R Ashwin: ಹರ್ಭಜನ್ ಸಿಂಗ್ ದಾಖಲೆ ಸರಿಗಟ್ಟಿದ ಅಶ್ವಿನ್

| Updated By: ಝಾಹಿರ್ ಯೂಸುಫ್

Updated on: Jul 13, 2023 | 7:55 PM

Ravichandran Ashwin: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸ್ಪಿನ್ ಮಾಡಿ ಮಾಡಿರುವ ರವಿಚಂದ್ರನ್ ಅಶ್ವಿನ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.

1 / 7
ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್​ ಪ್ರಥಮ ಇನಿಂಗ್ಸ್​ನಲ್ಲಿ ರವಿಚಂದ್ರನ್ ಅಶ್ವಿನ್ 5 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಹರ್ಭಜನ್ ಸಿಂಗ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಅಶ್ವಿನ್ ಸರಿಗಟ್ಟಿದ್ದಾರೆ.

2 / 7
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಅಶ್ವಿನ್ ಹಾಗೂ ಜಡೇಜಾ ಅವರ ಸ್ಪಿನ್ ಮೋಡಿಗೆ ತತ್ತರಿಸಿತು. 24.3 ಓವರ್ ಬೌಲಿಂಗ್ ಮಾಡಿದ್ದ ಅಶ್ವಿನ್ 60 ರನ್ ನೀಡಿ 5 ವಿಕೆಟ್ ಪಡೆದರೆ, ಜಡೇಜಾ 14 ಓವರ್​ಗಳಲ್ಲಿ 26 ರನ್ ನೀಡಿ 3 ವಿಕೆಟ್ ಕಬಳಿಸಿದರು. ಪರಿಣಾಮ ವೆಸ್ಟ್ ಇಂಡೀಸ್ ತಂಡವು ಕೇವಲ 150 ರನ್​ಗಳಿಗೆ ಆಲೌಟ್ ಆಯಿತು.

3 / 7
ಇತ್ತ ಈ ಐದು ವಿಕೆಟ್​ಗಳೊಂದಿಗೆ ರವಿಚಂದ್ರನ್ ಅಶ್ವಿನ್ ಹಲವು ದಾಖಲೆಗಳನ್ನು ನಿರ್ಮಿಸಿದರು. ಅದರಲ್ಲೂ ಭಾರತ-ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಪಂದ್ಯದಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಉರುಳಿಸಿದ ಬೌಲರ್​ಗಳ ಪಟ್ಟಿಯಲ್ಲಿ ಸ್ಥಾನ ಪಡೆದರು.

4 / 7
ಅಲ್ಲದೆ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದ ಹರ್ಭಜನ್ ಸಿಂಗ್ ಅವರ ದಾಖಲೆಯನ್ನು ಸರಿಗಟ್ಟಿದರು. ಭಜ್ಜಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ ಒಟ್ಟು 5 ಬಾರಿ ಐದು ವಿಕೆಟ್​ಗಳನ್ನು ಪಡೆದಿದ್ದರು.

5 / 7
ಇದೀಗ ರವಿಚಂದ್ರನ್ ಅಶ್ವಿನ್ ಕೂಡ ವೆಸ್ಟ್ ಇಂಡೀಸ್ ವಿರುದ್ಧ 5ನೇ ಬಾರಿಗೆ 5 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಹರ್ಭಜನ್ ಸಿಂಗ್ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ.

6 / 7
 ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ವೆಸ್ಟ್ ಇಂಡೀಸ್​ನ ಮಾಜಿ ವೇಗಿ ಮಾಲ್ಕಮ್ ಮಾರ್ಷಲ್. ಟೀಮ್ ಇಂಡಿಯಾ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ ಮಾಲ್ಕಮ್ ಮಾರ್ಷಲ್ ಒಟ್ಟು 6 ಬಾರಿ 5 ವಿಕೆಟ್​ಗಳನ್ನು ಕಬಳಿಸಿದ್ದರು.

7 / 7
ಇದೀಗ ದ್ವಿತೀಯ ಸ್ಥಾನಕ್ಕೇರಿರುವ ರವಿಚಂದ್ರನ್ ಅಶ್ವಿನ್​ಗೆ ಈ ದಾಖಲೆಯನ್ನು ಮುರಿಯುವ ಅತ್ಯುತ್ತಮ ಅವಕಾಶ ಇದೆ. ಹೀಗಾಗಿ ವಿಂಡೀಸ್ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿದೆಯಾ ಕಾದು ನೋಡಬೇಕಿದೆ.