- Kannada News Photo gallery Cricket photos Ravichandran Ashwin needs only 14 wickets to create all time record in WTC
R Ashwin: ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿ ರವಿಚಂದ್ರನ್ ಅಶ್ವಿನ್
Ravichandran Ashwin: ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯು ಗುರುವಾರದಿಂದ ಶುರುವಾಗಲಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಒಂದು ವಿಕೆಟ್ ಕಬಳಿಸಿದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ 2ನೇ ಬೌಲರ್ ಎನಿಸಿಕೊಳ್ಳಲಿದ್ದಾರೆ. ಹಾಗೆಯೇ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಟೀಮ್ ಇಂಡಿಯಾ ಸ್ಪಿನ್ನರ್ಗೆ ಬೇಕಿರುವುದು ಕೇವಲ 14 ವಿಕೆಟ್ಗಳು ಮಾತ್ರ.
Updated on: Sep 17, 2024 | 9:30 AM

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿ ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಹಲವು ದಾಖಲೆಗಳನ್ನು ಬರೆಯುವ ಅವಕಾಶ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮುಂದಿದೆ. ಅದರಲ್ಲೂ ಈ ಸರಣಿಯ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಸ್ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿ ಬೌಲರ್ಗಳ ಪಟ್ಟಿಯಲ್ಲಿ ಅಶ್ವಿನ್ ಅಗ್ರಸ್ಥಾನಕ್ಕೇರಬಹುದು.

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಇತಿಹಾಸದಲ್ಲೇ ಅತೀ ಹೆಚ್ಚು ವಿಕೆಟ್ ಕಬಳಿಸಿದ ದಾಖಲೆ ಆಸ್ಟ್ರೇಲಿಯಾದ ನಾಥನ್ ಲಿಯಾನ್ ಹೆಸರಿನಲ್ಲಿದೆ. 43 ಟೆಸ್ಟ್ ಪಂದ್ಯಗಳ 78 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿರುವ ಲಿಯಾನ್ ಈವರೆಗೆ 187 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಮೂಲಕ WTC ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

ಇದೀಗ ಈ ದಾಖಲೆ ಮುರಿಯಲು ರವಿಚಂದ್ರನ್ ಅಶ್ವಿನ್ಗೆ ಬೇಕಿರುವುದು ಕೇವಲ 14 ವಿಕೆಟ್ಗಳು ಮಾತ್ರ. ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಅಶ್ವಿನ್ ಹದಿನಾಲ್ಕು ವಿಕೆಟ್ ಪಡೆದರೆ, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಳ್ಳಲಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಈವರೆಗೆ 35 ಟೆಸ್ಟ್ ಪಂದ್ಯಗಳನ್ನಾಡಿರುವ ಅಶ್ವಿನ್ 67 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 7794 ಎಸೆತಗಳನ್ನು ಎಸೆದು 174 ವಿಕೆಟ್ ಕಬಳಿಸಿದ್ದಾರೆ. ಅಂದರೆ WTC ನಲ್ಲಿ 200 ವಿಕೆಟ್ಗಳ ಮೈಲುಗಲ್ಲು ಮುಟ್ಟಲು ಅಶ್ವಿನ್ಗೆ ಬೇಕಿರುವುದು ಕೇವಲ 26 ವಿಕೆಟ್ಗಳು ಮಾತ್ರ.

ಒಂದು ವೇಳೆ ಬಾಂಗ್ಲಾದೇಶ್ ವಿರುದ್ಧದ 2 ಟೆಸ್ಟ್ ಪಂದ್ಯಗಳ 4 ಇನಿಂಗ್ಸ್ಗಳಿಂದ ಒಟ್ಟು 26 ವಿಕೆಟ್ ಕಬಳಿಸಿದರೆ ರವಿಚಂದ್ರನ್ ಅಶ್ವಿನ್ ಹೆಸರಿಗೆ ಹೊಸ ವಿಶ್ವ ದಾಖಲೆ ಸೇರ್ಪಡೆಯಾಗಲಿದೆ. ಹೀಗಾಗಿ ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಶ್ವಿನ್ ಕಡೆಯಿಂದ ಭರ್ಜರಿ ದಾಖಲೆಗಳನ್ನು ನಿರೀಕ್ಷಿಸಬಹುದು.




