದ ದಿಗ್ಗಜ ವಾಸಿಂ ಅಕ್ರಮ್ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ 417 ಪಡೆಯುವ ಮೂಲಕ ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್​ ಪಡೆದವರ ಪಟ್ಟಿಯಲ್ಲಿ ನಾಗಾಲೋಟ ಮುಂದುವರೆಸಿದ್ದಾರೆ.

1 / 5
ನ್ಯೂಜಿಲೆಂಡ್ ವಿರುದ್ದ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಪಡೆದಿದ್ದ ಅಶ್ವಿನ್ ಇದೀಗ 2ನೇ ಇನಿಂಗ್ಸ್​ನಲ್ಲಿ ಒಂದು ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಒಟ್ಟು ವಿಕೆಟ್​ಗಳ ಸಂಖ್ಯೆಯನ್ನು 417 ಕ್ಕೇರಿಸಿದ್ದಾರೆ. ಈ ಮೂಲಕ ಪಾಕ್ ವೇಗಿ ವಾಸಿಂ ಅಕ್ರಂ ಅವರ 414 ವಿಕೆಟ್​ಗಳ ಶ್ರೇಷ್ಠ ದಾಖಲೆಯನ್ನು ಹಿಂದಿಕ್ಕಿದ್ದಾರೆ.

2 / 5
ಅಷ್ಟೇ ಅಲ್ಲದೆ ಟೆಸ್ಟ್​ನಲ್ಲಿ 417 ವಿಕೆಟ್ ಪಡೆದಿರುವ ಹರ್ಭಜನ್ ಸಿಂಗ್ ದಾಖಲೆಯನ್ನು ಅಶ್ವಿನ್ ಸರಿಗಟ್ಟಿದ್ದು, ಇನ್ನೊಂದು ವಿಕೆಟ್ ಪಡೆದರೆ ಭಾರತದ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಭಾರತೀಯರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಲಿದ್ದಾರೆ.

3 / 5
ಈ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ ಅಗ್ರಸ್ಥಾನದಲ್ಲಿದ್ದು, ಕುಂಬ್ಳೆ ಟೆಸ್ಟ್​ ಕ್ರಿಕೆಟ್​ನಲ್ಲಿ 619 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 434 ವಿಕೆಟ್ ಪಡೆದಿರುವ ಕಪಿಲ್ ದೇವ್ 2ನೇ ಸ್ಥಾನದಲ್ಲಿದ್ದಾರೆ. ಇದೀಗ 417 ವಿಕೆಟ್​ಗಳೊಂದಿಗೆ ಹರ್ಭಜನ್ ಸಿಂಗ್ ಹಾಗೂ ಅಶ್ವಿನ್ ಜಂಟಿಯಾಗಿ 3ನೇ ಸ್ಥಾನ ಹಂಚಿಕೊಂಡಿದ್ದು, ಒಂದು ವಿಕೆಟ್ ಪಡೆದರೆ ಅಶ್ವಿನ್ ಭಜ್ಜಿಯನ್ನು ಹಿಂದಿಕ್ಕಿ 3ನೇ ಸ್ಥಾನವನ್ನು ಅಲಂಕರಿಸಲಿದ್ದಾರೆ.

4 / 5
ಇನ್ನು ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರುಗಳ ಪಟ್ಟಿಯಲ್ಲಿ ಸದ್ಯ ಅಶ್ವಿನ್ 13ನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ 800 ವಿಕೆಟ್​ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ 708 ವಿಕೆಟ್ ಪಡೆದಿರುವ ಆಸ್ಟ್ರೇಲಿಯಾದ ಶೇನ್ ವಾರ್ನ್​ 2ನೇ ಸ್ಥಾನದಲ್ಲಿದ್ದಾರೆ. ಅದೇ ರೀತಿ 632 ವಿಕೆಟ್ ಉರುಳಿಸಿರುವ ಇಂಗ್ಲೆಂಡ್​ನ ಜೇಮ್ಸ್ ಅಂಡರ್ಸನ್ 3ನೇ ಸ್ಥಾನವನ್ನು ಅಲಂಕರಿಸಿದ್ದಾರೆ.

5 / 5
Follow us