ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಅಶ್ವಿನ್ ಹಾಗೂ ಜಡೇಜಾ ಅವರ ಸ್ಪಿನ್ ಮೋಡಿಗೆ ತತ್ತರಿಸಿತು. 24.3 ಓವರ್ ಬೌಲಿಂಗ್ ಮಾಡಿದ್ದ ಅಶ್ವಿನ್ 60 ರನ್ ನೀಡಿ 5 ವಿಕೆಟ್ ಪಡೆದರೆ, ಜಡೇಜಾ 14 ಓವರ್ಗಳಲ್ಲಿ 26 ರನ್ ನೀಡಿ 3 ವಿಕೆಟ್ ಕಬಳಿಸಿದರು. ಪರಿಣಾಮ ವೆಸ್ಟ್ ಇಂಡೀಸ್ ತಂಡವು ಕೇವಲ 150 ರನ್ಗಳಿಗೆ ಆಲೌಟ್ ಆಯಿತು.